92 ವರ್ಷದ ಮನಮೋಹನ್ ಸಿಂಗ್ ಗುರುವಾರ ದೆಹಲಿಯ ಏಮ್ಸ್ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ. ವಯೋಸಹಜ ಕಾಯಿಲೆಗಳಿಂದ ಬಳಲುತ್ತಿದ್ದ ಅವರು, ಆರೋಗ್ಯ ಹದಗೆಟ್ಟ ಹಿನ್ನೆಲೆಯಲ್ಲಿ ದಾಖಲಾಗಿದ್ದರು.
ನವದೆಹಲಿ (ಡಿ.26): ತೀವ್ರ ಆರೋಗ್ಯ ಹದಗೆಟ್ಟ ಹಿನ್ನಲೆಯಲ್ಲಿ ಗುರುವಾರ ದೆಹಲಿಯ ಏಮ್ಸ್ ಆಸ್ಪತ್ರೆಗೆ ದಾಖಲಾಗಿದ್ದ ಮನಮೋಹನ್ ಸಿಂಗ್ ಚಿಕಿತ್ಸೆ ಫಲಕಾರಿಯಾಗದೆ ನಿಧನರಾಗಿದ್ದಾರೆ. ಅವರಿಗೆ 92 ವರ್ಷ ವಯಸ್ಸಾಗಿತ್ತು. ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದ ಮನಮೋಹನ್ ಸಿಂಗ್ ಕಳೆದ ಕೆಲವು ತಿಂಗಳುಗಳಿಗೆ ಆಸ್ಪತ್ರೆಗೆ ದಾಖಲಾಗಿ ಬಿಡುಗಡೆ ಆಗುತ್ತಿದ್ದರು. ಗುರುವಾರ ಸಂಜೆಯ ವೇಳೆಗೆ ಆರೋಗ್ಯದಲ್ಲಿ ತೀವ್ರ ಏರುಪೇರು ಆಗಿದ್ದರಿಂದ ಅವರನ್ನು ಏಮ್ಸ್‌ಗೆ ದಾಖಲು ಮಾಡಲಾಗಿತ್ತು. ಈ ಬಗ್ಗೆ ರಾಬರ್ಟ್ ವಾದ್ರಾ ಟ್ವೀಟ್ ಮಾಡಿದ್ದು, "ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಅವರ ನಿಧನದ ಬಗ್ಗೆ ತಿಳಿದು ನನಗೆ ತುಂಬಾ ದುಃಖವಾಗಿದೆ. ಅವರ ಕುಟುಂಬ ಮತ್ತು ಪ್ರೀತಿಪಾತ್ರರಿಗೆ ನನ್ನ ಆಳವಾದ ಸಂತಾಪಗಳು. ನಮ್ಮ ದೇಶಕ್ಕೆ ನೀವು ಮಾಡಿದ ಸೇವೆಗೆ ಧನ್ಯವಾದಗಳು. ನಿಮ್ಮ ಆರ್ಥಿಕ ಕ್ರಾಂತಿಗಾಗಿ ನೀವು ಯಾವಾಗಲೂ ನೆನಪಿನಲ್ಲಿರುತ್ತೀರಿ ಮತ್ತು ಪ್ರಗತಿಪರ ಬದಲಾವಣೆಗಳನ್ನು ನೀವು ದೇಶಕ್ಕೆ ತಂದಿದ್ದೀರಿ' ಎಂದು ಬರೆದುಕೊಂಡಿದ್ದಾರೆ.
ಆದರೆ, ಟ್ವೀಟ್‌ಪೋಸ್ಟ್ ಮಾಡಿದ ಕೆಲ ಹೊತ್ತಿನಲ್ಲಿ ಅದನ್ನು ಡಿಲೀಟ್ ಕೂಡ ಮಾಡಿದ್ದರಾದರೂ, ಇದನ್ನು ಎಎನ್‌ಐ ಪೋಸ್ಟ್ ಮಾಡಿದೆ. ವಯನಾಡ್ ಸಂಸದೆ ಪ್ರಿಯಾಂಕಾ ಗಾಂಧಿ ಕೂಡ ಏಮ್ಸ್ ಆಸ್ಪತ್ರೆಗೆ ಆಗಮಿಸಿದ್ದಾರೆ. ಏಮ್ಸ್ ಆಸ್ಪತ್ರೆ ಅಧಿಕೃತವಾಗಿ ಘೋಷಣೆ ಮಾಡುವ ಮುನ್ನವೇ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ, ಸುಧಾಕರ್ ಮನಮೋಹನ್ ಸಿಂಗ್ ನಿಧನದ ಬಗ್ಗೆ ಸುದ್ದಿಗಳನ್ನು ಹಂಚಿಕೊಂಡಿದ್ದರು. ಬಳಿಕ ಕಾಂಗ್ರೆಸ್ ಮುಖವಾಣಿ ನ್ಯಾಷನಲ್ ಹೆರಾಲ್ಡ್ ಈ ಸುದ್ದಿಯನ್ನು ಅಧಿಕೃತವಾಗಿ ಘೋಷಣೆ ಮಾಡಿದೆ.
undefined
Breaking: ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಏಮ್ಸ್ ಆಸ್ಪತ್ರೆಗೆ ದಾಖಲು!
ಹಿರಿಯ ಕಾಂಗ್ರೆಸ್ ನಾಯಕ ಮನಮೋಹನ್ ಸಿಂಗ್ ಅವರು ದೀರ್ಘಕಾಲದ ಅನಾರೋಗ್ಯದಲ್ಲಿದ್ದರು. ಖ್ಯಾತ ಅರ್ಥಶಾಸ್ತ್ರಜ್ಞ ಮತ್ತು ರಾಜನೀತಿಜ್ಞರಾಗಿರುವ ಸಿಂಗ್ ಅವರ ಆರೋಗ್ಯ ಹದಗೆಟ್ಟ ಹಿನ್ನೆಲೆಯಲ್ಲಿ ಗುರುವಾರ ಸಂಜೆ ದೆಹಲಿಯ ಏಮ್ಸ್‌ಗೆ ದಾಖಲಾಗಿದ್ದರು. ಮನ್‌ಮೋಹನ್ ಸಿಂಗ್ ಅವರು ಇತ್ತೀಚಿನ ವರ್ಷಗಳಲ್ಲಿ ಆರೋಗ್ಯದ ಕಾರಣಗಳಿಂದ ರಾಜಕೀಯದಿಂದ ದೂರವಿದ್ದರು ಮತ್ತು 2024ರ ಆರಂಭದಿಂದಲೂ ಅವರ ಆರೋಗ್ಯ ಚೆನ್ನಾಗಿರಲಿಲ್. 2024ರ ಜನವರಿಯಲ್ಲಿ ಅವರು ಕೊನೆಯ ಬಾರಿಗೆ ಸಾರ್ವಜನಿಕವಾಗಿ ಕಾಣಿಸಿಕೊಂಡಿದ್ದರು. ಮಗಳ ಪುಸ್ತಕ ಬಿಡುಗಡೆ ಸಮಾರಂಭದಲ್ಲಿ ಅವರು ಭಾಗಿಯಾಗಿದ್ದರು.
ಯಾವ ಪ್ರಧಾನಿಯೂ ಇಷ್ಟೊಂದು ಸುಳ್ಳು, ದ್ವೇಷದ ಭಾಷಣ ಮಾಡಿಲ್ಲ: ಮೋದಿ ವಿರುದ್ಧ ಮನಮೋಹನ್ ಸಿಂಗ್ ವಾಗ್ದಾಳಿ
ಅವರು ಏಪ್ರಿಲ್ 2024 ರಲ್ಲಿ ರಾಜ್ಯಸಭೆಯಿಂದ ನಿವೃತ್ತರಾಗಿದ್ದರು. ಮನಮೋಹನ್ ಸಿಂಗ್ ಅವರು 2004 ರಿಂದ 2014 ರವರೆಗೆ ಕಾಂಗ್ರೆಸ್ ನೇತೃತ್ವದ ಯುನೈಟೆಡ್ ಪ್ರೋಗ್ರೆಸ್ಸಿವ್ ಅಲೈಯನ್ಸ್ (ಯುಪಿಎ) ಅಡಿಯಲ್ಲಿ ಸಮ್ಮಿಶ್ರ ಸರ್ಕಾರವನ್ನು ಮುನ್ನಡೆಸುವ ಮೂಲಕ ಸತತ ಎರಡು ಬಾರಿ ಪ್ರಧಾನ ಮಂತ್ರಿಯಾಗಿ ಸೇವೆ ಸಲ್ಲಿಸಿದರು. ಅವರು 1991 ರಲ್ಲಿ ಪಿವಿ ನರಸಿಂಹ ರಾವ್ ಸರ್ಕಾರದಲ್ಲಿ ಹಣಕಾಸು ಸಚಿವರಾಗಿ ಭಾರತದ ಆರ್ಥಿಕ ಉದಾರೀಕರಣದ ವಾಸ್ತುಶಿಲ್ಪಿಯಾಗಿದ್ದರು.
ಪ್ರಧಾನ ಮಂತ್ರಿಯಾಗಿ ಸಿಂಗ್ ಅವರ ಅಧಿಕಾರಾವಧಿಯು ಅಭೂತಪೂರ್ವ ಆರ್ಥಿಕ ಬೆಳವಣಿಗೆಯಿಂದ ಗುರುತಿಸಲ್ಪಟ್ಟಿದೆ, ಅದು ಭಾರತವನ್ನು ವಿಶ್ವದ ಅತ್ಯಂತ ವೇಗವಾಗಿ ಬೆಳೆಯುತ್ತಿರುವ ಪ್ರಮುಖ ಆರ್ಥಿಕತೆ ಮತ್ತು MGNREGA ಮತ್ತು ಮಾಹಿತಿ ಹಕ್ಕು ಕಾಯಿದೆಯಂತಹ ಹೆಗ್ಗುರುತು ಸಾಮಾಜಿಕ ಸುಧಾರಣೆಗಳನ್ನು ಪ್ರಾರಂಭಿಸಿತು. ಅವರು ಐತಿಹಾಸಿಕ ಇಂಡೋ-ಯುಎಸ್ ನಾಗರಿಕ ಪರಮಾಣು ಒಪ್ಪಂದದ ಬಗ್ಗೆ ಮಾತುಕತೆ ನಡೆಸಿದರು, ಭಾರತಕ್ಕೆ ದಶಕಗಳ ಪರಮಾಣು ಪ್ರತ್ಯೇಕತೆಯನ್ನು ಕೊನೆಗೊಳಿಸಿದರು.
ಆದರೂ, ಅವರ ಅಧಿಕಾರಾವಧಿಯು 2ಜಿ ತರಂಗಾಂತರ ಪ್ರಕರಣ ಮತ್ತು ಕಲ್ಲಿದ್ದಲು ನಿಕ್ಷೇಪ ಹಂಚಿಕೆ ವಿವಾದದಂತಹ ಭ್ರಷ್ಟಾಚಾರ ಹಗರಣಗಳಿಂದ ಕಪ್ಪು ಚುಕ್ಕೆ ಎದುರಿಸಿತ್ತು. ಹಣಕಾಸು ಸಚಿವರಾಗಿ ಸಿಂಗ್ ಅವರ ಪಾತ್ರವನ್ನು ರಾಷ್ಟ್ರದ ಆರ್ಥಿಕ ಇತಿಹಾಸದಲ್ಲಿ ಒಂದು ಮಹತ್ವದ ತಿರುವು ಎಂದು ಪರಿಗಣಿಸಲಾಗಿದೆ. ಪಾವತಿ ಸಮತೋಲನ ಸಮಸ್ಯೆ ಮತ್ತು ಕ್ಷೀಣಿಸುತ್ತಿರುವ ವಿದೇಶಿ ಮೀಸಲು ಸಮಸ್ಯೆಯೊಂದಿಗೆ ತೀವ್ರ ಆರ್ಥಿಕ ಬಿಕ್ಕಟ್ಟನ್ನು ಎದುರಿಸುತ್ತಿದ್ದ ಹಂತದಲ್ಲಿ ಅವರು ಆರ್ಥಿಕತೆಯನ್ನು ಉದಾರೀಕರಣಗೊಳಿಸುವ, ಖಾಸಗೀಕರಣವನ್ನು ಉತ್ತೇಜಿಸುವ ಮತ್ತು ಜಾಗತಿಕ ಮಾರುಕಟ್ಟೆಗಳಲ್ಲಿ ಭಾರತವನ್ನು ಸಂಯೋಜಿಸುವ ಪರಿವರ್ತಕ ಸುಧಾರಣೆಗಳನ್ನು ಪರಿಚಯಿಸಿದರು. ಈ ಕ್ರಮಗಳು ಬಿಕ್ಕಟ್ಟನ್ನು ತಪ್ಪಿಸಿದವು ಮಾತ್ರವಲ್ಲದೆ ಭಾರತವು ವಿಶ್ವದ ಅತ್ಯಂತ ವೇಗವಾಗಿ ಬೆಳೆಯುತ್ತಿರುವ ಆರ್ಥಿಕತೆಗಳಲ್ಲಿ ಒಂದಾಗುವ ಹಾದಿಯಲ್ಲಿದೆ.
Robert Vadra tweets, "I am deeply saddened to learn of the passing of former Prime Minister Manmohan Singh ji. My deepest condolences to his family and loved ones. Thank you for your service to our Nation. You will always be remembered for your Economic revolution and the… pic.twitter.com/WwRZlYirvn
— ANI (@ANI)