Lata Mangeshkar Death: ಲತಾ ಮಂಗೇಶ್ಕರ್ ನಿಧನ 2 ದಿನಗಳ ಶೋಕಾಚರಣೆ, ಅರ್ಧಕ್ಕಿಳಿಯಲಿದೆ ರಾಷ್ಟ್ರ ಧ್ವಜ!

Published : Feb 06, 2022, 12:04 PM ISTUpdated : Feb 06, 2022, 01:05 PM IST
Lata Mangeshkar Death: ಲತಾ ಮಂಗೇಶ್ಕರ್ ನಿಧನ 2 ದಿನಗಳ ಶೋಕಾಚರಣೆ, ಅರ್ಧಕ್ಕಿಳಿಯಲಿದೆ ರಾಷ್ಟ್ರ ಧ್ವಜ!

ಸಾರಾಂಶ

* ಲತಾ ಮಂಗೇಶ್ಕರ್ ನಿಧನ, ಎರಡು ದಿನಗಳ ಶೋಕಾಚರಣೆ * ಭಾರತ ರತ್ನ ಗೌರವಕ್ಕೆ ಪಾತ್ರರಾದ ಲತಾ ಮಂಗೇಶ್ಕರ್‌ ಗೌರವಾರ್ಥ ಶೋಕಾಚರಣೆ * ಸಂಜೆ 6.30 ರ ಸುಮಾರಿಗೆ ಮುಂಬೈನ ಶಿವಾಜಿ ಪಾರ್ಕ್‌ನಲ್ಲಿ ಸಕಲ ಸರ್ಕಾರಿ ಗೌರವಗಳೊಂದಿಗೆ ಅಂತ್ಯಕ್ರಿಯೆ

ಮುಂಬೈ(ಫೆ.06): ದೇಶದ ಅತ್ಯುನ್ನತ ಪ್ರಶಸ್ತಿ 'ಭಾರತ ರತ್ನ' ಪುರಸ್ಕೃತರಾದ ಖ್ಯಾತ ಗಾಯಕಿ ಲತಾ ಮಂಗೇಶ್ಕರ್ (Lata Mangeshkar Death) ಅವರ ನಿಧನದ ಹಿನ್ನೆಲೆಯಲ್ಲಿ ದೇಶದಲ್ಲಿ ಎರಡು ದಿನಗಳ ಶೋಕಾಚರಣೆಯನ್ನು (National Mourning) ಘೋಷಿಸಲಾಗಿದೆ. ಈ ಸಮಯದಲ್ಲಿ ರಾಷ್ಟ್ರಧ್ವಜವನ್ನು ಅರ್ಧಕ್ಕೆ ಹಾರಿಸಲಾಗುತ್ತದೆ ಎಂದು ಸರ್ಕಾರಿ ಮೂಲಗಳು ತಿಳಿಸಿವೆ. ಸುದ್ದಿ ಸಂಸ್ಥೆ ANI ಪ್ರಕಾರ, ಇಂದು ಸಂಜೆ 6.30 ರ ಸುಮಾರಿಗೆ ಮುಂಬೈನ ಶಿವಾಜಿ ಪಾರ್ಕ್‌ನಲ್ಲಿ ಸಕಲ ಸರ್ಕಾರಿ ಗೌರವಗಳೊಂದಿಗೆ ಅವರ ಅಂತ್ಯಕ್ರಿಯೆ ನಡೆಯಲಿದೆ. ಈ ಸಮಯದಲ್ಲಿ, ಅವರ ದೇಹವನ್ನು ತ್ರಿವರ್ಣ ಧ್ವಜದಿಂದ ಸುತ್ತಿಡಲಾಗುತ್ತದೆ ಮತ್ತು ಸಶಸ್ತ್ರ ಪಡೆಗಳ ಸೈನಿಕರು ಅಂತ್ಯಕ್ರಿಯೆಯಲ್ಲಿ ಅವರಿಗೆ ಅಂತಿಮ ನಮನ ಸಲ್ಲಿಸುತ್ತಾರೆ.

ಇಂದು ಬೆಳಗ್ಗೆ ಲತಾ ಮಂಗೇಶ್ಕರ್ ನಿಧನರಾಗಿದ್ದಾರೆ. ಆವರಿಗೆ 92 ವರ್ಷ ವಯಸ್ಸಾಗಿತ್ತು. ಕಳೆದ ಒಂದು ತಿಂಗಳಿನಿಂದ ಅವರನ್ನು ಮುಂಬೈನ ಬ್ರೀಚ್ ಕ್ಯಾಂಡಿ ಆಸ್ಪತ್ರೆಯ ಐಸಿಯುಗೆ ದಾಖಲಿಸಲಾಗಿತ್ತು. ಅವರ ನಿಧನಕ್ಕೆ ಸಂತಾಪ ಸೂಚಿಸಿರುವ ಪ್ರಧಾನಿ ನರೇಂದ್ರ ಮೋದಿ ಅವರು ಟ್ವಿಟ್ಟರ್‌ನಲ್ಲಿ 'ನಾನು ಹೇಳಲಾಗದಷ್ಟು ದುಃಖಿತನಾಗಿದ್ದೇನೆ. ದಯೆ ಮತ್ತು ಕಾಳಜಿಯುಳ್ಳ ಲತಾ ದೀದಿ ನಮ್ಮನ್ನು ಅಗಲಿದ್ದಾರೆ. ಅವರ ಅಗಲುವಿಕೆ ನಮ್ಮ ದೇಶಕ್ಕೆ ತುಂಬಲಾರದ ನಷ್ಟವಾಗಿದೆ. ಮುಂಬರುವ ಪೀಳಿಗೆ ಅವರನ್ನು ಭಾರತೀಯ ಸಂಸ್ಕೃತಿಯ ನಿಷ್ಠಾವಂತೆ ಎಂದು ನೆನಪಿಸಿಕೊಳ್ಳುತ್ತವೆ, ಅವರ ಮಧುರ ಧ್ವನಿಯು ಜನರನ್ನು ಮಂತ್ರಮುಗ್ಧಗೊಳಿಸುವ ಅಪ್ರತಿಮ ಸಾಮರ್ಥ್ಯವನ್ನು ಹೊಂದಿತ್ತು' ಎಂದಿದ್ದಾರೆ.

Lata Mangeshkar Net Worth: ಗಾನ ಕೋಗಿಲೆ ಲತಾ ದೀದೀ ಒಟ್ಟು ಆಸ್ತಿ ಇಷ್ಟು!

ಭಾರತ ರತ್ನ ಗೌರವಕ್ಕೆ ಪಾತ್ರರಾದ ಯಾವುದೇ ವ್ಯಕ್ತಿಯ ಮರಣವನ್ನು ತುಂಬಲಾರದ ನಷ್ಟವೆಂದು ಪರಿಗಣಿಸಿ ರಾಷ್ಟ್ರೀಯ ಶೋಕಾಚರಣೆಯನ್ನು ಘೋಷಿಸಲಾಗಿದೆ ಎಂಬುವುದು ಉಲ್ಲೇಖನೀಯ. ಈ ಹಿಂದೆ ಕೇಂದ್ರ ಸರ್ಕಾರದ ಶಿಫಾರಸಿನ ಮೇರೆಗೆ ರಾಷ್ಟ್ರಪತಿ ಮಾತ್ರ ಘೋಷಿಸುತ್ತಿದ್ದರು. ಆದರೀಗ ರಾಜ್ಯಗಳೂ ಶೋಕಾಚರಣೆಯನ್ನು ಘೋಷಿಸುತ್ತವೆ.

Lata Mangeshkar: ಲತಾ ಮಂಗೇಶ್ಕರ್ ನಿಧನ, ಮೋದಿ ಸೇರಿ ಗಣ್ಯರ ಕಂಬನಿ!

ರಾಷ್ಟ್ರೀಯ ಧ್ವಜ ಸಂಹಿತೆಯ ಪ್ರಕಾರ, ಶೋಕಾಚರಣೆಯ ಸಮಯದಲ್ಲಿ, ಸಂಸತ್ತು, ಸೆಕ್ರೆಟರಿಯೇಟ್, ವಿಧಾನಸಭೆ, ಇತರ ಪ್ರಮುಖ ರಾಷ್ಟ್ರೀಯ ಕಟ್ಟಡಗಳು ಅಥವಾ ಸರ್ಕಾರಿ ಕಚೇರಿಗಳ ಮೇಲೆ ರಾಷ್ಟ್ರಧ್ವಜವು ಅರ್ಧಕ್ಕೆ ಇಳಿಸಲಾಗುತ್ತದೆ. ಇದಲ್ಲದೆ, ದೇಶದ ಹೊರಗೆ ಇರುವ ಭಾರತೀಯ ರಾಯಭಾರ ಕಚೇರಿಗಳಲ್ಲಿ ರಾಷ್ಟ್ರಧ್ವಜವು ಅರ್ಧ ಮಟ್ಟದಲ್ಲಿ ಹಾರಲಿದೆ. ರಾಷ್ಟ್ರೀಯ ಶೋಕಾಚರಣೆಯ ಸಮಯದಲ್ಲಿ ಯಾವುದೇ ಅಧಿಕೃತ ಅಥವಾ ಔಪಚಾರಿಕ ಕಾರ್ಯಕ್ರಮವನ್ನು ಆಯೋಜಿಸಲಾಗುವುದಿಲ್ಲ.

ಮೋದಿ ಸಂತಾಪ:

ಇನ್ನು ಅಗಲಿದ ಗಾಯಕಿಗೆ ಪ್ರಧಾನಿ ನರೇಂದ್ರ ಮೋದಿ (Prime Minister Narendra Modi) ಸೇರಿ ಅನೇಕ ಗಣ್ಯರು ಸಂತಾಪ ಸೂಚಿಸಿದ್ದಾರೆ. ಈ ಸಂಬಂಧ ಟ್ವೀಟ್ ಮಾಡಿರುವ ಪ್ರಧಾನ ಮಂತ್ರಿ ಮೋದಿ 'ನಾನು ಹೇಳಲಾಗದಷ್ಟು ದುಃಖಿತನಾಗಿದ್ದೇನೆ. ದಯೆ ಮತ್ತು ಕಾಳಜಿಯುಳ್ಳ ಲತಾ ದೀದಿ ನಮ್ಮನ್ನು ಅಗಲಿದ್ದಾರೆ. ಅವರ ಅಗಲುವಿಕೆ ನಮ್ಮ ದೇಶಕ್ಕೆ ತುಂಬಲಾರದ ನಷ್ಟವಾಗಿದೆ. ಮುಂಬರುವ ಪೀಳಿಗೆ ಅವರನ್ನು ಭಾರತೀಯ ಸಂಸ್ಕೃತಿಯ ನಿಷ್ಠಾವಂತೆ ಎಂದು ನೆನಪಿಸಿಕೊಳ್ಳುತ್ತವೆ, ಅವರ ಮಧುರ ಧ್ವನಿಯು ಜನರನ್ನು ಮಂತ್ರಮುಗ್ಧಗೊಳಿಸುವ ಅಪ್ರತಿಮ ಸಾಮರ್ಥ್ಯವನ್ನು ಹೊಂದಿತ್ತು' ಎಂದಿದ್ದಾರೆ.

ಲತಾ ದೀದಿ ಅವರ ಹಾಡುಗಳು ವಿವಿಧ ಭಾವನೆಗಳಿಂದ ತುಂಬಿರುತ್ತಿದ್ದವು. ದಶಕಗಳ ಕಾಲ ಭಾರತೀಯ ಚಲನಚಿತ್ರ ಪ್ರಪಂಚದ ಸ್ಥಿತ್ಯಂತರಗಳನ್ನು ಅವರು ನಿಕಟವಾಗಿ ವೀಕ್ಷಿಸಿದ್ದರು. ಚಲನಚಿತ್ರಗಳ ಆಚೆಗೆ, ಅವರು ಯಾವಾಗಲೂ ಭಾರತದ ಬೆಳವಣಿಗೆಯ ಬಗ್ಗೆ ಉತ್ಸುಕರಾಗಿದ್ದರು. ಅವರು ಯಾವಾಗಲೂ ಬಲಿಷ್ಠ ಮತ್ತು ಅಭಿವೃದ್ಧಿ ಹೊಂದಿದ ಭಾರತವನ್ನು ನೋಡಲು ಬಯಸಿದ್ದರು.

Film Fare ಪ್ರಶಸ್ತಿಯನ್ನೊಮ್ಮೆ ನಿರಾಕರಿಸಿದ್ದ ಗಾನ ಕೋಗಿಲೆ ಲತಾ ಮಂಗೇಶ್ಕರ್!

ಲತಾ ದೀದಿಯವರಿಂದ ನಾನು ಯಾವಾಗಲೂ ಅಪಾರ ಪ್ರೀತಿಯನ್ನು ಪಡೆದಿದ್ದೇನೆ ಎಂಬುವುದು ಗೌರವವೆಂದು ಪರಿಗಣಿಸುತ್ತೇನೆ. ಅವರೊಂದಿಗಿನ ನನ್ನ ಸಂವಾದಗಳು ಅವಿಸ್ಮರಣೀಯವಾಗಿ ಉಳಿಯುತ್ತವೆ. ಲತಾ ದೀದಿ ಅವರ ನಿಧನಕ್ಕೆ ನನ್ನ ಸಹ ಭಾರತೀಯರೊಂದಿಗೆ ನಾನು ದುಃಖಿಸುತ್ತೇನೆ. ಅವರ ಕುಟುಂಬದವರೊಂದಿಗೆ ಮಾತನಾಡಿ ಸಾಂತ್ವನ ಹೇಳುತ್ತೇನೆ ಓಂ ಶಾಂತಿ ಎಂದಿದ್ದಾರೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

click me!

Recommended Stories

ರೈತರಿಗಾಗಿ ಮಸೂದೆ ಮಂಡಿಸಿದ ಸಂಸದ ಡಾ.ಕೆ.ಸುಧಾಕರ್: ಹೈನುಗಾರರು-ಹೂವು ಬೆಳೆಗಾರರಿಗೆ ದೊಡ್ಡ ಆಶಾಕಿರಣ
ಇಂದಿಗೋ ನಾಳೆಗೋ ಎನ್ನುವಂತಿಲ್ಲ, ತಕ್ಷಣದಿಂದಲೇ ಪ್ರಯಾಣಿಕರಿಗೆ ಹಣ ರೀಫಂಡ್‌ ಮಾಡಿ; ಇಂಡಿಗೋಗೆ ಸೂಚಿಸಿದ ಸರ್ಕಾರ!