ರೋಗಿಗಳಿಗೆ ಚಿಕಿತ್ಸೆ ನೀಡಲಾಗದ ಸ್ಥಿತಿ: ವೈದ್ಯರ ಎಚ್ಚರಿಕೆ!

By Kannadaprabha NewsFirst Published Mar 29, 2021, 10:08 AM IST
Highlights

 ಫ್ರಾನ್ಸ್‌ನಲ್ಲಿ ಕೊರೋನಾ ವೈರಸ್‌ ಪ್ರಕರಣಗಳು ಭಾರೀ ಪ್ರಮಾಣದಲ್ಲಿ ಏರಿಕೆ| ರೋಗಿಗಳಿಗೆ ಚಿಕಿತ್ಸೆ ನೀಡಲಾಗದ ಸ್ಥಿತಿ: ಫ್ರಾನ್ಸ್‌ ವೈದ್ಯರ ಎಚ್ಚರಿಕೆ

ಪ್ಯಾರಿಸ್(ಮಾ.29)‌: ಫ್ರಾನ್ಸ್‌ನಲ್ಲಿ ಕೊರೋನಾ ವೈರಸ್‌ ಪ್ರಕರಣಗಳು ಭಾರೀ ಪ್ರಮಾಣದಲ್ಲಿ ಏರಿಕೆ ಆಗುತ್ತಿದ್ದು, ಸೋಂಕಿತರ ಸಂಖ್ಯೆ ಇದೇ ಗತಿಯಲ್ಲಿ ಮುಂದುವರಿದರೆ ರೋಗಿಗಳಿಗೆ ಚಿಕಿತ್ಸೆ ನೀಡಲೂ ಆಗದಂತಹ ಸ್ಥಿತಿ ನಿರ್ಮಾಣವಾಗಲಿದೆ ಎಂದು ವೈದ್ಯರು ಎಚ್ಚರಿಕೆ ನೀಡಿದ್ದಾರೆ.

ಬಹುತೇಕ ಆಸ್ಪತ್ರೆಗಳು ಈಗಾಗಲೇ ಭರ್ತಿಯಾಗಿದ್ದು, ಯಾರಿಗೆ ಚಿಕಿತ್ಸೆ ನೀಡಬೇಕು ಎನ್ನುವುದನ್ನು ನಾವೇ ಆಯ್ಕೆ ಮಾಡಿಕೊಳ್ಳಬೇಕಾಗುತ್ತದೆ. ನಮ್ಮಿಂದ ಸಾಧ್ಯವಿರುವಷ್ಟುರೋಗಿಗಳನ್ನು ರಕ್ಷಿಸಲು ಯತ್ನಿಸುತ್ತೇವೆ. ಆದರೆ, ಪರಿಸ್ಥಿತಿ ಕೈಮೀರಿ ಹೋಗುವ ಹಂತಕ್ಕೆ ಬಂದು ತಲುಪಿದೆ ಎಂದು ವೈದ್ಯರು ಪತ್ರಿಕೆಯೊಂದರ ಮೂಲಕ ಎಚ್ಚರಿಕೆ ಸಂದೇಶ ರವಾನಿಸಿದ್ದಾರೆ.

ಫ್ರಾನ್ಸನಲ್ಲಿ ಪ್ರತಿನಿತ್ಯ 42 ಸಾವಿರಕ್ಕೂ ಅಧಿಕ ಕೇಸ್‌ಗಳು ಪತ್ತೆ ಆಗುತ್ತಿದ್ದು, ಪ್ರತಿನಿತ್ಯ 180ಕ್ಕೂ ಹೆಚ್ಚು ಮಂದಿ ಸಾವಿಗೀಡಾಗುತ್ತಿದ್ದಾರೆ.

click me!