
ನವದೆಹಲಿ: ಖಾಸಗಿ ಆಸ್ತಿಯನ್ನು ರಾಜ್ಯ ಸರ್ಕಾರ ಸ್ವಾಧೀನಪಡಿಸಿಕೊಳ್ಳಲು ಸಾಧ್ಯವಿಲ್ಲ ಎಂದು ಸರ್ವೋಚ್ಚ ನ್ಯಾಯಾಲಯದ ಒಂಬತ್ತು ನ್ಯಾಯಾಧೀಶರ ಸಂವಿಧಾನ ಪೀಠ ಹೇಳಿದೆ. ಯಾವುದೇ ಸರ್ಕಾರ ಖಾಸಗಿ ಆಸ್ತಿಯನ್ನು ಬಲವಂತವಾಗಿ ತೆಗೆದುಕೊಳ್ಳಲು ಬರಲ್ಲ. ಕೆಲವು ಖಾಸಗಿ ಆಸ್ತಿಗಳು ಸಮುದಾಯದ ಆಸ್ತಿಯಾಗಿರಬಹುದು. ಅದನ್ನು ಸಮಾಜದ ಒಳಿತಿಗಾಗಿ ಸರ್ಕಾರವು ಸ್ವಾಧೀನಪಡಿಸಿಕೊಳ್ಳಬಹುದು ಮುಖ್ಯ ನ್ಯಾಯಮೂರ್ತಿ ಡಿವೈ ಚಂದ್ರಚೂಡ್ ನೇತೃತ್ವದ ಒಂಬತ್ತು ನ್ಯಾಯಾಧೀಶರ ಪೀಠವು ಮಂಗಳವಾರ ತೀರ್ಪು ನೀಡಿದ್ದು, ಇದರ ಜೊತೆಯಲ್ಲಿಯೇ ಸಂವಿಧಾನದ 39 ಬಿ ವಿಧಿಯ ಅಡಿಯಲ್ಲಿ ವ್ಯಕ್ತಿಯ ಒಡೆತನದ ಖಾಸಗಿ ಆಸ್ತಿಯನ್ನು ಸಾರ್ವಜನಿಕ ಆಸ್ತಿ ಎಂದು ಪರಿಗಣಿಸಲಾಗುವುದಿಲ್ಲ ಎಂದು ಪೀಠ ಹೇಳಿದೆ. ನ್ಯಾಯಾಲಯ ತೀರ್ಪನ್ನು ಮೂರು ಭಾಗಗಳಾಗಿ ವಿಂಗಡಿಸಿದ್ದು, ಖಾಸಗಿ ಆಸ್ತಿಯು ಸಮುದಾಯದ ಸಮುದಾಯದ ಆಸ್ತಿಯಾಗಬಹುದು. ಆದರೆ ಒಬ್ಬ ವ್ಯಕ್ತಿಯ ಒಡೆತನದ ಪ್ರತಿಯೊಂದು ಆಸ್ತಿಯನ್ನು ಸಮುದಾಯದ ಆಸ್ತಿ ಎಂದು ಕರೆಯಲಾಗುವುದಿಲ್ಲಎಂದು ಹೇಳಿದೆ.
9 ನ್ಯಾಯಮೂರ್ತಿಗಳ ಸಂವಿಧಾನ ಪೀಠ ಈ ತೀರ್ಪಿನ ಮೂಲಕ 1978ರ ಸುಪ್ರೀಂ ಕೋರ್ಟ್‌ನ ಐತಿಹಾಸಿಕ ತೀರ್ಪನ್ನು ರದ್ದುಗೊಳಿಸಿದೆ. ಸಂವಿಧಾನದ 39 (ಬಿ) ವ್ಯಾಪ್ತಿಗೆ ಸಂಬಂಧಿಸಿದ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್ ಈ ತೀರ್ಪು ನೀಡಿದೆ. 1978ರಲ್ಲಿ ನ್ಯಾಯಮೂರ್ತಿ ಕೃಷ್ಣ ಅಯ್ಯರ್ ಅವರ ತೀರ್ಪು, ಖಾಸಗಿ ವ್ಯಕ್ತಿಗಳ ಎಲ್ಲಾ ಆಸ್ತಿಗಳನ್ನು ಸಮುದಾಯದ ಆಸ್ತಿ ಎಂದು ಕರೆಯಬಹುದು ಎಂದು ಅಭಿಪ್ರಾಯಪಟ್ಟಿತ್ತು
ವ್ಯಕ್ತಿಯ ಒಡೆತನದ ಪ್ರತಿಯೊಂದು ಸಂಪನ್ಮೂಲವನ್ನು ಸಮುದಾಯದ ವಸ್ತು ಸಂಪನ್ಮೂಲವೆಂದು ಪರಿಗಣಿಸಲಾಗುವುದಿಲ್ಲ ಎಂದು ನಾವು ನಂಬುತ್ತೇವೆ ಏಕೆಂದರೆ ಅದು ವಸ್ತು ಅಗತ್ಯಗಳಿಗೆ ಅರ್ಹವಾಗಿದೆ ಮುಖ್ಯನ್ಯಾಯಮೂರ್ತಿಗಳು ಹೇಳಿದ್ದಾರೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ