ಗಣರಾಜ್ಯೋತ್ಸವ ಕಾರ್ಯಕ್ರಮಕ್ಕೆ ವಿಶ್ವದ ದೊಡ್ಡಣ್ಣ ಗೈರು: ಫ್ರೆಂಚ್ ಅಧ್ಯಕ್ಷ ಮ್ಯಾಕ್ರನ್ ಮುಖ್ಯ ಅತಿಥಿಯಾಗಿ ಭಾಗಿ!

By BK Ashwin  |  First Published Dec 22, 2023, 11:25 AM IST

ರಾಷ್ಟ್ರೀಯ ರಾಜಧಾನಿಯಲ್ಲಿ ನಡೆಯಲಿರುವ ಗಣರಾಜ್ಯೋತ್ಸವ ಆಚರಣೆಯಲ್ಲಿ ಫ್ರೆಂಚ್ ನಾಯಕರೊಬ್ಬರು 6ನೇ ಬಾರಿ ಮುಖ್ಯ ಅತಿಥಿಯಾಗುತ್ತಿರುವುದು ವಿಶೇಷ. ಮ್ಯಾಕ್ರನ್‌ಗೆ ಮೊದಲು, ಫ್ರೆಂಚ್ ಮಾಜಿ ಪ್ರಧಾನಿ ಜಾಕ್ವೆಸ್ ಚಿರಾಕ್ 1976 ಮತ್ತು 1998 ರಲ್ಲಿ ಭಾರತದ ಗಣರಾಜ್ಯೋತ್ಸವದ ಮುಖ್ಯ ಅತಿಥಿಯಾಗಿದ್ದರು.


ನವದೆಹಲಿ (ಡಿಸೆಂಬರ್ 22, 2023): ಜನವರಿ 26 ರಂದು ನವದೆಹಲಿಯಲ್ಲಿ ನಡೆಯಲಿರುವ ಗಣರಾಜ್ಯೋತ್ಸವ ಸಮಾರಂಭದಲ್ಲಿ ಫ್ರೆಂಚ್ ಅಧ್ಯಕ್ಷ ಎಮ್ಯಾನುಯೆಲ್ ಮ್ಯಾಕ್ರನ್ ಮುಖ್ಯ ಅತಿಥಿಯಾಗಿ ಭಾಗವಹಿಸಲಿದ್ದಾರೆ ಎಂದು ಶುಕ್ರವಾರ ವರದಿಗಳು ತಿಳಿಸಿವೆ. 

ಮೋದಿ ಸರ್ಕಾರ ಈ ಹಿಂದೆ ಅಮೆರಿಕ ಅಧ್ಯಕ್ಷ ಜೋ ಬೈಡೆನ್‌ ಅವರನ್ನು ಗಣರಾಜ್ಯೋತ್ಸವ ಕಾರ್ಯಕ್ರಮಕ್ಕೆ ಮುಖ್ಯ ಅತಿಥಿಯಾಗಿ ಆಹ್ವಾನಿಸಿತ್ತು. ಆದರೆ, ವಿಶ್ವದ ದೊಡ್ಡಣ್ಣ ಜನವರಿಯಲ್ಲಿ ನವದೆಹಲಿಗೆ ಪ್ರಯಾಣಿಸಲು ಸಾಧ್ಯವಾಗುವುದಿಲ್ಲ ಎಂದು ವರದಿಗಳು ಹೇಳುತ್ತಿವೆ. ಈ ಹಿನ್ನೆಲೆ ಫ್ರೆಂಚ್‌ ಅಧ್ಯಕ್ಷ ಎಮ್ಯಾನುಯೆಲ್‌ ಮ್ಯಾಕ್ರನ್‌ ಅವರೇ ಮುಖ್ಯ ಅತಿಥಿಯಾಗಿ ಭಾಗಿಯಾಗಲಿದ್ದಾರೆ ಎಂದು ತಿಳಿದುಬಂದಿದೆ.

Tap to resize

Latest Videos

ಇದನ್ನು ಓದಿ: Lalbagh Flower Show 2024: ಲಾಲ್‌ಬಾಗ್‌ ಫಲಪುಷ್ಪಗಳಲ್ಲಿ ಅರಳಲಿದ್ದಾರೆ ವಿಶ್ವಗುರು ಬಸವಣ್ಣ!

ಬಾಸ್ಟಿಲ್ ಡೇ ಪರೇಡ್‌ನಲ್ಲಿ ಪಾಲ್ಗೊಳ್ಳಲು ಫ್ರಾನ್ಸ್‌ಗೆ ಭೇಟಿ ನೀಡಿದ ಸಂದರ್ಭದಲ್ಲಿ ಎಮ್ಯಾನುಯೆಲ್‌ ಮ್ಯಾಕ್ರನ್ ಮತ್ತು ಪ್ರಧಾನಿ ನರೇಂದ್ರ ಮೋದಿ ಜುಲೈನಲ್ಲಿ ಭೇಟಿಯಾಗಿದ್ದರು. ಆ ವೇಳೆ ಪ್ರಧಾನಿ ಮೋದಿ ಬಾಸ್ಟಿಲ್ ಡೇ ಆಚರಣೆಯಲ್ಲಿ ಗೌರವ ಅತಿಥಿಯಾಗಿ ಭಾಗವಹಿಸಿದ್ದರು. 

ಫ್ರಾನ್ಸ್ ಅಧ್ಯಕ್ಷ ಮ್ಯಾಕ್ರನ್ ಅವರ ಆಹ್ವಾನದ ಮೇರೆಗೆ ಹಾಗೂ ಭಾರತ ಮತ್ತು ಫ್ರಾನ್ಸ್ ನಡುವಿನ ಕಾರ್ಯತಂತ್ರದ ಪಾಲುದಾರಿಕೆಯ 25 ನೇ ವಾರ್ಷಿಕೋತ್ಸವದ ಅಂಗವಾಗಿ ಪ್ರಧಾನಿ ಮೋದಿ ಫ್ರಾನ್ಸ್‌ಗೆ ಭೇಟಿ ನೀಡಿದ್ದರು. ಆಗ, ಭಾರತ - ಫ್ರಾನ್ಸ್‌ ಕಾರ್ಯತಂತ್ರ ಪಾಲುದಾರಿಕೆಯ 25ನೇ ವಾರ್ಷಿಕೋತ್ಸವವನ್ನು ಗುರುತಿಸಲು, ಮಿಲಿಟರಿ ಬ್ಯಾಂಡ್ ನೇತೃತ್ವದ 241 ಸದಸ್ಯರ ಮೂರೂ ಸೇವೆಗಳ ಭಾರತೀಯ ಸಶಸ್ತ್ರ ಪಡೆಗಳು ಪರೇಡ್‌ನಲ್ಲಿ ಭಾಗವಹಿಸಿದ್ದವು.

ಗಣರಾಜ್ಯೋತ್ಸವ ದಿನ ಸ್ಫೋಟಕ್ಕೆ ಸಂಚು ನಡೆಸಿದ 8 ಶಂಕಿತರ ಭಯೋತ್ಪಾದಕರ ಬಂಧನ!
 
ಪರೇಡ್‌ ಸಮಯದಲ್ಲಿ, ಭಾರತೀಯ ಸೇನಾ ತುಕಡಿಯು 'ಸಾರೆ ಜಹಾನ್ ಸೆ ಅಚ್ಚಾ' ಎಂಬ ದೇಶಭಕ್ತಿಯ ಹಾಡು ಕೇಳಿಬಂದಿತ್ತು. ಈ ಮಧ್ಯೆ, ಫ್ರೆಂಚ್ ಅಧ್ಯಕ್ಷ ಮ್ಯಾಕ್ರನ್ ಈ ವರ್ಷದ ಸೆಪ್ಟೆಂಬರ್‌ನಲ್ಲಿ ಭಾರತದ ಅಧ್ಯಕ್ಷತೆಯಲ್ಲಿ ನಡೆದ ಜಿ 20 ಶೃಂಗಸಭೆಯಲ್ಲಿ ಭಾಗವಹಿಸಲು ಭಾರತಕ್ಕೆ ಭೇಟಿ ನೀಡಿದ್ದರು. ಆ ವೇಳೆ ಸೆಪ್ಟೆಂಬರ್ 10 ರಂದು ಉಭಯ ನಾಯಕರು ದ್ವಿಪಕ್ಷೀಯ ಸಭೆ ನಡೆಸಿದ್ದರು.

ಗಣರಾಜ್ಯೋತ್ಸವ ಮುಖ್ಯ ಅತಿಥಿಯಾಗಿ ಫ್ರೆಂಚ್ ನಾಯಕನ 6ನೇ ಭೇಟಿ
ರಾಷ್ಟ್ರೀಯ ರಾಜಧಾನಿಯಲ್ಲಿ ನಡೆಯಲಿರುವ ಗಣರಾಜ್ಯೋತ್ಸವ ಆಚರಣೆಯಲ್ಲಿ ಫ್ರೆಂಚ್ ನಾಯಕರೊಬ್ಬರು 6ನೇ ಬಾರಿ ಮುಖ್ಯ ಅತಿಥಿಯಾಗುತ್ತಿರುವುದು ವಿಶೇಷ. ಮ್ಯಾಕ್ರನ್‌ಗೆ ಮೊದಲು, ಫ್ರೆಂಚ್ ಮಾಜಿ ಪ್ರಧಾನಿ ಜಾಕ್ವೆಸ್ ಚಿರಾಕ್ 1976 ಮತ್ತು 1998 ರಲ್ಲಿ ಭಾರತದ ಗಣರಾಜ್ಯೋತ್ಸವದ ಮುಖ್ಯ ಅತಿಥಿಯಾಗಿದ್ದರು. ಮತ್ತು ಮಾಜಿ ಅಧ್ಯಕ್ಷರಾದ ವ್ಯಾಲೆರಿ ಗಿಸ್ಕಾರ್ಡ್ ಡಿ'ಎಸ್ಟೇಯಿಂಗ್, ನಿಕೋಲಸ್ ಸರ್ಕೋಜಿ ಮತ್ತು ಫ್ರಾಂಕೋಯಿಸ್ ಹೊಲಾಂಡ್ ಅವರು ಕ್ರಮವಾಗಿ 1980, 2008 ಮತ್ತು 2016 ರಲ್ಲಿ ಮುಖ್ಯ ಅತಿಥಿಗಳಾಗಿ ಭಾಗಿಯಾಗಿದ್ದರು.

click me!