ಕೇಂದ್ರದಿಂದ ರೈತರಿಗೆ ಮತ್ತೊಂದು ಆಹ್ವಾನ!

Published : Dec 21, 2020, 08:59 AM IST
ಕೇಂದ್ರದಿಂದ ರೈತರಿಗೆ ಮತ್ತೊಂದು ಆಹ್ವಾನ!

ಸಾರಾಂಶ

ಕಾಯ್ದೆಗಳನ್ನು ಹಿಂಪಡೆಯುವ ಹೊರತು ಪ್ರತಿಭಟನೆಯಿಂದ ಹಿಂದೆ ಸರಿಯಲ್ಲ ಎಂದು ಬಿಗಿಪಟ್ಟು ಹಿಡಿದಿರುವ ರೈತ| ಕೇಂದ್ರದಿಂದ ರೈತರಿಗೆ ಮತ್ತೊಂದು ಆಹ್ವಾನ

ನವದೆಹಲಿ(ಡಿ.21): ಕಾಯ್ದೆಗಳನ್ನು ಹಿಂಪಡೆಯುವ ಹೊರತು ಪ್ರತಿಭಟನೆಯಿಂದ ಹಿಂದೆ ಸರಿಯಲ್ಲ ಎಂದು ಬಿಗಿಪಟ್ಟು ಹಿಡಿದಿರುವ ರೈತರ ಮನವೊಲಿಕೆಗಾಗಿ ಕೇಂದ್ರ ಸರ್ಕಾರ ಮತ್ತೊಂದು ಯತ್ನಕ್ಕೆ ಮುಂದಾಗಿದೆ. ಈ ನಿಟ್ಟಿನಲ್ಲಿ ಭಾನುವಾರ ಪ್ರತಿಭಟನಾನಿರತ ರೈತ ಸಂಘಟನೆಗಳಿಗೆ ಪತ್ರ ಬರೆದಿರುವ ಕೇಂದ್ರ ಸರ್ಕಾರ ಮಾತುಕತೆಗೆ ಆಹ್ವಾನ ನೀಡಿದೆ. ಜೊತೆಗೆ ಮಾತುಕತೆಯ ದಿನಾಂಕ ನಿರ್ಧಾರವನ್ನು ರೈತರಿಗೆ ನೀಡಲಾಗಿದೆ.

ಕೃಷಿ ಕಾಯ್ದೆಗಳ ಕುರಿತಾಗಿ ನಿಮ್ಮ ಆತಂಕ ಮತ್ತು ಅನುಮಾನಗಳನ್ನು ನಿವಾರಿಸುವ ಸಲುವಾಗಿ ಹಿಂದೆ ಭಾಗಿಯಾಗಿದ್ದ ರೈತ ಸಂಘಟನೆಗಳಿಗೆ ಮತ್ತೊಂದು ಆಹ್ವಾನ ನೀಡಲು ಇಚ್ಚಿಸಲಾಗಿದೆ. ಮುಂದಿನ ಸುತ್ತಿನ ಮಾತುಕತೆ ದಿನಾಂಕವನ್ನು ನೀವೇ ನಿರ್ಧರಿಸಿ ಎಂದು ರೈತ ಸಂಘಟನೆಗಳಿಗೆ ಕೇಂದ್ರ ಕೃಷಿ ಇಲಾಖೆಯ ಜಂಟಿ ಕಾರ್ಯದರ್ಶಿ ವಿವೇಕ್‌ ಅಗರ್‌ವಾಲ್‌ ಅವರು ಬರೆದ ಪತ್ರದಲ್ಲಿ ಉಲ್ಲೇಖಿಸಲಾಗಿದೆ.

ರೈತರ ಮನವೊಲಿಕೆಗಾಗಿ ಕೇಂದ್ರ ಸರ್ಕಾರ ಈಗಾಗಲೇ 5 ಸುತ್ತಿನ ಮಾತುಕತೆಯನ್ನು ನಡೆಸಿದೆ. ಆದರೆ ಈ ಮಾತುಕತೆಗಳು ಫಲಪ್ರದವಾಗಿರಲಿಲ್ಲ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

click me!

Recommended Stories

ಸೌಟು, ಕುಕ್ಕರ್ ಹಿಡಿದು ನಿಲ್ಲಿ, SIR ವಿರುದ್ಧ ಹೋರಾಟಕ್ಕೆ ಮಹಿಳೆಯರಿಗೆ ಸಿಎಂ ಮಮತಾ ಬ್ಯಾನರ್ಜಿ ಕರೆ
ಮಧುಮೇಹ ಚಿಕಿತ್ಸೆಯಲ್ಲಿ ಹೊಸ ಕ್ರಾಂತಿ: AIIMS ವೈದ್ಯರಿಂದ ಅದ್ಭುತ ಸಾಧನೆ, ಈಗ ಕೇವಲ 2 ಗಂಟೆಯಲ್ಲಿ ಗುಣಪಡಿಸಬಹುದು!