ಉತ್ತರ ಪ್ರದೇಶದ ಮಾಜಿ ಸಿಎಂ, ಬಿಜೆಪಿ ಹಿರಿಯ ನಾಯಕ ಕಲ್ಯಾಣ್ ಸಿಂಗ್ ನಿಧನ

By Suvarna News  |  First Published Aug 21, 2021, 10:49 PM IST

* ಉತ್ತರ ಪ್ರದೇಶದ ಮಾಜಿ ಮುಖ್ಯಮಂತ್ರಿ 'ಕಲ್ಯಾಣ್ ಸಿಂಗ್' ಇನ್ನಿಲ್ಲ
* ಚಿಕಿತ್ಸೆ ಫಲಕಾರಿಯಾಗದೇ ಇಂದು (ಆ.21) ಕೊನೆಯುಸಿರು 
* ಬಹುಅಂಗಾಂಗ ವೈಫಲ್ಯದಿಂದ ಬಳಲುತ್ತಿದ್ದ ಕಲ್ಯಾಣ್ ಸಿಂಗ್


ಲಕ್ನೋ, (ಆ.21):  ಬಿಜೆಪಿ ಹಿರಿಯ ನಾಯಕ, ಉತ್ತರ ಪ್ರದೇಶದ ಮಾಜಿ ಮುಖ್ಯಮಂತ್ರಿ ಕಲ್ಯಾಣ್ ಸಿಂಗ್ ಅವರು  (89) ನಿಧನರಾಗಿದ್ದಾರೆ.

ಬಹುಅಂಗಾಂಗ ವೈಫಲ್ಯದಿಂದ ಬಳಲುತ್ತಿದ್ದ ಕಲ್ಯಾಣ್ ಸಿಂಗ್ ಅವರನ್ನ ಲಕ್ನೋದ ಸಂಜಯ್ ಗಾಂಧಿ ಪೋಸ್ಟ್​ ಗ್ರ್ಯಾಜುವೇಟ್​ ಇನ್​ಸ್ಟಿಟ್ಯೂಟ್​ ಆಫ್​ ಮೆಡಿಕಲ್ ಸೈನ್ಸಸ್​( ಎಸ್​ಜಿಪಿಜಿಐ) ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದ್ರೆ, ಚಿಕಿತ್ಸೆ ಫಲಕಾರಿಯಾಗದೇ ಇಂದು (ಆ.21) ಕೊನೆಯುಸಿರು ಎಳೆದರು.

Tap to resize

Latest Videos

ಬಾಬರಿ ಮಸೀದಿ ಧ್ವಂಸ ಪ್ರಕರಣ: ನ್ಯಾಯಾಲಯಕ್ಕೆ ಶರಣಾದ ಕಲ್ಯಾಣ್ ಸಿಂಗ್!

ಬಹುಅಂಗಾಂಗ ವೈಫಲ್ಯದಿಂದ ಬಳಲುತ್ತಿದ್ದ ಇವರ ಆರೋಗ್ಯ ಹದಗೆಟ್ಟಿದ್ದರಿಂದ ಲಕ್ನೋದ ಸಂಜಯ್ ಗಾಂಧಿ ಪೋಸ್ಟ್​ ಗ್ರ್ಯಾಜುವೇಟ್​ ಇನ್​ಸ್ಟಿಟ್ಯೂಟ್​ ಆಫ್​ ಮೆಡಿಕಲ್ ಸೈನ್ಸಸ್​( ಎಸ್​ಜಿಪಿಜಿಐ) ಆಸ್ಪತ್ರೆಗೆ ಜುಲೈ 4ರಂದೇ ಇವರನ್ನು ಸೇರಿಸಲಾಗಿತ್ತು.

ಎಸ್​ಜಿಪಿಜಿಐ ಆಸ್ಪತ್ರೆಯ ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ಪಡೆಯುತ್ತಿದ್ದರೂ ಅವರ ಆರೋಗ್ಯ ಪರಿಸ್ಥಿತಿ ನಿಯಂತ್ರಣಕ್ಕೆ ಬಂದಿರಲಿಲ್ಲ. ಸಾಕಷ್ಟು ಚಿಕಿತ್ಸೆ ನೀಡಿ ಗುಣಪಡಿಸಲು ಯತ್ನಿಸಿದ್ದರೂ ಸಫಲವಾಗಲಿಲ್ಲ.

1991, ಜೂನ್‌ನಿಂದ 1992 ಡಿಸೆಂಬರ್​ವರೆಗೆ ಮತ್ತು 1997 ಸೆಪ್ಟೆಂಬರ್​ನಿಂದ 1999 ನವೆಂಬರ್​ವರೆಗೆ ಅವರು ಎರಡು ಬಾರಿ ಉತ್ತರ ಪ್ರದೇಶದ ಮುಖ್ಯಮಂತ್ರಿಯಾಗಿದ್ದರು. ರಾಜಸ್ಥಾನದ ರಾಜ್ಯಪಾಲರಾಗಿಯೂ ಸೇವೆ ಸಲ್ಲಿಸಿದ್ದರು. 

ಅವರ ಮೊದಲ ಅಧಿಕಾರಾವಧಿಯಲ್ಲಿ ಅಯೋಧ್ಯಾದ ಬಾಬ್ರೀ ಮಸೀದಿಯನ್ನು ಕರ ಸೇವಕರು ನಾಶಪಡಿಸಿದ ಘಟನೆಯೂ ನಡೆದಿತ್ತು. ಬಾಬ್ರೀ ಮಸೀದಿ ಧ್ವಂಸಗೊಂಡ ದಿನವೇ ಕಲ್ಯಾಣ್ ಸಿಂಗ ಮುಖ್ಯಮಂತ್ರಿ ಪದವಿಗೆ ರಾಜೀನಾಮೆ ನೀಡಿದ್ದರು

 ಕಲ್ಯಾಣ್ ಸಿಂಗ್ ನಿಧನಕ್ಕೇ ಪಿಎಂ ನರೇಂದ್ರ ಮೋದಿ ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯ ನಾಥ್ ಸೇರಿದಂತೆ ಹಲವು ನಾಯಕರುಗಳು ಸಂತಾಪ ವ್ಯಕ್ತಪಡಿಸಿದ್ದಾರೆ.

ಬೊಮ್ಮಾಯಿ ಸಂತಾಪ
ಉತ್ತರಪ್ರದೇಶದ ಮಾಜಿ ಮುಖ್ಯಮಂತ್ರಿ ಶ್ರೀ ಕಲ್ಯಾಣ್ ಸಿಂಗ್ ಜೀ ಅವರ ನಿಧನಕ್ಕೆ ನಮ್ಮ ಕರ್ನಾಟಕ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ. 

ದೇಶ ಒಬ್ಬ ಹಿರಿಯ ನಾಯಕನನ್ನು ಕಳೆದುಕೊಂಡಿದೆ. ಮುಖ್ಯಮಂತ್ರಿಗಳಾಗಿ, ರಾಜ್ಯಪಾಲರಾಗಿ ಅವರ ಸೇವೆ, ಸಾಮಾಜಿಕ ನ್ಯಾಯ ಮತ್ತು ನಿರ್ಲಕ್ಷಿತ ಸಮುದಾಯಗಳ ಏಳಿಗೆಗಾಗಿ ಅವರ ಬದ್ಧತೆ ಸ್ಫೂರ್ತಿದಾಯಕ...

ಅವರ ಆತ್ಮಕ್ಕೆ ಸದ್ಗತಿಯನ್ನು ಕೋರುತ್ತಾ, ಅವರ ಕುಟುಂಬದವರಿಗೆ, ಲಕ್ಷಾಂತರ ಕಾರ್ಯಕರ್ತರು ಮತ್ತು ಅಭಿಮಾನಿಗಳಿಗೆ ಆ ಮೇರು ನಾಯಕನ ಅಗಲಿಕೆಯ ನೋವನ್ನು ಭರಿಸುವ ಶಕ್ತಿಯನ್ನು ದೇವರು ನೀಡಲಿ ಎಂದು ಪ್ರಾರ್ಥಿಸುವುದಾಗಿ ಮುಖ್ಯಮಂತ್ರಿಗಳು ತಮ್ಮ ಶೋಕ ಸಂದೇಶದಲ್ಲಿ ತಿಳಿಸಿದ್ದಾರೆ....

ಉತ್ತರಪ್ರದೇಶದ ಮಾಜಿ ಮುಖ್ಯಮಂತ್ರಿ ಶ್ರೀ ಕಲ್ಯಾಣ್ ಸಿಂಗ್ ಜೀ ಅವರ ನಿಧನಕ್ಕೆ ಮುಖ್ಯಮಂತ್ರಿ ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ.

ದೇಶ ಒಬ್ಬ ಹಿರಿಯ ನಾಯಕನನ್ನು ಕಳೆದುಕೊಂಡಿದೆ. ಮುಖ್ಯಮಂತ್ರಿಗಳಾಗಿ, ರಾಜ್ಯಪಾಲರಾಗಿ ಅವರ ಸೇವೆ, ಸಾಮಾಜಿಕ ನ್ಯಾಯ ಮತ್ತು ನಿರ್ಲಕ್ಷಿತ ಸಮುದಾಯಗಳ ಏಳಿಗೆಗಾಗಿ ಅವರ ಬದ್ಧತೆ ಸ್ಫೂರ್ತಿದಾಯಕ. (1/2)

— CM of Karnataka (@CMofKarnataka)
click me!