
ಪಣಜಿ, (ಸೆ.02): ಗೋವಾ ರಾಜ್ಯದ ಮುಖ್ಯಮಂತ್ರಿ ಪ್ರಮೋದ್ ಸಾವಂತ್ ಅವರಿಗೂ ಕೋವಿಡ್-19 ಸೋಂಕು ದೃಢಪಟ್ಟಿದೆ. ಸದ್ಯ ಅವರನ್ನು ಹೋಮ್ ಐಸಲೇಷನ್ ನಲ್ಲಿ ಇಟ್ಟು ಚಿಕಿತ್ಸೆ ನೀಡಲಾಗುತ್ತಿದೆ.
ಈ ಬಗ್ಗೆ ಸ್ವತಃ ಪ್ರಮೋದ್ ಸಾವಂತ್ ಅವರು ಟ್ವೀಟ್ ಮಾಡಿದ್ದು, 'ನನಗೆ ಕೋವಿಡ್-19 ಪಾಸಿಟಿವ್ ಇರುವುದು ಪತ್ತೆಯಾಗಿದೆ. ಆದರೆ ಯಾವುದೇ ರೋಗ ಲಕ್ಷಣಗಳು ಇಲ್ಲದೇ ಇರುವ ಕಾರಣ ಮನೆಯಲ್ಲಿಯೇ ಇಸೊಲೇಶನ್ ನಲ್ಲಿ ಇರುತ್ತೇನೆ. ಮನೆಯಲ್ಲಿ ಇದ್ದುಕೊಂಡು ಕೆಲಸ ನಿರ್ವಹಿಸುತ್ತೇನೆ. ನನ್ನ ಪ್ರಾಥಮಿಕ ಸಂಪರ್ಕಕ್ಕೆ ಬಂದವರು ಅಗತ್ಯ ಕ್ರಮ ಕೈಗೊಳ್ಳಿ ಎಂದು ಹೇಳಿದ್ದಾರೆ.
ರಂಭಾಪುರಿ ಜಗದ್ಗುರುಗಳಿಗೆ ಕೊರೋನಾ: ಆಸ್ಪತ್ರೆಗೆ ದಾಖಲು
ಇನ್ನು ಗೋವಾದಲ್ಲಿ ಕೊರೋನಾ ಸೋಂಕಿತರ ಸಂಖ್ಯೆ 17,418ಕ್ಕೆ ಏರಿಕೆಯಾಗಿದ್ದು, ಈ ಪೈಕಿ 192 ಮಂದಿ ಸೋಂಕಿತರು ಸಾವನ್ನಪ್ಪಿದ್ದಾರೆ. 13,577 ಮಂದಿ ಸೋಂಕಿನಿಂದ ಗುಣಮುಖರಾಗಿದ್ದಾರೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ