
ನವದೆಹಲಿ: ಜಾಗತಿಕ ಭಾರತದ ಶಿಲ್ಪಿ, ಉದಾರ ಆರ್ಥಿಕತೆಯ ಪಿತಾಮಯ, ಸರ್ವಶ್ರೇಷ್ಠ ಹಣಕಾಸು ಸಚಿವ, ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಅವರ ಅಂತ್ಯಕ್ರಿಯೆ ದೆಹಲಿಯ ನಿಗಮ್ ಬೋಧ್ ಘಾಟ್‌ನಲ್ಲಿ ಸಕಲ ಸರ್ಕಾರಿ ಗೌರವಗಳೊಂದಿಗೆ ಸಿಖ್ ಸಂಪ್ರದಾಯದಂತೆ ನೆರವೇರಿಸಲಾಯ್ತು. ಡಿಸೆಂಬರ್ 26ರಂದು ರಾತ್ರಿ 8.06ಕ್ಕೆ ದೆಹಲಿಯ ಏಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ರಾತ್ರಿ 9.51ಕ್ಕೆ ಮನಮೋಹನ್ ಸಿಂಗ್ ನಿಧನರಾಗಿರುವ ಮಾಹಿತಿಯನ್ನು ವೈದ್ಯಾಧಿಕಾರಿಗಳು ಖಚಿತಪಡಿಸಿದರು. ಗುರುವಾರ ಉಸಿರಾಟದ ಸಮಸ್ಯೆಯಿಂದಾಗಿ ಮನಮೋಹನ್ ಸಿಂಗ್ ಪ್ರಜ್ಞೆ ಕಳೆದುಕೊಂಡಿದ್ದರು.
ಸಾರ್ವಜನಿಕರ ದರ್ಶನಕ್ಕಾಗಿ ದೆಹಲಿಯ ಎಐಸಿಸಿ ಕಚೇರಿಯಲ್ಲಿ ಮನಮೋಹನ್ ಸಿಂಗ್ ಅವರ ಪಾರ್ಥಿವ ಶರೀರವನ್ನು ಇರಿಸಲಾಗಿತ್ತು. ಇಂದು ಬೆಳಗ್ಗೆ ಸಿಂಗ್ ಅವರ ನಿವಾಸದಿದಂದ ಪಾರ್ಥಿವ ಶರೀರ ಎಐಸಿಸಿ ಕಚೇರಿಗೆ ತೆಗೆದುಕೊಂಡು ಬರಲಾಗಿತ್ತು. ಎಐಸಿಸಿ ಕಚೇರಿಯಿಂದ ನಿಗಮ್ ಬೋಧ್ ಘಾಟ್‌ವರೆಗೆ ಸೇನಾ ವಾಹನದಲ್ಲಿ ತೆಗೆದುಕೊಂಡು ಬರಲಾಗಿತ್ತು. ರಸ್ತೆಯುದ್ದಕ್ಕೂ ಸೇರಿದ್ದ ಜನರು, ಅಮರ್ ರಹೇ ಎಂದು ಘೋಷಣೆ ಕೂಗಿದ್ದರು.
ನಿಗಮ್ ಬೋಧ್ ಘಾಟ್‌ನಲ್ಲಿ ಮೂರು ಸೇನೆಗಳ ಮುಖ್ಯಸ್ಥರು, ರಾಷ್ಟ್ರಪತಿ ದ್ರೌಪದಿ ಮುರ್ಮು, ಪ್ರಧಾನಿ ನರೇಂದ್ರ ಮೋದಿ, ಗೃಹ ಸಚಿವ ಅಮಿತ್ ಶಾ, ಕೇಂದ್ರ ಸಚಿವ ರಾಜನಾಥ್ ಸಿಂಗ್, ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಲೋಕಸಭೆ ವಿಪಕ್ಷ ನಾಯಕ ರಾಹುಲ್ ಗಾಂಧಿ ಸೇರಿದಂತೆ ಹಲವು ನಾಯಕರು ಮಾಜಿ ಪ್ರಧಾನಿಗಳು ಪುಷ್ಪ ನಮನ ಸಲ್ಲಿಸಿದರು.
ಅಂತ್ಯಕ್ರಿಯೆ ವಿಳಂಬವಾಗಿದ್ದೇಕೆ?
ಡಾ| ಮನಮೋಹನ್ ಸಿಂಗ್ ಅವರ ಪುತ್ರಿ ಅಮೆರಿಕದಲ್ಲಿದ್ದಾರೆ. ಅವರ ಆಗಮನ ವಿಳಂಬವಾದ ಹಿನ್ನೆಲೆಯಲ್ಲಿ ಶುಕ್ರವಾರವೇ ನಡೆಯಬೇಕಿದ್ದ ಕ್ರಿಯೆಯನ್ನು ಶನಿವಾರಕ್ಕೆ ನಿಗದಿಪಡಿಸಲಾಗಿತ್ತು.
ಇದನ್ನೂ ಓದಿ: ಒಮ್ಮೆಯೂ ಗೆಲ್ಲದೇ ಮನಮೋಹನ್ ಸಿಂಗ್ ಕಿಂಗ್ ಆಗಿದ್ದು ಹೇಗೆ?
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ