
ವಲ್ಸದ್(ಜು.19) ಭಾರತೀಯ ರೈಲ್ವೇಯಲ್ಲಿ ಮೇಲಿಂದ ಮೇಲೆ ದುರಂತಗಳು ಸಂಭವಿಸುತ್ತಿದೆ. ಕಳದ ಕಾಂಚನಜುಂಗ ಎಕ್ಸ್‌ಪ್ರೆಸ್ ರೈಲು ದುರಂತ ನಡೆದ ಒಂದು ತಿಂಗಳಲ್ಲೇ ಚಂಡೀಗಢ-ದಿಬ್ರುಗಢ ಎಕ್ಸ್‌ಪ್ರೆಸ್ ರೈಲು ಹಳಿ ತಪ್ಪಿ ಮೂವರು ಅಮಾಯಕರು ಮೃತಪಟ್ಟಿದ್ದಾರೆ. ಈ ಘಟನೆ ನಡೆದ ಮರುದಿನವೇ ಗೂಡ್ಸ್ ರೈಲು ಹಳಿ ತಪ್ಪಿ ಅವಘಡ ಸಂಭವಿಸಿದೆ. ಅದೃಷ್ಟವಶಾತ್ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ. ಮುಂಬೈ ಡಿವಿಶನ್‌ನ ಡುಂಗ್ರಿ ನಿಲ್ದಾಣದ ಬಳಿ ಈ ಅವಘಡ ಸಂಭವಿಸಿದೆ.
ಸಾಮಾಗ್ರಿಗಳನ್ನು ಹೊತ್ತು ಸಾಗುತ್ತಿದ್ದ ಗೂಡ್ಸ್ ರೈಲು ಸೂರತ್ ಹಾಗೂ ವಲ್ಸದ್ ರೈಲು ನಿಲ್ದಾಣದ ನಡುವಿನಲ್ಲಿ ಹಳಿ ತಪ್ಪಿದೆ. ಕೆಲ ಬೋಗಿಗಳು ಹಳಿ ತಪ್ಪಿದೆ. ಗೂಡ್ಸ್ ರೈಲಾಗಿರುವ ಕಾರಣ ಅನಾಹುತಗಳು ಸಂಭವಿಸಿಲ್ಲ. ಆದರೆ ಹಳಿ ತಪ್ಪಿದ ಅನಾಹುತದಿಂದ ಇತರ ಪ್ರಯಾಣಿಕರ ರೈಲು ಪ್ರಯಾಣಕ್ಕೆ ಅಡಚಣೆಯಾಗಿದೆ. ಹಲವು ರೈಲು ಸಂಚಾರ ವಿಳಂಬವಾಗಿದೆ. ಕೆಲ ರೈಲು ಸಂಚಾರ ರದ್ದು ಮಾಡಲಾಗಿದೆ.
ಹಳಿತಪ್ಪಿದ ಚಂಡೀಗಢ ದಿಬ್ರುಗಢ ಎಕ್ಸ್‌ಪ್ರೆಸ್ ದುರಂತದ ಹಿಂದೆ ದುಷ್ಕೃತ್ಯ ಶಂಕೆ
ಗುರುವಾರ(ಜು.18) ಚಂಡೀಘಡ-ದಿಬ್ರುಗಡ ಎಕ್ಸ್‌ಪ್ರೆಸ್ ರೈಲು ಹಳಿ ತಪ್ಪಿ ಭೀಕರ ಅಪಘಾತ ಸಂಭವಿಸಿತ್ತು. ಈ ಘಟನೆಯಲ್ಲಿ ಮೂರು ಮಂದಿ ಮೃತಪಟ್ಟರೆ, 20ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ. ಈ ಘಟನೆ ನಡೆದ ಮರುದಿನವೇ ಗೂಡ್ಸ್ ರೈಲು ಹಳಿ ತಪ್ಪಿದ ಘಟನೆ ನಡೆದಿದೆ. ಈ ಪೈಕಿ ಏಳು ಮಂದಿ ಗಂಭೀರವಾಗಿ ಗಾಯಗೊಂಡು ಚಿಕಿತ್ಸೆ ಪಡೆಯುತ್ತಿದ್ದಾರೆ. ಇನ್ನು ಐವರಿಗೆ ಸಾಮಾನ್ಯ ಗಾಯಗಳಾಗಿವೆ. ಐವರು ಶೀಘ್ರದಲ್ಲೇ ಬಿಡುಗಡೆಯಾಗುವ ಸಾಧ್ಯತೆ ಇದೆ.
ಜೂನ್ 17ರಂದು ಪಶ್ಚಿಮ ಬಂಗಾಳದಲ್ಲಿ ಕಾಂಚನಜುಂಹಾ ಎಕ್ಸ್‌ಪ್ರೆಸ್ ರೈಲು ಅಪಘಾತ ಸಂಭವಿಸಿತ್ತು. ಗೂಡ್ಸ್ ರೈಲಿನ ಹಿಂಭಾಗಕ್ಕೆ ಡಿಕ್ಕಿ ಹೊಡೆದ ಪ್ರಯಾಣಿಕರ ರೈಲು ಭೀಕರ ಅಪಘಾತಕ್ಕೆ ಕಾರಣವಾಗಿತ್ತು. ಈ ಅಪಘಾತದಲ್ಲಿ 11 ಮಂದಿ ಮೃತಪಟ್ಟಿದ್ದರು. ಹಲವರು ಗಂಭೀರವಾಗಿ ಗಾಯಗೊಂಡಿದ್ದಾರೆ. ಸಿಗ್ನಲ್ ದೋಷ ಸೇರಿದಂತೆ ಹಲವು ಸಮಸ್ಯೆಗಳು ಈ ಅಪಘಾತಕ್ಕೆ ಕಾರಣವಾಗಿತ್ತು.
ಅಗರ್ತಾಲಾದಿಂದ ಸಿಯಾಲ್‌ದಹದಿಂದ ಹೊರಟಿದ್ದ ಕಾಂಚನಜುಂಗಾ ಪ್ರಯಾಣಿಕ ರೈಲು ಹಾಗೂ ಗೂಡ್ಸ್ ರೈಲು ನಡುವೆ ಅಪಘಾತ ಸಂಭವಿಸಿತ್ತು. ನ್ಯೂ ಜಲಪೈಗುರಿಯಿಂದ 30 ಕಿ.ಮೀ ದೂರದಲ್ಲಿರುವ ರಂಗಾಪಾನಿ ನಿಲ್ದಾಣ ದಾಟಿ, ಒಂದು ಸ್ಥಳದಲ್ಲಿ ನಿಂತಿತ್ತು. ಇದೇ ವೇಳೆ ಬೆಳಗ್ಗೆ 9 ಗಂಟೆ ವೇಳೆಗೆ ಅದೇ ಮಾರ್ಗದಲ್ಲಿ ಹಿಂದಿನಿಂದ ಬಂದ ಸರಕು ಸಾಗಣೆ ರೈಲು ರಭಸವಾಗಿ ಕಾಂಚನಜುಂಗಾ ರೈಲಿನ ಹಿಂಭಾಗದ ಬೋಗಿಗಳಿಗೆ ಅಪ್ಪಳಿಸಿದೆ.
ಬೆಂಗಳೂರು ತಾಳಗುಪ್ಪ ರೈಲ್ವೆ ಮಾರ್ಗದಲ್ಲಿ ಬಿದ್ದ ಬೃಹತ್ ಮರ; ರೈಲು ಸಂಚಾರ ವ್ಯತ್ಯಯ
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ