
ನವದೆಹಲಿ (ಜೂ.7): ಸಂಸತ್ ಭವನದ ಆವರಣದಲ್ಲಿ ನಡೆಯುತ್ತಿರುವ ಅಭಿವೃದ್ಧಿ ಕಾಮಗಾರಿಯ ಸಲುವಾಗಿ ಹಳೆ ಸಂಸತ್ ಭವನದ ಎದುರಿಗಿದ್ದ ಮಹಾತ್ಮ ಗಾಂಧಿ, ಛತ್ರಪತಿ ಶಿವಾಜಿ, ಡಾ. ಅಂಬೇಡ್ಕರ್ ಅವರ ಪ್ರತಿಮೆಗಳನ್ನು ಸ್ಥಳಾಂತರ ಮಾಡಲಾಗಿದೆ. ಇದರ ವಿರುದ್ಧ ಕಾಂಗ್ರೆಸ್ ಕಿಡಿ ಕಾರಿದೆ.
ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಜೈರಾಂ ರಮೇಶ್ ಟ್ವೀಟ್ ಮಾಡಿ, ‘ಬಿಜೆಪಿಗೆ ಗುಜರಾತ್‌ನಲ್ಲಿ ಒಂದು ಸ್ಥಾನ ಕಳೆದಿದ್ದಕ್ಕೆ ಗಾಂಧಿಯನ್ನೂ, ಮಹಾರಾಷ್ಟ್ರದಲ್ಲಿ ಕಡಿಮೆ ಸ್ಥಾನ ಬಂದಿದ್ದಕ್ಕೆ ಶಿವಾಜಿಯನ್ನೂ, ನಮ್ಮ ಸಂವಿಧಾನ ಶಿಲ್ಪಿ ಅಂಬೇಡ್ಕರ್ ಪ್ರತಿಮೆಯನ್ನೂ ಸ್ಥಳಾಂತರ ಮಾಡಿ ಅಗೌರವ ತೋರಲಾಗಿದೆ’ ಎಂದು ಆಕ್ಷೇಪ ವ್ಯಕ್ತಪಡಿಸಿದ್ದಾರೆ.
ಎನ್‌ಡಿಎ ಸರ್ಕಾರ ಅಧಿಕಾರಕ್ಕೇರುವ ಮುನ್ನವೇ 'ಸ್ಟಾಕ್ ಅವ್ಯವಹಾರ' ಆರೋಪ ಮಾಡಿದ ರಾಹುಲ್ ಗಾಂಧಿ!
ಕಾಂಗ್ರೆಸ್ ವಕ್ತಾರ ಪವನ್ ಖೇರಾ ಮಾತನಾಡಿ, ‘ಬಿಜೆಪಿಗೆ ಕೇವಲ 240 ಸ್ಥಾನ ಬಂದಿದ್ದರೂ ಪ್ರತಿಮೆಗಳನ್ನು ಬದಲಾಯಿಸಿದೆ. ಇನ್ನೇನಾದರೂ 400 ಸ್ಥಾನಗಳು ಬಂದಿದ್ದರೆ ಈ ವೇಳೆಗೆ ಸಂವಿಧಾನವನ್ನೇ ಬದಲಿಸಿಬಿಡುತ್ತಿತ್ತು’ ಎಂದು ವ್ಯಂಗ್ಯವಾಡಿದ್ದಾರೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ