
ನವದೆಹಲಿ: ದೆಹಲಿ ವಿಧಾನಸಭೆ ಚುನಾವಣೆ ಹಿನ್ನೆಲೆಯಲ್ಲಿ ಕಾಂಗ್ರೆಸ್ ತನ್ನ ಭರವಸೆಗಳ ಸರಣಿಯನ್ನು ಮುಂದುವರೆಸಿದೆ. ಪಕ್ಷ ಅಧಿಕಾರಕ್ಕೇರಿದರೆ 500 ರು.ಗೆ ಎಲ್‌ಪಿಜಿ ಸಿಲಿಂಡರ್, ಉಚಿತ ಪಡಿತರ ಹಾಗೂ ಕರ್ನಾಟಕದ ಗೃಹಜ್ಯೋತಿ ಮಾದರಿಯಲ್ಲಿ 300 ಯೂನಿಟ್‌ವರೆಗೆ ಉಚಿತ ವಿದ್ಯುತ್ ನೀಡುವುದಾಗಿ ಕಾಂಗ್ರೆಸ್ ಘೋಷಿಸಿದೆ.
ದೆಹಲಿಯ ಎಐಸಿಸಿ ಉಸ್ತುವಾರಿ ಖ್ವಾಜಿ ನಿಜಾಮುದ್ದೀನ್ ಹಾಗೂ ದೆಹಲಿ ಕಾಂಗ್ರೆಸ್ ಅಧ್ಯಕ್ಷ ದೇವೇಂದ್ರ ಯಾದವ್ ಅವರೊಂದಿಗೆ ನಡೆದ ಪತ್ರಿಕಾಗೋಷ್ಠಿಯಲ್ಲಿ ತೆಲಂಗಾಣ ಮುಖ್ಯಮಂತ್ರಿ ರೇವಂತ್ ರೆಡ್ಡಿ ಈ ಘೋಷಣೆ ಮಾಡಿದ್ದಾರೆ.
ಈ ಮೊದಲು, ಗೃಹಲಕ್ಷಿ ಮಾದರಿಯ ಪ್ಯಾರಿ ದೀದಿ ಯೋಜನೆಯಡಿ ಮಹಿಳೆಯರಿಗೆ ಮಾಸಿಕ 2,500 ರು., ಜೀವನ್ ರಕ್ಷಕ ಯೋಜನೆಯಡಿ ಪರಿವಾರಗಳಿಗೆ 25 ಲಕ್ಷದ ವರೆಗೆ ಉಚಿತ ಜೀವವಿಮೆ, 1 ವರ್ಷದ ವರೆಗೆ ಶಿಕ್ಷಿತ ನಿರುದ್ಯೋಗಿಗಳಿಗೆ ತಿಂಗಳಿಗೆ 8,500 ರು. ನೀಡುವ ಭರವಸೆ ನೀಡಿತ್ತು. ವಿಶೇಷವೆಂದರೆ ಕರ್ನಾಟಕದಲ್ಲಿ ಕಾಂಗ್ರೆಸ್ ಸರ್ಕಾರ ಗೃಹಲಕ್ಷ್ಮೀ ಯೋಜನೆಯಡಿ ಮಹಿಳೆಯರಿಗೆ ಮಾಸಿಕ 2000 ರು. ಮತ್ತು ಗೃಹಜ್ಯೋತಿಯಡಿ ಮಾಸಿಕ 200 ಯುನಿಟ್ ವಿದ್ಯುತ್ ನೀಡುತ್ತಿದೆ. ದೆಹಲಿಯಲ್ಲಿ ಈ ಎರಡರ ಪ್ರಮಾಣವೂ ಹೆಚ್ಚಿದೆ. 70 ಸದಸ್ಯಬಲದ ವಿಧಾನಸಭೆಗೆ ಫೆ.5ರಂದು ಚುನಾವಣೆ ನಡೆಯಲಿದ್ದು, ಫೆ.8ರಂದು ಫಲಿತಾಂಶ ಪ್ರಕಟವಾಗಿಲಿದೆ.
ಇದನ್ನೂ ಓದಿ: ದಿಲ್ಲಿ ಚುನಾವಣೆಯಲ್ಲೂ ಗ್ಯಾರಂಟಿ ಮಂತ್ರ, ನಿರುದ್ಯೋಗಿಗಳಿಗೆ ಮಾಸಿಕ 8500 ರು. ಕಾಂಗ್ರೆಸ್ ಘೋಷಣೆ!
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ