ತಿರುಪತಿ ಪ್ರಸಾದ ಕಲಬೆರಕೆ ಪ್ರಕರಣ: ನಾಲ್ವರ ಬಂಧನ

Published : Feb 10, 2025, 10:24 AM IST
ತಿರುಪತಿ ಪ್ರಸಾದ ಕಲಬೆರಕೆ ಪ್ರಕರಣ: ನಾಲ್ವರ ಬಂಧನ

ಸಾರಾಂಶ

ತಿರುಪತಿ ತಿಮ್ಮಪ್ಪನ ದೇಗುಲದ ಪ್ರಸಾದ ಕಲಬೆರಕೆ ವಿವಾದಕ್ಕೆ ಸಂಬಂಧಿಸಿದಂತೆ ಸಿಬಿಐ ಅಧಿಕಾರಿಗಳು ನಾಲ್ವರನ್ನು ಬಂಧಿಸಿದ್ದಾರೆ. ಟೆಂಡರ್‌ ಪಡೆಯುವ ಹಂತದಿಂದ ಪೂರೈಕೆ ತನಕ ನಿಯಮ ಉಲ್ಲಂಘಿಸಿದ ಆರೋಪದಡಿ ನಾಲ್ವರನ್ನು ಬಂಧಿಸಲಾಗಿದೆ. 

ತಿರುಪತಿ: ದೇಶವ್ಯಾಪಿ ಭಾರೀ ಚರ್ಚೆಗೆ ಗ್ರಾಸವಾಗಿದ್ದ ತಿರುಪತಿ ತಿಮ್ಮಪ್ಪನ ದೇಗುಲದ ಪ್ರಸಾದ ಕಲಬೆರಕೆ ವಿವಾದಕ್ಕೆ ಸಂಬಂಧಿಸಿದಂತೆ ತನಿಖೆ ನಡೆಸುತ್ತಿರುವ ಸಿಬಿಐ ಅಧಿಕಾರಿಗಳು ನಾಲ್ವರನ್ನು ಬಂಧಿಸಿದ್ದಾರೆ. ಟೆಂಡರ್‌ ಪಡೆಯುವ ಹಂತದಿಂದ ಪೂರೈಕೆ ತನಕ ನಿಯಮ ಉಲ್ಲಂಘಿಸಿದ ಆರೋಪದಡಿ ನಾಲ್ವರನ್ನು ಭಾನುವಾರ ಬಂಧಿಸಲಾಗಿದೆ.

ಬಂಧಿತರನ್ನು ಉತ್ತರಾಖಂಡ ರಾಜ್ಯದ ರೂರ್ಕಿಯ ಭೋಲೆ ಬಾಬಾ ಡೈರಿಯ ಮಾಜಿ ನಿರ್ದೇಶಕರಾದ ವಿಪಿನ್ ಜೈನ್ ಮತ್ತು ಪೊಮಿಲ್‌ ಜೈನ್‌, ಪೂನಂಬಾಕ್ಕಂನ ವೈಷ್ಣವಿ ಡೈರಿಯ ಸಿಇಒ ಅಪೂರ್ವ ವಿನಯ್‌ ಕಾಂತ್ ಚಾವ್ಡಾ, ದುಂಡಿಗಲ್‌ನ ಎಆರ್‌ ಡೈರಿಯ ಎಂಡಿ ರಾಜು ರಾಜಶೇಖರನ್ ಅವರನ್ನು ಪೊಲೀಸರು ಬಂಧಿಸಿದ್ದಾರೆ.

ಇದನ್ನೂ ಓದಿ: ತಿರುಪತಿ ಭಕ್ತರಿಗೆ ಅನ್ನಪ್ರಸಾದದ ಜೊತೆ ಮಸಾಲೆ ವಡೆ ನೀಡಲು ಟಿಟಿಡಿ ತೀರ್ಮಾನ

ತುಪ್ಪ ಪೂರೈಕೆಯ ನೆಪದಲ್ಲಿ ಈ ಆರೋಪಿಗಳು ಅನೇಕ ನಿಯಮಗಳನ್ನು ಉಲ್ಲಂಘನೆ ಮಾಡಿರುವುದು ದೃಢವಾಗಿದೆ. ತುಪ್ಪದ ಟೆಂಡರ್‌ ಪಡೆಯಲು ನಕಲಿ ದಾಖಲೆಗಳು, ಸೀಲ್ ಬಳಕೆ ಮಾಡಿದ್ದಾರೆ. ಜೊತೆಗೆ ದಾಖಲೆಗಳನ್ನು ತಿರುಚಲಾಗಿದೆ, ಅಲ್ಲದೇ ತುಪ್ಪ ಪೂರೈಕೆಯಲ್ಲಿಯೂ ವ್ಯತ್ಯಾಸ ನಡೆದಿದೆ ಎನ್ನುವ ಕಾರಣಕ್ಕೆ ಸಿಬಿಐ ಅಧಿಕಾರಿಗಳು ನಾಲ್ವರನ್ನು ಬಂಧಿಸಿದ್ದಾರೆ. ಈ ಘಟನೆ ಬಳಿಕ ಟಿಟಿಡಿ, ಮರಳಿ ಕರ್ನಾಟಕದ ಕೆಎಂಎಫ್‌ನಿಂದ ತುಪ್ಪ ಮರುಖರೀದಿಗೆ ಮುಂದಾಗಿತ್ತು.

ಇದನ್ನೂ ಓದಿ: TTD staff notice: ಅನ್ಯ ಧರ್ಮ ಪಾಲಿಸುತ್ತಿದ್ದ 18 ಸಿಬ್ಬಂದಿಗೆ ಟಿಟಿಡಿ ನೋಟಿಸ್‌! Yamini Sharma | Suvarna News

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

Read more Articles on
click me!

Recommended Stories

Suvarna Special: ಸಂನ್ಯಾಸಿ ಸಿಂಹಾಸನ.. ಸಂಘ ಸಪ್ತಕೋಟಿ..! ಯೋಗಿ ಪಟ್ಟಕ್ಕೆ ಏಳು ಸುತ್ತಿನ ಕೋಟೆ ಕಟ್ಟುತ್ತಿದೆ RSS..!
ರಾಷ್ಟ್ರಪತಿಯೂ ಅಲ್ಲ, ಪ್ರಧಾನಿಯೂ ಅಲ್ಲ.. ಕಾರ್‌ನಿಂದ ಇಳಿದ ಬಳಿಕ ಪುಟಿನ್‌ ಶೇಕ್‌ಹ್ಯಾಂಡ್‌ ಮಾಡಿದ್ದು ಇವರಿಗೆ..