
ಗುಜರಾತ್‌ನ ಪಂಚಮಹಲ್ ಜಿಲ್ಲೆಯ ಪಾವಗಡ ಬೆಟ್ಟದ ದೇವಾಲಯದಲ್ಲಿ ಶನಿವಾರ ಭೀಕರ ರೋಪ್‌ವೇ ಅಪಘಾತ ಸಂಭವಿಸಿದ್ದು, ಆರು ಜನರು ಸಾವನ್ನಪ್ಪಿದ್ದಾರೆ. ನಿರ್ಮಾಣ ಸಾಮಗ್ರಿಗಳನ್ನು ಸಾಗಿಸುತ್ತಿದ್ದ ಟ್ರಾಲಿಯ ಕೇಬಲ್ ವೈರ್ ತುಂಡಾಗಿ ಮುರಿದು ಬಿದ್ದ ಪರಿಣಾಮ ಈ ದುರ್ಘಟನೆ ಸಂಭವಿಸಿದೆ ಎಂದು ಪಂಚಮಹಲ್ ಡಿಎಸ್‌ಪಿ ಡಾ. ಹರ್ಷ ದುಧತ್ ತಿಳಿಸಿದ್ದಾರೆ.
ಪೊಲೀಸ್ ವರಿಷ್ಠಾಧಿಕಾರಿ ಹರೇಶ್ ದುಧತ್ ಆರು ಸಾವುಗಳನ್ನು ದೃಢಪಡಿಸಿದ್ದು, ರಕ್ಷಣಾ ಮತ್ತು ಪರಿಹಾರ ಕಾರ್ಯಾಚರಣೆಗಾಗಿ ಪೊಲೀಸ್ ಹಾಗೂ ಅಗ್ನಿಶಾಮಕ ದಳದ ತಂಡಗಳು ಸ್ಥಳದಲ್ಲಿ ಕಾರ್ಯನಿರ್ವಹಿಸುತ್ತಿವೆ ಎಂದು ಮಾಹಿತಿ ನೀಡಿದ್ದಾರೆ.
ಪಾವಗಡ ಬೆಟ್ಟದ ದೇವಾಲಯವು ಸುಮಾರು 800 ಮೀಟರ್ ಎತ್ತರದಲ್ಲಿದ್ದು, ಯಾತ್ರಿಕರು ಶಿಖರವನ್ನು ತಲುಪಲು ಸುಮಾರು 2,000 ಮೆಟ್ಟಿಲುಗಳನ್ನು ಹತ್ತುವುದು ಅಥವಾ ಕೇಬಲ್ ಕಾರುಗಳನ್ನು ಬಳಸುವುದು ಸಾಮಾನ್ಯ. ಆದರೆ, ಪ್ರತಿಕೂಲ ಹವಾಮಾನದಿಂದಾಗಿ ಶನಿವಾರ ಬೆಳಿಗ್ಗೆಯಿಂದ ಸಾರ್ವಜನಿಕರ ಬಳಕೆಗೆ ರೋಪ್‌ವೇಯನ್ನು ಮುಚ್ಚಲಾಗಿತ್ತು ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಈ ದುರಂತದ ಕುರಿತು ತನಿಖೆ ಆರಂಭವಾಗಿದ್ದು, ಹೆಚ್ಚಿನ ಮಾಹಿತಿಗಾಗಿ ಅಧಿಕಾರಿಗಳು ಕಾಯುತ್ತಿದ್ದಾರೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ