
ಶ್ರೀನಗರ: ಜಾಮೀನಿನ ಮೇಲೆ ಬಿಡುಗಡೆಯಾದ ಶಂಕಿತ ಉಗ್ರರ ಮೇಲೆ ನಿಗಾ ಇಡುವ ನಿಟ್ಟಿನಲ್ಲಿ ಅಂಥವರ ಕಾಲಿಗೆ ಜಿಪಿ ಎಸ್ ಆಧರಿತ ಬಳೆ ಅಳವಡಿಸುವ ಪ್ರಯೋಗವೊಂದನ್ನು ಜಮ್ಮು ಮತ್ತು ಕಾಶ್ಮೀರ ಪೊಲೀಸರು ಆರಂಭಿಸಿದ್ದಾರೆ.
ಇಂಥ ಪ್ರಯೋಗ ದೇಶದಲ್ಲೇ ಮೊದಲು. ಈ ಸಾಧನಗಳನ್ನು ಈಗಾಗಲೇ ಪಾಶ್ಚಿಮಾತ್ಯ ದೇಶಗಳಲ್ಲಿ ಬಳಸಲಾಗುತ್ತಿದ್ದು, ಭಾರತದಲ್ಲಿ ಇದೇ ಮೊದಲ ಬಾರಿಗೆ ಬಳಕೆ ಮಾಡಲಾಗಿದೆ. ಫುಲಾಂ ಮೊಹ ಮ್ಮದ್ ಭಟ್ ಎಂಬ ವ್ಯಕ್ತಿಯ ಮಧ್ಯಂತರ ಜಾಮೀನು ಅರ್ಜಿಯನ್ನು ಆಲಿಸಿದ ಜಮ್ಮು ರಾಷ್ಟ್ರೀಯ ತನಿಖಾ ದಳದ ನ್ಯಾಯಾಲಯ, ಅವರಿಗೆ ಜಿಪಿಎಸ್ ಆಧಾರಿತ ಸಾಧನ ಅಳವಡಿಸಿ ಜಾಮೀನು ಮಂಜೂರು ಮಾಡಿತು.
ಭಟ್ ದೇಶದ್ರೋಹ ಪ್ರಕರಣದ ಅಡಿಯಲ್ಲಿ ಬಂಧಿತನಾಗಿದ್ದು, ಆತನಿಗೆ ಹಲವು ಭಯೋತ್ಪಾದಕ ಸಂಘಟನೆಗಳ ಜೊತೆ ಸಂಪರ್ಕವಿರುವ ಶಂಕೆಯ ಮೇಲೆ ಬಂಧಿಸಲಾಗಿತ್ತು. ಪ್ರಸ್ತುತ ಈ ಸಾಧನವನ್ನು ದೇಶದ್ರೋಹ ಪ್ರಕರಣದಡಿ ಬಂಧಿತರಾಗುವ ಆರೋಪಿಗಳಿಗೆ ಮಾತ್ರ ಬಳಸಲು ನಿರ್ಧರಿಸಲಾಗಿದೆ.
ದಿಲ್ಲಿ ಗಾಳಿ ಮಲಿನ ಮಟ್ಟ 100 ಪಟ್ಟು ಹೆಚ್ಚಳ :ವಿಶ್ವ ಆರೋಗ್ಯ ಸಂಸ್ಥೆ ಕಳವಳ
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ