
ನವದೆಹಲಿ(ಜ.25) ಸ್ವತಂತ್ರ ಭಾರತದಲ್ಲಿ ಚರ್ಚೆ, ವಿವಾದಕ್ಕೆ ಕಾರಣವಾಗಿದ್ದ ಅಲ್ಪಸಂಖ್ಯಾತ ಶಿಕ್ಷಣದ ಕುರಿತು ಸುಪ್ರೀಂ ಕೋರ್ಟ್ ಮಹತ್ವದ ಆದೇಶ ನೀಡಿದೆ. ಸಂಪೂರ್ಣವಾಗಿ ಸರ್ಕಾರದ ಅನುದಾನದಲ್ಲಿ ನಡೆಯುತ್ತಿರುವ ಅಲ್ಪಸಂಖ್ಯಾತ ಶಿಕ್ಷಣ ಸಂಸ್ಥೆಗಳು ಮಕ್ಕಳಿಗೆ ಧಾರ್ಮಿಕ ಶಿಕ್ಷಣ ನೀಡುವಂತಿಲ್ಲ. ಇನ್ನು ಭಾಗಶಃ ಅಥವಾ ಸರ್ಕಾರದ ಬಜೆಟ್‌ನಲ್ಲಿ ಅನುದಾನ ಪಡೆಯುತ್ತಿರುವ ಅಲ್ಪಸಂಖ್ಯಾತ ಶಿಕ್ಷಣ ಸಂಸ್ಥೆಗಳು ಮಕ್ಕಳಿಗೆ ಕಡ್ಡಾಯವಾಗಿ ಧಾರ್ಮಿಕ ಶಿಕ್ಷಣ ಬೋಧಿಸುವಂತಿಲ್ಲ. ಇದನ್ನು ಮಕ್ಕಳ ಆಯ್ಕೆಗೆ ಬಿಡಬೇಕು ಎಂದು ಸುಪ್ರೀಂ ಕೋರ್ಟ್ ತೀರ್ಪು ನೀಡಿದೆ.
ಸುಪ್ರೀಂ ಕೋರ್ಟ್ ಮುಖ್ಯನ್ಯಾಯಮೂರ್ತಿ ಡಿವೈ ಚಂದ್ರಚೂಡ್, ಜಸ್ಟೀಸ್ ಸಂಜೀವ ಖನ್ನಾ, ಸೂರ್ಯಕಾಂತ್, ಜೆಬಿ ಪರಿದಿವಾಲ್, ದಿಪಾಂಕರ್ ದತ್ತಾ, ಮನೋಜ್ ಮಿಶ್ರಾ, ಸತೀಶ್ ಶರ್ಮಾ ಸೇರಿದ ಪೀಠ ಈ ಕುರಿತು ವಿಚಾರಣೆ ನಡೆಸಿ ಮಹತ್ವದ ಆದೇಶ ನೀಡಿದೆ. ಸರ್ಕಾರದಿಂದ ಮಾನ್ಯತೆ ಪಡೆದಿರು ಯಾವುದೇ ಅಲ್ಪಸಂಖ್ಯಾತ ಶಿಕ್ಷಣ ಸಂಸ್ಥೆಗಳಲ್ಲಿ ಮಕ್ಕಳಿಗೆ ಧಾರ್ಮಿಕ ಶಿಕ್ಷಣ ಬೋಧನೆ ಕಡ್ಡಾಯ ಮಾಡಲು ಸಾಧ್ಯವಿಲ್ಲ ಎಂದು ಆದೇಶದಲ್ಲಿ ಹೇಳಿದೆ.
ಅಲಿಘಡ ಮುಸ್ಲಿಮ್ ಯುನಿವರ್ಸಿಟಿ ಅಲ್ಪಸಂಖ್ಯಾತರ ವಿಶ್ವವಿದ್ಯಾಲವಲ್ಲ; ಸುಪ್ರೀಂಗೆ ಕೇಂದ್ರ ಸ್ಪಷ್ಟನೆ!
ತೆರಿಗೆದಾರರ ಹಣ ಸಮಾನವಾಗಿ ಬಳಕೆಯಾಗಬೇಕು. ಸರ್ಕಾರದಿಂದ ಅನುದಾನ ಪಡೆದು, ಒಂದು ಸಮುದಾಯದ ಧಾರ್ಮಿಕ ಬೋಧನೆ ಮಾಡಲು ಹೇಗೆ ಸಾಧ್ಯ. ಇದು ಅಲ್ಪಸಂಖ್ಯಾತ ಅಥವಾ ಬಹುಸಂಖ್ಯಾತ ಶಿಕ್ಷಣ ಸಂಸ್ಥೆಗಳೇ ಆಗಿರಲಿ, ಸರ್ಕಾರದಿಂದ ಅನುದಾನ ಪಡೆದರೆ, ಧಾರ್ಮಿಕ ಬೋಧನೆ ಸಾಧ್ಯವಿಲ್ಲ ಎಂದು ಸುಪ್ರೀಂ ಕೋರ್ಟ್ ಹೇಳಿದೆ.
ಈ ಕುರಿತು ವಾದ ಮಂಡಿಸಿದ ಸಾಲಿಸಿಟರ್ ಜನರಲ್ ತುಷಾರ್ ಮೆಹ್ತಾ, ಎಎಂಯು ಕಾಯ್ದೆಯನ್ನು ಉಲ್ಲೇಖಿಸಿದ್ದರು. 1920ರ ಎಎಂಯು ಕಾಯ್ದೆಯನ್ನು 1951ರಲ್ಲಿ ತಿದ್ದುಪಡಿ ಮಾಡಲಾಗಿತ್ತು. ಈ ವೇಳೆ ವಿಶ್ವವಿದ್ಯಾಲಯಗಳಲ್ಲಿ ಮುಸ್ಲಿಂ ವಿದ್ಯಾರ್ಥಿಗಳ ಕಡ್ಡಾಯ ದಾರ್ಮಿಕ ಶಿಕ್ಷಣ ಬೋಧನೆಯನ್ನು ತೆಗೆದು ಹಾಕಲಾಗಿದೆ ಎಂದರು.
ಅಲ್ಪಸಂಖ್ಯಾತರಿಗೆ ಸಿದ್ದು ಬಂಪರ್ ಕೊಡುಗೆ..!
ವಾರ್ಷಿಕವಾಗಿ ಅಲ್ಪಸಂಖ್ಯಾತ ಸಮುದಾಯದ ಶಿಕ್ಷಣ ಸಂಸ್ಥೆಗಳಿಗೆ 1,570 ಕೋಟಿ ರೂಪಾಯಿ ಅನುದಾನ ನೀಡಲಾಗುತ್ತಿದೆ. ತೆರಿಗೆದಾರರ ಹಣ ಪಡೆದು ಒಂದು ಸಮುದಾಯದ ದಾರ್ಮಿಕ ಬೋಧನೆಗೆ ಅವಕಾಶವಿಲ್ಲ. ಇದು 1951ರ ಎಎಂಯು ಕಾಯ್ದೆಗೆ ವಿರುದ್ಧವಾಗಿದೆ ಎಂದಿದೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ