ಸರ್ಕಾರವು ಆರೋಗ್ಯ ಕ್ಷೇತ್ರದಲ್ಲಿ ಮತ್ತೊಂದು ನಿರ್ಧಾರವನ್ನು ತೆಗೆದುಕೊಳ್ಳಲಿದೆ. ಅದರನ್ವಯ 70 ವರ್ಷ ಕ್ಕಿಂತ ಮೇಲ್ಪಟ್ಟ ಎಲ್ಲಾ ವೃದ್ಧರು ಆಯುಷ್ಮಾನ್ ಭಾರತ್ ಯೋಜನೆಯಡಿ ಉಚಿತ ಚಿಕಿತ್ಸೆಯ ಪ್ರಯೋಜನ ಪಡೆಯುತ್ತಾರೆ' ಎಂದ ರಾಷ್ಟ್ರಪತಿ ದ್ರೌಪದಿ ಮುರ್ಮು
ನವದೆಹಲಿ(ಜೂ.28): 70 ವರ್ಷ ಮೇಲ್ಪಟ್ಟ ಎಲ್ಲಾ ನಾಗರಿಕರಿಗೆ ಆಯುಷ್ಮಾನ್ ಭಾರತ್ ಆರೋಗ್ಯ ವಿಮಾ ಯೋಜನೆಯಡಿ ಉಚಿತ ಚಿಕಿತ್ಸೆ ನೀಡಲಾಗುವುದೆಂದು ರಾಷ್ಟ್ರಪತಿ ದ್ರೌಪದಿ ಮುರ್ಮು ಗುರುವಾರ ಹೇಳಿದ್ದಾರೆ.
ಸಂಸತ್ತಿನ ಜಂಟಿ ಅಧಿವೇಶನವನ್ನು ಉದ್ದೇಶಿಸಿ ಮಾತನಾಡಿದ ಅವರು, 'ಸರ್ಕಾರವು ಆರೋಗ್ಯ ಕ್ಷೇತ್ರದಲ್ಲಿ ಮತ್ತೊಂದು ನಿರ್ಧಾರವನ್ನು ತೆಗೆದುಕೊಳ್ಳಲಿದೆ. ಅದರನ್ವಯ 70 ವರ್ಷ ಕ್ಕಿಂತ ಮೇಲ್ಪಟ್ಟ ಎಲ್ಲಾ ವೃದ್ಧರು ಆಯುಷ್ಮಾನ್ ಭಾರತ್ ಯೋಜನೆಯಡಿ ಉಚಿತ ಚಿಕಿತ್ಸೆಯ ಪ್ರಯೋಜನ ಪಡೆಯುತ್ತಾರೆ' ಎಂದರು.
ಕಾಂಗ್ರೆಸ್‌ಗೆ ತುರ್ತು ಪರಿಸ್ಥಿತಿ ಸಂಕಷ್ಟ, ಮೋದಿ ಬಳಿಕ ರಾಷ್ಟ್ರಪತಿ, ಸ್ಪೀಕರ್ ಸೇರಿ ಹಲವರ ಖಂಡನೆ!
ಈಗಾಗಲೇ ಆಯುಷ್ಮಾನ್ ಭಾರತ್- ಪ್ರಧಾನ ಮಂತ್ರಿ ಜನ ಆರೋಗ್ಯ ಯೋಜನೆ ಅಡಿ 55 ಕೋಟಿ ಜನರಿಗೆ ಉಚಿತ ಆರೋಗ್ಯ ಸೇವೆ ಒದಗಿಸಲಾಗುತ್ತಿದೆ. ದೇಶದಲ್ಲಿ 25,000 ಜನೌಷಧಿ ಕೇಂದ್ರಗಳನ್ನು ಸ್ಥಾಪಿಸುವ ಕೆಲಸವೂ ತ್ವರಿತಗತಿಯಲ್ಲಿ ಸಾಗುತ್ತಿದೆ ಎಂದರು. ಆಯುಷ್ಮಾನ್ ಭಾರತವು ವಿಶ್ವದಲ್ಲೇ ಅತಿ ದೊಡ್ಡ ಸರ್ಕಾರಿ ಹಣದ ಆರೋಗ್ಯ ವಿಮಾ ಯೋಜನೆ ಆಗಿದೆ. 12 ಕೋಟಿ ಕುಟುಂಬಗಳಿಗೆ ಪ್ರತಿ ವರ್ಷಕ್ಕೆ ತಲಾ 5 ಲಕ್ಷ ರು. ಆರೋಗ್ಯ ವಿಮಾ ರಕ್ಷಣೆಯನ್ನು ಒದಗಿಸುವ ಗುರಿ ಹೊಂದಿದೆ.