ಇನ್ನಷ್ಟು ವಿಮಾನ ನಿಲ್ದಾಣ ಖಾಸಗಿ ಸಂಸ್ಥೆಗೆ ವಹಿಸಲು ಕೇಂದ್ರ ಆಸಕ್ತಿ!

By Suvarna NewsFirst Published Aug 19, 2020, 3:55 PM IST
Highlights

ಮಂಗಳೂರು ಸೇರಿ 6 ವಿಮಾನ ನಿಲ್ದಾಣಗಳ ನಿರ್ವಹಣೆಯನ್ನು ಖಾಸಗಿಗೆ ವಹಿಸಿರುವ ಕೇಂದ್ರ ಸರ್ಕಾರ|  ಇನ್ನಷ್ಟುವಿಮಾನ ನಿಲ್ದಾಣಗಳ ನಿರ್ವಹಣೆಯನ್ನು ಖಾಸಗಿ ಸಂಸ್ಥೆಗಳಿಗೆ ವಹಿಸಲು ಸಜ್ಜು

ನವದೆಹಲಿ(ಆ.19): ಮಂಗಳೂರು ಸೇರಿ 6 ವಿಮಾನ ನಿಲ್ದಾಣಗಳ ನಿರ್ವಹಣೆಯನ್ನು ಖಾಸಗಿಗೆ ವಹಿಸಿರುವ ಕೇಂದ್ರ ಸರ್ಕಾರ ಇದೀಗ ಇನ್ನಷ್ಟುವಿಮಾನ ನಿಲ್ದಾಣಗಳ ನಿರ್ವಹಣೆಯನ್ನು ಖಾಸಗಿ ಸಂಸ್ಥೆಗಳಿಗೆ ವಹಿಸಲು ಮುಂದಾಗಿದೆ.

ಕಲಬುರಗಿಯಲ್ಲಿ ಹವಾಮಾನ ವೈಪರಿತ್ಯ: ಆಗಸದಲ್ಲೇ ಸುತ್ತಾಡಿ ವಾಪಸ್‌ ಹೋದ ಎರಡು ವಿಮಾನಗಳು..!

ಬುಧವಾರ ನಡೆಯಲಿರುವ ಸಂಪುಟ ಸಭೆಯಲ್ಲಿ ಈ ಕುರಿತ ಪ್ರಸ್ತಾವನೆ ಮಂಡಿಸಲಾಗುವುದು ಎಂದು ವಿಮಾನಯಾನ ಖಾತೆ ಸಚಿವ ಹರ್ದೀಪ್‌ ಸಿಂಗ್‌ ಪುರಿ ತಿಳಿಸಿದ್ದಾರೆ. ಮೊದಲ ಹಂತದಲ್ಲಿ ಲಖನೌ, ಜೈಪುರ, ಮಂಗಳೂರು, ತಿರುವನಂತಪುರಂ ಮತ್ತು ಗುವಾಹಟಿ ವಿಮಾನ ನಿಲ್ದಾಣಗಳನ್ನು ಖಾಸಗಿಗೆ ವಹಿಸಲಾಗಿತ್ತು. ಈ ವಿಮಾನ ನಿಲ್ದಾಣಗಳ ನಿರ್ವಹಣೆಯನ್ನು ಅದಾನಿ ಗ್ರೂಪ್‌ ಪಡೆದುಕೊಂಡಿದೆ.

ಒಂದೂವರೆ ಗಂಟೆ ಆಕಾಶದಲ್ಲೇ ಸುತ್ತಾಡಿ ಲ್ಯಾಂಡ್‌ ಆದ ಅನಂತ್ ಕುಮಾರ್ ಹೆಗಡೆ ಇದ್ದ ವಿಮಾನ

ಅದೇ ರೀತಿ ಎರಡನೇ ಹಂತದಲ್ಲಿ ಅಮೃತಸರ, ವಾರಣಾಸಿ, ಭುವನೇಶ್ವರ, ಇಂದೋರ್‌, ರಾಯ್ಪುರ ವಿಮಾನ ನಿಲ್ದಾಣಕ್ಕೆ ಶಿಫಾರಸು ಮಾಡಲಾಗಿದೆ. ಖಾಸಗಿ ನಿರ್ವಹಣೆಗೆ ವಹಿಸಲು ಇನ್ನಷ್ಟುವಿಮಾನ ನಿಲ್ದಾಣಗಳನ್ನು ಗುರುತಿಸಲಾಗಿದೆ. ಖಾಸಗಿ ಹಾಗೂ ಸಾರ್ವಜನಿಕ ಸಹಭಾಗಿತ್ವದಲ್ಲಿ ಹೊಸದಾಗಿ 100 ವಿಮಾನ ನಿಲ್ದಾಣಗಳನ್ನು ನಿರ್ಮಿಸಲು ಉದ್ದೇಶಿಸಲಾಗಿದೆ ಎಂದು ಪುರಿ ತಿಳಿಸಿದ್ದಾರೆ.

click me!