
ಗಾಂಧೀನಗರ (ಫೆ. 29): ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ 3 ಗಂಟೆಗಳ ಅಹಮದಾಬಾದ್ ಭೇಟಿಗೆ ಸರ್ಕಾರ 100 ಕೋಟಿ ರು. ವೆಚ್ಚ ಮಾಡಿದೆ ಎಂಬ ವಿಪಕ್ಷಗಳ ಆರೋಪವನ್ನು ಗುಜರಾತ್ ಮುಖ್ಯಮಂತ್ರಿ ವಿಜಯ್ ರೂಪಾನಿ ತಳ್ಳಿ ಹಾಕಿದ್ದಾರೆ.
ಟ್ರಂಪ್ ಭೇಟಿಯಿಂದ ದೇಶಕ್ಕಾದ ಲಾಭವೇನು?
ಈ ಬಗ್ಗೆ ರಾಜ್ಯ ವಿಧಾನಸಭೆಗೆ ಮಾಹಿತಿ ನೀಡಿರುವ ಅವರು, ಟ್ರಂಪ್ ಭೇಟಿಗೆ ಸಂಬಂಧಿಸಿದ ಕಾರ್ಯಕ್ರಮಗಳಿಗೆ ರಾಜ್ಯ ಸರ್ಕಾರ 8 ಕೋಟಿ ರು. ಬಿಡುಗಡೆ ಮಾಡಿತ್ತು. ಇದರ ಜೊತೆಗೆ ಅಹಮದಾಬಾದ್ ಮಹಾನಗರ ಪಾಲಿಕೆ 4.5 ಕೋಟಿ ರು.ಗಳನ್ನು ಬಿಡುಗಡೆ ಮಾಡಿತ್ತು. ಮೊಟೆರಾ ಸ್ಟೇಡಿಯಂ ಬಳಿ ರಸ್ತೆಗೆ ಹಿಂದೆಯೇ ಹಣ ಬಿಡುಗಡೆ ಆಗಿತ್ತು ಎಂದಿದ್ದಾರೆ.
ಫೆಬ್ರವರಿ 29ರ ಟಾಪ್ 10 ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ