
ಟೊರೆಂಟೋ/ಬರ್ಲಿನ್(ಮಾ.31): ಲಸಿಕೆ ಪಡೆದ ಕೆಲವರಲ್ಲಿ ರಕ್ತದ ಹೆಪ್ಪುಗಟ್ಟುವಿಕೆಯ ಸಮಸ್ಯೆಗೆ ಕಾರಣವಾಗುತ್ತಿದೆ ಎನ್ನಲಾದ ಆಸ್ಟ್ರಾಜೆನೆಕಾ ಕೋವಿಡ್ ಲಸಿಕೆಯನ್ನು 55 ವರ್ಷದೊಳಗಿನವರಿಗೆ ನೀಡುವುದನ್ನು ಕೆನಡಾ ಸ್ಥಗಿತಗೊಳಿಸಿದೆ. ಜರ್ಮನಿಯಲ್ಲಿ 60 ವರ್ಷ ಕೆಳಗಿನವರಿಗೂ ಈ ಲಸಿಕೆ ನೀಡಿಕೆ ತಡೆಹಿಡಿಯಲಾಗಿದೆ.
ಭಾರತ ಸೇರಿದಂತೆ 70ಕ್ಕೂ ಹೆಚ್ಚು ದೇಶಗಳಲ್ಲಿ ಆಸ್ಟ್ರಾಜೆನೆಕಾ ಲಸಿಕೆ (ಆಕ್ಸ್‌ಫರ್ಡ್ ವಿವಿ ಮತ್ತು ಆಸ್ಟ್ರಾಜೆನೆಕಾ ಕಂಪನಿಯ ಲಸಿಕೆ. ಭಾರತದಲ್ಲಿ ಇದರ ಹೆಸರು ಕೋವಿಶೀಲ್ಡ್) ನೀಡಲಾಗುತ್ತಿದೆ. ಆದರೆ, ಇದನ್ನು ಪಡೆದವರಲ್ಲಿ ಅಪರೂಪದ ರಕ್ತ ಹೆಪ್ಪುಗಟ್ಟುವಿಕೆ ಸಮಸ್ಯೆ ಕಂಡುಬರುತ್ತಿದೆ, ಅವರ ಪೈಕಿ ಶೇ.40ರಷ್ಟುಮಂದಿ ಸಾವಿಗೀಡಾಗಬಹುದು ಎಂಬ ಭೀತಿ ಎದುರಾಗಿದೆ.
ಹೀಗಾಗಿ ಹೆಚ್ಚಿನ ಅಧ್ಯಯನಕ್ಕಾಗಿ ಕೆಲವೆಡೆ ಇದರ ಬಳಕೆಯನ್ನು ನಿರ್ಬಂಧಿಸಲಾಗುತ್ತಿದೆ. ಅದರಂತೆ ಕೆನಡಾದಲ್ಲಿ 55 ವರ್ಷದೊಳಗಿನವರಿಗೆ ಹಾಗೂ ಜರ್ಮನಿಯಲ್ಲಿ 60 ವರ್ಷದೊಳಗಿನವರಿಗೆ ಇದನ್ನು ನೀಡುವುದನ್ನು ನಿಲ್ಲಿಸಲಾಗಿದೆ.
ಇದೇ ಕಾರಣಕ್ಕೆ ಈಗಾಗಲೇ ಯುರೋಪ್ ಸೇರಿದಂತೆ ಹಲವಾರು ದೇಶಗಳಲ್ಲಿ ಈ ಲಸಿಕೆಯನ್ನು ತಾತ್ಕಾಲಿಕವಾಗಿ ತಡೆಹಿಡಿಯಲಾಗಿದೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ