
ನವದೆಹಲಿ: ಬ್ಯಾಂಕ್‌ಗಳಲ್ಲಿ ವಾರಕ್ಕೆ 5 ದಿನ ಮಾತ್ರ ಕೆಲಸದ ಅವಧಿ ಸೇರಿದಂತೆ ವಿವಿಧ ಬೇಡಿಕೆ ಈಡೇರಿಸುಂತೆ ಆಗ್ರಹಿಸಿ ವಿವಿಧ ಬ್ಯಾಂಕ್ ಸಂಘಟನೆಗಳು ಜ.27ಕ್ಕೆ ಬ್ಯಾಂಕ್ ಮುಷ್ಕರಕ್ಕೆ ಕರೆ ನೀಡಿವೆ. ಪರಿಣಾಮ ಜ.25 ರಿಂದ 4 ದಿನಗಳ ಕಾಲ ಗ್ರಾಹಕರಿಗೆ ಬ್ಯಾಂಕ್ ಸೇವೆಯಲ್ಲಿ ವ್ಯತ್ಯಯವಾಗುವ ಸಾಧ್ಯತೆಯಿದೆ.
ಜ.24 (4ನೇ ಶನಿವಾರ), ಜ.25 (ಭಾನುವಾರ), ಜ.26ರಂದು (ಗಣರಾಜ್ಯೋತ್ಸವ) ಬ್ಯಾಂಕ್‌ಗಳಿಗೆ ಸರ್ಕಾರ ರಜೆ ಇರಲಿದೆ. ಅದರ ಮಾರನೇ ದಿನ ಮುಷ್ಕರಕ್ಕೆ ಕರೆ ಕೊಡಲಾಗಿದೆ. ಹೀಗಾಗಿ 4 ದಿನ ಬ್ಯಾಂಕ್ ಸೇವೆಗಳಲ್ಲಿ ವ್ಯತ್ಯಯದ ಸಾಧ್ಯತೆ ಇದೆ.
9 ಬ್ಯಾಂಕ್ ಒಕ್ಕೂಟಗಳನ್ನು ಪ್ರತಿನಿಧಿಸುವ ಯುನೈಟೆಡ್ ಫೋರಮ್ ಆಫ್ ಬ್ಯಾಂಕ್ ಯೂನಿಯನ್( ಯುಎಫ್‌ಬಿಯು) ಸಂಘಟನೆಯಲ್ಲಿ ಬ್ಯಾಂಕ್ ನೌಕರರು ಮುಷ್ಕರಕ್ಕೆ ಕರೆ ನೀಡಿದ್ದಾರೆ. ‘ಕೆಲಸದ ಒತ್ತಡದಿಂದ ಮುಕ್ತಿ ಪಡೆಯುವುದಕ್ಕಾಗಿ ವಾರಕ್ಕೆ ಎರಡು ದಿನ ರಜೆ ನೀಡಬೇಕು. ಕೆಲಸವನ್ನು ಸರಿದೂಗಿಸಲು ಸೋಮವಾರದಿಂದ ಶುಕ್ರವಾರದವರೆಗೆ 40 ಗಂಟೆ ಹೆಚ್ಚಿಗೆ ಕೆಲಸ ಮಾಡುತ್ತೇವೆ’ ಎನ್ನುವುದು ನೌಕರರ ಬೇಡಿಕೆ.
2024ರ ಮಾರ್ಚ್‌ನಲ್ಲಿ ನಡೆದ ವೇತನ ಪರಿಷ್ಕರಣೆ ಸಂದರ್ಭದಲ್ಲಿಯೂ ಈ ಬಗ್ಗೆ ಮಾತುಕತೆ ನಡೆದಿತ್ತು. ಆದರೆ ಅದು ಕಾರ್ಯರೂಪಕ್ಕೆ ಬಂದಿರಲಿಲ್ಲ. ಹೀಗಾಗಿ ಶೀಘ್ರ ಜಾರಿಗೆ ಆಗ್ರಹಿಸಿ ಮುಷ್ಕರದ ಹಾದಿ ಹಿಡಿದಿದ್ದಾರೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ