
ನವದೆಹಲಿ(ಜೂ.21): ವಿಶ್ವ ಯೋಗದಿನವಾದ ಜೂ.21ರಿಂದ 18 ವರ್ಷ ಮೇಲ್ಪಟ್ಟ ದೇಶದ ಎಲ್ಲಾ ನಾಗರಿಕರಿಗೆ ಕೇಂದ್ರ ಸರ್ಕಾರ ಉಚಿತ ಲಸಿಕೆಯನ್ನು ವಿತರಿಸಲಿದೆ. ಜೂ.7ರಂದು ದೇಶವನ್ನು ಉದ್ದೇಶಿಸಿ ಭಾಷಣ ಮಾಡಿದ್ದ ಪ್ರಧಾನಿ ನರೇಂದ್ರ ಮೋದಿ ಈ ಘೋಷಣೆ ಮಾಡಿದ್ದರು.
ಇಷ್ಟುದಿನಗಳ ಕಾಲ 45 ವರ್ಷ ಮೇಲ್ಪಟ್ಟವರಿಗೆ ವಿತರಿಸಲು ಮಾತ್ರವೇ ರಾಜ್ಯಗಳಿಗೆ ಕೇಂದ್ರ ಸರ್ಕಾರ ಉಚಿತ ಲಸಿಕೆಯನ್ನು ಒದಗಿಸುತ್ತಿತ್ತು. ಒಟ್ಟು ಲಸಿಕೆಯಲ್ಲಿ ಕೇಂದ್ರ ಸರ್ಕಾರ ಶೇ.50, ರಾಜ್ಯ ಸರ್ಕಾರ ಶೇ.25, ಖಾಸಗಿ ಆಸ್ಪತ್ರೆಗಳಿಗೆ ಶೇ.25ರಷ್ಟುಲಸಿಕೆ ಖರೀದಿಗೆ ಅವಕಾಶ ನೀಡಲಾಗಿತ್ತು. ಆದರೆ, ಕೇಂದ್ರೀಕೃತವಾಗಿ ಲಸಿಕೆ ವಿತರಿಸುವ ಉದ್ದೇಶದಿಂದ ಲಸಿಕೆ ತಯಾರಿಕಾ ಕಂಪನಿಗಳು ಉತ್ಪಾದಿಸುವ ಶೇ.75ರಷ್ಟುಲಸಿಕೆಯನ್ನು ಕೇಂದ್ರ ಸರ್ಕಾರವೇ ಖರೀದಿಸಿ ರಾಜ್ಯಗಳಿಗೆ ಉಚಿತವಾಗಿ ವಿತರಿಸಲಿದೆ. ಶೇ.25ರಷ್ಟುಲಸಿಕೆಗಳನ್ನು ಖಾಸಗಿ ಆಸ್ಪತ್ರೆಗಳು ಖರೀದಿಸುವುದಕ್ಕೆ ಅವಕಾಶ ನೀಡಲಾಗಿದೆ.
ಲಸಿಕೆ ನೀಡಿಕೆ ಹೇಗೆ?
ಲಸಿಕೆ ಪಡೆಯಲು 18 ವರ್ಷ ಮೇಲ್ಪಟ್ಟವರು ಕೋವಿನ್ ವೆಬ್ಸೈಟ್ನಲ್ಲಿ ನೋಂದಣಿ ಮಾಡಿಕೊಳ್ಳಬೇಕಿದೆ. 45 ವರ್ಷ ಮೇಲ್ಪಟ್ಟನಾಗರಿಕರು ನೇರವಾಗಿ ಲಸಿಕಾ ಕೇಂದ್ರಕ್ಕೆ ತೆರಳಿ ಲಸಿಕೆಯನ್ನು ಪಡೆಯಬಹುದಾಗಿದೆ. ಲಸಿಕೆಯ ಸಂಪೂರ್ಣ ವೆಚ್ಚವನ್ನು ಕೇಂದ್ರ ಸರ್ಕಾರವೇ ಭರಿಸಲಿದೆ. ಖಾಸಗಿ ಆಸ್ಪತ್ರೆಗಳಿಗೆ ಲಸಿಕೆಯ ದರಗಳನ್ನು ಈಗಾಗಲೇ ನಿಗದಿ ಪಡಿಸಲಾಗಿದ್ದು, ಪ್ರತಿ ಡೋಸ್ ಲಸಿಕೆ ನೀಡಲು ಖಾಸಗಿ ಆಸ್ಪತ್ರೆಗಳಿಗೆ 150 ರು.ಸೇವಾ ಶುಲ್ಕವನ್ನು ನಿಗದಿಪಡಿಸಲಾಗಿದೆ.
ಲಸಿಕೆ ಅಭಿಯಾನ ಸಾಗಿಬಂದ ಹಾದಿ
ಜ.16ರಂದು ಭಾರತದಲ್ಲಿ ಲಸಿಕೆ ಅಭಿಯಾನ ಆರಂಭವಾಗಿತ್ತು. ಮೊದಲ ಹಂತದಲ್ಲಿ ಆರೋಗ್ಯ ಕಾರ್ಯಕರ್ತರಿಗೆ, ಕೊರೋನಾ ವಾರಿಯ್್ಸಗೆ ಲಸಿಕೆಯನ್ನು ನೀಡಲಾಗಿತ್ತು. ಬಳಿಕ ಎರಡನೇ ಹಂತದಲ್ಲಿ 60 ವರ್ಷ ಮೇಲ್ಪಟ್ಟವರು ಹಾಗೂ ಕಾಯಿಲೆಯಿಂದ ಬಳಲುತ್ತಿರುವ 45 ವರ್ಷ ಮೇಲ್ಪವರಿಗೆ ಲಸಿಕೆ ನೀಡಲಾಗಿತ್ತು. ತದನಂತದಲ್ಲಿ 45 ವರ್ಷ ಮೇಲ್ಪಟ್ಟಎಲ್ಲರಿಗೂ ಉಚಿತ ಲಸಿಕೆಯನ್ನು ಘೋಷಿಸಲಾಗಿತ್ತು. ಮೇ 1ರಿಂದ 18 ವರ್ಷ ಮೇಲ್ಪಟ್ಟವರಿಗೆ ಲಸಿಕೆ ಪಡೆಯಲು ಅವಕಾಶವನ್ನು ನೀಡಲಾಗಿತ್ತು. ಇದವರೆಗೆ 27 ಕೋಟಿ ಡೋಸ್ ಲಸಿಕೆಯನ್ನು ನೀಡಲಾಗಿದೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ