ಸಾವಿರಾರು ಕೋಟಿ ರೂಪಾಯಿ ವಂಚಿಸಿ ಭಾರತದಿಂದ ವಿದೇಶಕ್ಕೆ ಪರಾರಿಯಾಗಿರುವ ಉದ್ಯಮಿಗಳು ಇದೀಗ ಮರಳಿ ಭಾರತಕ್ಕೆ ಬರಲೇಬೇಕಾದ ಪರಿಸ್ಥಿತಿ ಬಂದೊದಗಿದೆ. ಈ ಕುರಿತು ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಮಹತ್ವದ ಮಾಹಿತಿ ಹಂಚಿಕೊಂಡಿದ್ದಾರೆ.
ನವದೆಹಲಿ(ಮಾ.19): ಭಾರತದ ಬ್ಯಾಂಕ್‌ಗಳಿಗೆ ಸಾವಿರಾರು ಕೋಟಿ ರೂಪಾಯಿ ವಂಚಿಸಿ ವಿದೇಶಕ್ಕೆ ಪರಾರಿಯಾಗಿರುವ ಉದ್ಯಮಿಗಳಾದ ವಿಜಯ್ ಮಲ್ಯ, ನೀರವ್ ಮೋದಿ ಹಾಗೂ ಮೆಹುಲ್ ಚೋಕ್ಸಿಗೆ ಕಾನೂನು ಸಂಕಷ್ಟ ತೀವ್ರಗೊಂಡಿದೆ. ಈ ಮೂವರನ್ನು ಭಾರತಕ್ಕೆ ಹಸ್ತಾಂತರಿಸಲಾಗುತ್ತಿದೆ. ಇದೀಗ ಕಾನೂನು ಎದುರಿಸಲು ಈ ಉದ್ಯಮಿಗಳು ಭಾರತಕ್ಕೆ ಬರಲೇಬೇಕಿದೆ ಎಂದು ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಹೇಳಿದ್ದಾರೆ.
ಹೊಸ ವರಸೆ ತೆಗೆದ ಮದ್ಯ ದೊರೆ ವಿಜಯ್ ಮಲ್ಯ, ಏನಂತೀಗ?
ಭಾರತದಿಂದ ಪರಾರಿಯಾಗಿ ಲಂಡನ್‌ನಲ್ಲಿ ಬೀಡುಬಿಟ್ಟಿರುವ ವಿಜಯ್ ಮಲ್ಯ ಹಾಗೂ ನೀರವ್ ಮೋದಿಯನ್ನು ಹಸ್ತಾಂತರಿಸುವ ಕಾನೂನು ಪ್ರಕ್ರಿಯೆ ಅಂತಿಮ ಹಂತದಲ್ಲಿದೆ. ಮೆಹುಲ್ ಚೋಕ್ಸಿ ಆ್ಯಂಟಿಗುವಾ ಹಾಗೂ ಬಾರ್ಬಡೋದಲ್ಲಿದ್ದಾರೆ ಅನ್ನೋ ಮಾಹಿತಿ ಲಭ್ಯವಾಗಿದೆ ಎಂದು ನಿರ್ಮಲಾ ಸೀತಾರಾಮನ್ ಹೇಳಿದ್ದಾರೆ.
ರಾಜ್ಯಸಭೆಯಲ್ಲಿ 2021ರ ವಿಮೆ ತಿದ್ದುಪಡಿ ಮಸೂದೆಗೆ ಸಂಬಂಧಿಸಿ ಮಾತನಾಡುವ ವೇಳೆ ನಿರ್ಮಲಾ ಸೀತಾರಾಮನ್ ಪರಾರಿಯಾಗಿರುವ ಉದ್ಯಮಿಗಳು ಮಾಹಿತಿ ಹಂಚಿಕೊಂಡಿದ್ದಾರೆ. ವಂಚನೆ ಮಾಡಿ ದೇಶದಿಂದ ಪರಾರಿಯಾಗಿರುವ ಪ್ರತಿಯೊಬ್ಬರು ಒಬ್ಬರ ಹಿಂದೆ ಒಬ್ಬರು ಭಾರತಕ್ಕೆ ಆಗಮಿಸಲಿದ್ದಾರೆ ಎಂದಿದ್ದಾರೆ.