
ನವದೆಹಲಿ(ಜೂ.30): ಕೊರೋನಾ ವೈರಸ್ನ 2ನೇ ಅಲೆ ಇಳಿಮುಖವಾಗುತ್ತಿರುವ ಹೊರತಾಗಿಯೂ, ರಾಜ್ಯಗಳು ಕೊರೋನಾ ನಿರ್ಬಂಧಕ್ಕೆ ಹೇರಲಾದ ನಿಯಮಾವಳಿಗಳನ್ನು ಕಟ್ಟುನಿಟ್ಟಾಗಿ ಜಾರಿಗೊಳಿಸುವಂತೆ ರಾಜ್ಯಗಳಿಗೆ ಕೇಂದ್ರ ಸರ್ಕಾರ ಸೂಚನೆ ನೀಡಿದೆ. ಸೋಂಕು ಹೆಚ್ಚಿದೆ ಕಂಟೈನ್ಮೆಂಟ್ ವಲಯ ಸೃಷ್ಟಿಸಬೇಕು ಹಾಗೂ ನಿರ್ಬಂಧ ಮುಂದುವರಿಸಬೇಕು ಎಂದು ನಿರ್ದೇಶಿಸಿದೆ.
ಜಿಲ್ಲೆಗಳನ್ನು ಆಡಳಿತಾತ್ಮಕ ಘಟಕಗಳನ್ನಾಗಿ ಪರಿಗಣಿಸಿಕೊಂಡು ಕೊರೋನಾ ಸೋಂಕು, ಆಸ್ಪತ್ರೆಗಳಲ್ಲಿ ಹಾಸಿಗೆಯ ಲಭ್ಯತೆ ಬಗ್ಗೆ ರಾಜ್ಯಗಳು ತೀವ್ರ ನಿಗಾ ವಹಿಸಬೇಕು. ಯಾವ ಭಾಗದಲ್ಲಿ ಕೊರೋನಾ ಸೋಂಕು ಹೆಚ್ಚಳ ಮತ್ತು ಆಸ್ಪತ್ರೆಗಳಲ್ಲಿ ಹಾಸಿಗೆಗಳ ಬೇಡಿಕೆ ಹೆಚ್ಚುತ್ತಿರುವ ಸುಳಿವು ಕಂಡ ಕೂಡಲೇ ಸರ್ಕಾರಗಳು ಕಾರ್ಯಪ್ರವೃತ್ತರಾಗಬೇಕು. ಜೊತೆಗೆ ಅಗತ್ಯವಿರುವ ಕ್ರಮ ಕೈಗೊಳ್ಳಬೇಕು.
ಸೋಂಕು ನಿಯಂತ್ರಣಕ್ಕೆ ಹೇರಲಾಗಿರುವ ನಿರ್ಬಂಧಗಳನ್ನು ಎಚ್ಚರಿಕೆಯಿಂದ ತೆರವುಗೊಳಿಸಬೇಕು ಎಂದು ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಿಗೆ ರವಾನಿಸಲಾದ ಮಾರ್ಗಸೂಚಿಗಳಲ್ಲಿ ತಿಳಿಸಲಾಗಿದೆ. ಹೆಚ್ಚು ಕೇಸ್ ಮತ್ತು ಆಸ್ಪತ್ರೆಗಳಲ್ಲಿ ಹಾಸಿಗೆಗಳ ಬೇಡಿಕೆ ಹೆಚ್ಚಿರುವ ಜಿಲ್ಲೆಗಳಲ್ಲಿ ನಿರ್ಬಂಧಗಳನ್ನು ಮುಂದುವರಿಸಬಹುದು ಎಂದು ಸೂಚಿಸಲಾಗಿದೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ