ದೇಶದ ಜನರಿಗೆ ಆಹಾರ ಭದ್ರತೆ ಒದಗಿಸುವ ನಿಟ್ಟಿನಲ್ಲಿ ನಮ್ಮ ಪಿಡಿಎಸ್ ವ್ಯವಸ್ಥೆ ಮೂಲಕ ಪ್ರಧಾನಮಂತ್ರಿ ಗರೀಬ್ ಕಲ್ಯಾಣ ಯೋಜನೆ ಅಡಿ 28 ತಿಂಗಳು ಉಚಿತವಾಗಿ ನೀಡಲಾಗಿದೆ. ಇದಕ್ಕಾಗಿ ಕೇಂದ್ರ ಸರ್ಕಾರ 1.80 ಲಕ್ಷ ಕೋಟಿ ವೆಚ್ಚ ಮಾಡಿದೆ ಎಂದು ಕೇಂದ್ರ ಕೃಷಿ ಮತ್ತು ರೈತರ ಕಲ್ಯಾಣ ಖಾತೆ ರಾಜ್ಯ ಸಚಿವೆ ಶೋಭಾ ಕರಂದ್ಲಾಜೆ ಹೇಳಿದ್ದಾರೆ.
ನವದೆಹಲಿ (ಡಿ.24): ದೇಶದ ಜನರಿಗೆ ಆಹಾರ ಭದ್ರತೆ ಒದಗಿಸುವ ನಿಟ್ಟಿನಲ್ಲಿ ನಮ್ಮ ಪಿಡಿಎಸ್ ವ್ಯವಸ್ಥೆ ಮೂಲಕ ಪ್ರಧಾನಮಂತ್ರಿ ಗರೀಬ್ ಕಲ್ಯಾಣ ಯೋಜನೆ ಅಡಿ 28 ತಿಂಗಳು ಉಚಿತವಾಗಿ ನೀಡಲಾಗಿದೆ. ಇದಕ್ಕಾಗಿ ಕೇಂದ್ರ ಸರ್ಕಾರ 1.80 ಲಕ್ಷ ಕೋಟಿ ವೆಚ್ಚ ಮಾಡಿದೆ ಎಂದು ಕೇಂದ್ರ ಕೃಷಿ ಮತ್ತು ರೈತರ ಕಲ್ಯಾಣ ಖಾತೆ ರಾಜ್ಯ ಸಚಿವೆ ಶೋಭಾ ಕರಂದ್ಲಾಜೆ ಹೇಳಿದ್ದಾರೆ.
ದೆಹಲಿಯಲ್ಲಿ ಶುಕ್ರವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಹಸಿರು ಕ್ರಾಂತಿಯ ಬಳಿಕ ಬೇರೆ ದೇಶಗಳಿಗೆ ಆಹಾರ ರಫ್ತು ಮಾಡುವ ಮಟ್ಟಕ್ಕೆ ಭಾರತ ಇಂದು ಬೆಳೆದಿದೆ. ಆಹಾರ ಪದಾರ್ಥಗಳು, ತರಕಾರಿ ಬೆಳೆಯುವುದರಲ್ಲಿ ಭಾರತ ಮುಂಚೂಣಿಯಲ್ಲಿದೆ. ಈಗಲೂ ಪ್ರತಿ ವರ್ಷ .1.60 ಲಕ್ಷ ಕೋಟಿ ಪ್ರತಿ ವರ್ಷ ವೆಚ್ಚ ಮಾಡಿ ರಿಯಾಯ್ತಿ ದರದಲ್ಲಿ ರಾಜ್ಯಗಳಿಗೆ ಆಹಾರಧಾನ್ಯ ಪೂರೈಕೆ ಮಾಡಲಾಗುತ್ತಿದೆ. 15 ರಾಜ್ಯಗಳಲ್ಲಿ ಹಿಂದುಳಿದ ಜಿಲ್ಲೆಗಳಲ್ಲಿ ಫೋರ್ಟಿಫೈಡ್ ಅಕ್ಕಿ ನೀಡಲಾಗುತ್ತಿದೆ. ಪೌಷ್ಟಿಕಾಂಶ ಕೊರತೆ ಇರುವ ಮಕ್ಕಳಿಗೆ ಈ ಅಕ್ಕಿಯನ್ನು ಕೊಡಲಾಗುತ್ತಿದೆ ಎಂದರು.
ಸಿಎಂ ಆಗುವ ಸಿದ್ದರಾಮಯ್ಯ ಕನಸು ಭಗ್ನ ಆಗುತ್ತೆ: ಸಚಿವೆ ಶೋಭಾ ಕರಂದ್ಲಾಜೆ
ಕೇಂದ್ರ ಸರ್ಕಾರದ ಗೋದಾಮುಗಳಲ್ಲಿ ಈ ಹಿಂದೆ ಸಂಗ್ರಹಿಸಿಡಲಾಗುತ್ತಿದ್ದ ಆಹಾರ ಧಾನ್ಯಗಳು ಇಲಿ, ಹುಳ-ಉಪ್ಪಟೆಗಳ ಪಾಲಾಗುತ್ತಿದ್ದುದು ಹೆಚ್ಚಿತ್ತು. ಆದರೆ ಈ ರೀತಿ ಆಹಾರಧಾನ್ಯಗಳ ಪೋಲಿನ ಪ್ರಮಾಣವನ್ನು ಕಳೆದ ಐದಾರು ವರ್ಷಗಳಲ್ಲಿ ಶೇ.1ಕ್ಕಿಂತ ಕೆಳಗಿಳಿಸಲಾಗಿದೆ. ಗೋದಾಮುಗಳನ್ನು ಉನ್ನತ ತಂತ್ರಜ್ಞಾನ ಬಳಸಿ ಮೇಲ್ದರ್ಜೆಗೇರಿಸಲಾಗಿದೆ. ಆಹಾರಧಾನ್ಯಗಳ ಸಾಗಣೆ ಬಗ್ಗೆಯೂ ಹೆಚ್ಚು ಗಮನ ನೀಡಲಾಗುತ್ತಿದ್ದು, ಇಲಾಖೆಯಲ್ಲಿದ್ದ ಸೋರಿಕೆಯನ್ನೂ ತಡೆಯಲು ಅಗತ್ಯ ಕ್ರಮ ಕೈಗೊಳ್ಳಲಾಗಿದೆ ಎಂದು ಮಾಹಿತಿ ನೀಡಿದರು.
ಅಡಕೆಗೆ ನ್ಯಾಯ ಪ್ರಯತ್ನ ಸಾಗಿದೆ: ಕೇಂದ್ರದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರದಲ್ಲಿದ್ದಾಗ ಅಡಕೆ ವಿಷಕಾರಿ ಎಂದು ಕೋರ್ಚ್ ಮುಂದೆ ಹೇಳಲಾಗಿತ್ತು. ಈ ವಿಷಯದಲ್ಲಿ ಅಡಕೆ ಬೆಳೆಗಾರರಿಗೆ ಆಗುವ ಅನ್ಯಾಯವನ್ನು ತಟೆಗಟ್ಟುವ ನಿಟ್ಟಿನಲ್ಲಿ ರಾಜ್ಯದ ಬಿಜೆಪಿ ನಾಯಕರು ಈ ವಿಷಯವನ್ನು ಪ್ರಧಾನಿ ನರೇಂದ್ರ ಮೋದಿ ಅವರ ಗಮನಕ್ಕೆ ತಂದು, ಕಾನೂನಾತ್ಮಕವಾಗಿ ನ್ಯಾಯ ಸಿಗುವ ನಿಟ್ಟಿನಲ್ಲಿ ಪ್ರಯತ್ನ ಸಾಗಿದೆ ಎಂದು ಕೇಂದ್ರದ ಕೃಷಿ ಮತ್ತು ರೈತರ ಕಲ್ಯಾಣ ರಾಜ್ಯ ಸಚಿವೆ ಶೋಭಾ ಕರಂದ್ಲಾಜೆ ಹೇಳಿದರು.
ಕೊಪ್ಪದ ಪಟ್ಟಣ ಪಂಚಾಯಿತಿಯ ಲಾಲ್ ಬಹದ್ದೂರ್ ಶಾಸ್ತ್ರಿ ಕ್ರೀಡಾಂಗಣದಲ್ಲಿ ಭಾನುವಾರ ಬಿಜೆಪಿ ವತಿಯಿಂದ ಏರ್ಪಡಿಸಿದ್ದ ಜನಸಂಕಲ್ಪ ಯಾತ್ರೆ ಕಾರ್ಯಕ್ರಮದಲ್ಲಿ ಮಾತನಾಡಿದ ಅವರ, ಚಿಕ್ಕಮಗಳೂರಿಗೆ ನರೇಂದ್ರ ಮೋದಿ ಅವರು 2014ರಲ್ಲಿ ಬಂದಿದ್ದ ಸಂದರ್ಭದಲ್ಲಿ ಅಯೋಧ್ಯೆಯಲ್ಲಿ ರಾಮಮಂದಿರ ನಿರ್ಮಾಣ ಆಗುತ್ತೆ ಎಂದು ಹೇಳಿದ್ದರು. ಯಾವುದೇ ರಕ್ತಪಾತ ಇಲ್ಲದೆ ರಾಮ ಮಂದಿರ ನಿರ್ಮಾಣ ಆಗುತ್ತಿದೆ. ಇದು, ನಮ್ಮ ಹೆಮ್ಮೆ ಎಂದ ಅವರು, ಕಾಶ್ಮೀರ ಸಮಸ್ಯೆಯನ್ನು ಬಗೆಹರಿಸಿ ಶಾಂತಿ ನೆಲೆಸುವ ಕೆಲಸ ಆಗಿದೆ. 370ನೇ ವಿಧಿ ರದ್ದುಪಡಿಸಿದೆ. ಹೇಳಿದಂತೆ ನಡೆದುಕೊಳ್ಳುವ ಪಕ್ಷ ಬಿಜೆಪಿ ಎಂದರು.
Chikkamagaluru: ‘ಭಾರತ್ ಜೋಡೋ’ ಏಕೆಂದು ಅರ್ಥವಾಗ್ತಿಲ್ಲ: ಶೋಭಾ ಕರಂದ್ಲಾಜೆ
ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ. ರವಿ, ರಾಜ್ಯ ಜಲಸಂಪನ್ಮೂಲ ಸಚಿವ ಗೋವಿಂದ ಕಾರಜೋಳ, ಜಿಲ್ಲಾ ಉಸ್ತುವಾರಿ ಸಚಿವ ಭೈರತಿ ಬಸವರಾಜ್, ಮುಖ್ಯಮಂತ್ರಿ ರಾಜಕೀಯ ಕಾರ್ಯದರ್ಶಿ ಡಿ.ಎನ್. ಜೀವರಾಜ್ ಮಾತನಾಡಿದರು. ಕಾರ್ಯಕ್ರಮದಲ್ಲಿ ತರೀಕೆರೆ ಶಾಸಕ ಡಿ.ಎಸ್. ಸುರೇಶ್, ವಿಧಾನ ಪರಿಷತ್ತು ಸದಸ್ಯ ಎಂ.ಕೆ. ಪ್ರಾಣೇಶ್, ಜಿಲ್ಲಾ ಬಿಜೆಪಿ ಅಧ್ಯಕ್ಷ ಎಚ್.ಸಿ.ಕಲ್ಮರುಡಪ್ಪ, ರಾಮಸ್ವಾಮಿ ಉಪಸ್ಥಿತರಿದ್ದರು.