
ನವದೆಹಲಿ(ಮಾ.17): 2 ರಾಷ್ಟ್ರೀಯ ಬ್ಯಾಂಕ್ಗಳ ಖಾಸಗೀಕರಣಗೊಳಿಸುವ ಕೇಂದ್ರದ ಪ್ರಸ್ತಾವನೆ ವಿರುದ್ಧ ಬ್ಯಾಂಕ್ ನೌಕರರ 9 ಸಂಘಟನೆಗಳು 2 ದಿನಗಳ ಮುಷ್ಕರ ನಡೆಸಿದ ಬೆನ್ನಲ್ಲೇ, ಎಲ್ಲಾ ರಾಷ್ಟ್ರೀಯ ಬ್ಯಾಂಕ್ಗಳನ್ನು ಖಾಸಗೀಕರಣಗೊಳಿಸುವುದಿಲ್ಲ ಎಂದು ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಅವರು ಭರವಸೆ ನೀಡಿದ್ದಾರೆ. ಅಲ್ಲದೆ ಖಾಸಗೀಕರಣಗೊಳಿಸಲಾಗುವ ಬ್ಯಾಂಕ್ಗಳ ನೌಕರರ ವೇತನ, ಪಿಂಚಣಿಯ ಹಿತಾಸಕ್ತಿ ಕಾಪಾಡಲಾಗುತ್ತದೆ ಎಂದು ಭರವಸೆ ನೀಡಿದ್ದಾರೆ.
ಈ ಬಗ್ಗೆ ಮಂಗಳವಾರ ಸುದ್ದಿಗಾರರನ್ನುದ್ದೇಶಿಸಿ ಮಾತನಾಡಿದ ಸಚಿವೆ ನಿರ್ಮಲಾ ಅವರು, ‘ಬ್ಯಾಂಕ್ಗಳು ದೇಶದ ಆಕಾಂಕ್ಷೆಗಳನ್ನು ಈಡೇರಿಸಬೇಕು. ಹೀಗಾಗಿ ಬ್ಯಾಂಕ್ಗಳಿಗೆ ನ್ಯಾಯ ದೊರಕಿಸಲು ಖಾಸಗೀಕರಣ ಅತ್ಯುತ್ತಮ ನಿರ್ಧಾರವಾಗಿದೆ. ಹೀಗಾಗಿ ಖಾಸಗೀಕರಣಗೊಳ್ಳುವ ರಾಷ್ಟ್ರೀಕೃತ ಬ್ಯಾಂಕ್‌ನ ಎಲ್ಲಾ ಸಿಬ್ಬಂದಿಯ ಹಿತಾಸಕ್ತಿ ರಕ್ಷಿಸಲಾಗುತ್ತದೆ’ ಎಂದಿದ್ದಾರೆ.
ಏತನ್ಮಧ್ಯೆ ದೇಶದ ಲಾಭವನ್ನು ಖಾಸಗೀಕರಣಗೊಳಿಸುತ್ತಿರುವ ಕೇಂದ್ರ ಸರ್ಕಾರ ನಷ್ಟವನ್ನು ರಾಷ್ಟ್ರೀಕರಣಗೊಳಿಸುತ್ತಿದೆ ಎಂಬ ರಾಹುಲ್ ಗಾಂಧಿ ಟ್ವೀಟ್ ಬಗ್ಗೆ ಕೇಂದ್ರ ಸಚಿವೆ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ