
ರಜೌರಿ/ಮಂಗಳೂರು: ಜಮ್ಮು ಕಾಶ್ಮೀರದ ರಜೌರಿ ಜಿಲ್ಲೆಯಲ್ಲಿ ಸೇನಾಪಡೆ ಮತ್ತು ಉಗ್ರರ ನಡುವೆ ಬುಧವಾರ ನಡೆದ ಗುಂಡಿನ ಚಕಮಕಿಯಲ್ಲಿ ಕರ್ನಾಟಕದ ಅವಿಭಜಿತ ದಕ್ಷಿಣ ಕನ್ನಡ ಮೂಲದ ಕ್ಯಾಪ್ಟನ್ ಎಂ.ವಿ. ಪ್ರಾಂಜಲ್ ಸೇರಿ 4 ಯೋಧರು ಹುತಾತ್ಮರಾಗಿದ್ದು, ಇಬ್ಬರು ಗಾಯಗೊಂಡಿದ್ದಾರೆ. ಈ ನಡುವೆ, ಅಡಗಿರುವ ಇಬ್ಬರು ಉಗ್ರರಿಗಾಗಿ ಸೇನಾ ಕಾರ್ಯಾಚರಣೆ ಮುಂದಿವರೆದಿದೆ.
ಇಲ್ಲಿನ ಅರಣ್ಯ ಪ್ರದೇಶದಲ್ಲಿ ಉಗ್ರರು ಅಡಗಿಕೊಂಡಿದ್ದಾರೆ ಎಂಬ ಖಚಿತ ಮಾಹಿತಿಯ ಆಧಾರದ ಮೇಲೆ ಭದ್ರತಾ ಪಡೆಗಳು ಮತ್ತು ಪೊಲೀಸರು ಬುಧವಾರ ಜಂಟಿ ಕಾರ್ಯಾಚರಣೆ ಆರಂಭಿಸಿದ್ದವು. ಈ ವೇಳೆ ಉಗ್ರರು ಹಾಗೂ ಸೇನಾಪಡೆಗಳ ನಡುವೆ ಗುಂಡಿನ ಚಕಮಕಿ ನಡೆದಿದ್ದು, ಇಬ್ಬರು ಸೇನಾಧಿಕಾರಿಗಳು ಹಾಗೂ ಇಬ್ಬರು ಸೈನಿಕರು ಮೃತಪಟ್ಟಿದ್ದಾರೆ. ಕಾರ್ಯಾಚರಣೆ ಮುಂದು ವರೆಸಲಾಗಿದ್ದು, ಅಡಗಿಕೊಂಡಿರುವ ಇಬ್ಬರು ಉಗ್ರರಿರಾಗಿ ಬಲೆ ಬೀಸಲಾಗಿದೆ.
ರಜೌರಿಯಲ್ಲಿ ಉಗ್ರರ ಜೊತೆ ಸೇನೆಯ ಎನ್‌ಕೌಂಟರ್, ಮೇಜರ್ ಸೇರಿದಂತೆ 3 ಸೈನಿಕರು ಹುತಾತ್ಮ
ದಕ್ಷಿಣ ಕನ್ನಡದ ಪ್ರಾಂಜಲ್: ಹುತಾತ್ಮರ ಪೈಕಿ 63ನೇ ರಾಷ್ಟ್ರೀಯ ರೈಫಲ್ಸ್ ಕ್ಯಾಪ್ಟನ್ ಪ್ರಾಂಜಲ್ ಅವರು ಮಂಗಳೂರು ಎಂಆರ್‌ಪಿಎಲ್ ನಿವೃತ್ತ ಎಂಡಿ ವೆಂಕಟೇಶ್ ಅವರ ಏಕೈಕ ಪುತ್ರ. ಮೂಲತಃ ಅವಿಭಜಿತ ದಕ್ಷಿಣ ಕನ್ನಡದವರಾಗಿದ್ದ ವೆಂಕಟೇಶ್ ಅವರು ಮೇ 31ರಂದು ನಿವೃತ್ತರಾಗಿದ್ದರು. ಕೆಲಕಾಲ ಮೈಸೂರಲ್ಲೂ ಇದ್ದರು. ತಂದೆಯ ನಿವೃತ್ತ ಸಮಾರಂಭಕ್ಕೆ ಪ್ರಾಂಜಲ್ ಆಗಮಿಸಿದ್ದರು. ನಿವೃತ್ತಿ ಬಳಿಕ ವೆಂಕಟೇಶ್ ಈಗ ಬೆಂಗಳೂರಿನಲ್ಲಿ ನೆಲೆಸಿದ್ದಾರೆ.
ಅಡಗಿರುವ ಇಬ್ಬರು ಉಗ್ರರ ಸುತ್ತುವರಿದಿರುವ ಪಡೆಗಳು
ರಜೌರಿ: ಜಮ್ಮು-ಕಾಶ್ಮೀರದ ರಜೌರಿ ಜಿಲ್ಲೆಯಲ್ಲಿ ಸೇನಾಪಡೆ ಮತ್ತು ಉಗ್ರರ ನಡುವೆ ಬುಧವಾರ ನಡೆದ ಗುಂಡಿನ ಚಕಮಕಿಯಲ್ಲಿ ಇಬ್ಬರು ಕ್ಯಾಪ್ಟನ್ ಸೇರಿದಂತೆ ನಾಲ್ವರು ಯೋಧರು ಹುತಾತ್ಮರಾಗಿದ್ದು, ಇಬ್ಬರು ಗಾಯಗೊಂಡಿದ್ದಾರೆ. ಈ ನಡುವೆ, ಅಡಗಿರುವ ಇಬ್ಬರು ಉಗ್ರರಿಗಾಗಿ ಸೇನಾ ಕಾರ್ಯಾಚರಣೆ ಮುಂದುವರೆದಿದೆ.
ಕಾಶ್ಮೀರದಲ್ಲಿ ಸೇನೆ ಗುಂಡಿಗೆ 6 ಉಗ್ರರ ಬಲಿ: 18 ಗಂಟೆಗಳ ಸತತ ಕಾರ್ಯಾಚರಣೆಯಲ್ಲಿ ಭರ್ಜರಿ ಯಶಸ್ಸು
ಈ ಪ್ರದೇಶದಲ್ಲಿ ಕಳೆದ ಭಾನುವಾರದಿಂದಲೂ ಸೇನಾಪಡೆಗಳು ಶೋಧ ಕಾರ್ಯ ನಡೆಸುತ್ತಿವೆ. ಹೀಗಾಗಿ ಸ್ಥಳೀಯರನ್ನು ಮನೆ ಬಿಟ್ಟು ಹೊರಗೆ ಬರದಂತೆ ಸೂಚಿಸಲಾಗಿದೆ. ಶಾಲೆಗಳಿಗೆ ರಜೆ ನೀಡಲಾಗಿದೆ ಎಂದು ಸ್ಥಳೀಯರೊಬ್ಬರು ತಿಳಿಸಿದ್ದಾರೆ. ಕಳೆದ ಒಂದೂವರೆ ವರ್ಷದಿಂದ ರಜೌರಿ ಮತ್ತು ಪೂಂಚ್ ಜಿಲ್ಲೆಗಳಲ್ಲಿ ಉಗ್ರರ ಉಪಟಳ ಹೆಚ್ಚಾಗಿದ್ದು, ಕಾರ್ಯಾಚರಣೆಗಳನ್ನು ಕೈಗೊಳ್ಳಲಾಗುತ್ತಿದೆ. ನ.17ರಂದು ನಡೆದ ಕಾರ್ಯಾಚರಣೆಯಲ್ಲಿ ಓರ್ವ ಉಗ್ರನನ್ನು ಹತ್ಯೆ ಮಾಡಲಾಗಿತ್ತು. ಆ.7ರಂದು ಸಹ ಓರ್ವ ಉಗ್ರ ಸೇನಾಪಡೆಗಳ ಗುಂಡಿಗೆ ಬಲಿಯಾಗಿದ್ದ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ