
ಅಹಮದಾಬಾದ್ (ನ. 07): ಮುಖ್ಯಮಂತ್ರಿ, ಉಪ ಮುಖ್ಯಮಂತ್ರಿ ಹಾಗೂ ರಾಜ್ಯಪಾಲರು ಸೇರಿದಂತೆ ವಿವಿಐಪಿಗಳ ಪ್ರಯಾಣಕ್ಕೆಂದೇ ಗುಜರಾತ್ ರಾಜ್ಯ ಸರ್ಕಾರ 191 ಕೋಟಿ ರು. ಮೌಲ್ಯದ ಹೊಸ ವಿಮಾನ ಖರೀದಿ ಮಾಡಿದೆ.
ಬಾಂಬಾರ್ಡಿಯರ್ ಚಾಲೆಂಜರ್ 650 ಎಂಬ 2 ಎಂಜಿನ್‌ನ ವಿಮಾನವನ್ನು ಸರ್ಕಾರ ಖರೀದಿ ಮಾಡಿದ್ದು, ಇನ್ನು ಒಂದೆರಡು ವಾರಗಳಲ್ಲಿ ಕೈ ಸೇರಲಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಹೊಸ ವಿಮಾನದಲ್ಲಿ ಒಟ್ಟು 12 ಮಂದಿ ಪ್ರಯಾಣಿಸಬಹುದಾಗಿದ್ದು, ಏಳು ಸಾವಿರ ಕಿ.ಮಿ ಎತ್ತರದಲ್ಲಿ ಹಾರುವ ಸಾಮರ್ಥ್ಯ ಹೊಂದಿದೆ. ಗಂಟೆಗೆ 870 ಕಿ.ಮಿ ವೇಗದಲ್ಲಿ ಹಾರಬಲ್ಲ ಸಾಮರ್ಥ್ಯ ಇರುವ ಇದರ ಒಂದು ಗಂಟೆಯ ವೆಚ್ಚ ಒಂದು ಲಕ್ಷಕ್ಕಿಂತ ಅಧಿಕ ಎಂದು ಅಂದಾಜಿಸಲಾಗಿದೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ