ಹ್ಯಾಂಡ್‌ ಸ್ಯಾನಿಟೈಸರ್‌ಗೆ 1000 ರು.!

Published : Mar 09, 2020, 09:58 AM IST
ಹ್ಯಾಂಡ್‌ ಸ್ಯಾನಿಟೈಸರ್‌ಗೆ 1000 ರು.!

ಸಾರಾಂಶ

ಕೊರೋನಾ ವೈರಸ್‌ನಿಂದ ರಕ್ಷಿಸಿಕೊಳ್ಳುವ ನಿಟ್ಟಿನಿಂದ ಜನರು ಹ್ಯಾಂಡ್‌ ಸ್ಯಾನಿಟೈಸರ್‌ ಖರೀದಿಸಲು ಭರಾಟೆ| ಆನ್‌ಲೈನ್‌ನಲ್ಲಿ ಹ್ಯಾಂಡ್‌ ಸ್ಯಾನಿಟೈಸರ್‌ಗೆ 1000 ರು!| 

ನವದೆಹಲಿ[ಮಾ.09]: ಕೊರೋನಾ ವೈರಸ್‌ನಿಂದ ರಕ್ಷಿಸಿಕೊಳ್ಳುವ ನಿಟ್ಟಿನಿಂದ ಜನರು ಹ್ಯಾಂಡ್‌ ಸ್ಯಾನಿಟೈಸರ್‌ (ಕೈತೊಳೆಯುವ ದ್ರಾವಣ)ವನ್ನು ಖರೀದಿಸಲು ಮುಗಿಬೀಳುತ್ತಿದ್ದಾರೆ. ಹೀಗಾಗಿ ಹ್ಯಾಂಡ್‌ ಸ್ಯಾನಿಟೈಸರ್‌ಗಳು ಅಂಗಡಿ ಮಾತ್ರವಲ್ಲ ಆನ್‌ಲೈನ್‌ನಲ್ಲೂ ಬಲು ದುಬಾರಿ ಆಗಿವೆ.

ಫ್ಲಿಪ್‌ಕಾರ್ಟ್‌ನಲ್ಲಿ 300 ಎಂಎಲ್‌ ಹ್ಯಾಂಡ್‌ ಸ್ಯಾನಿಟೈಸರ್‌ನ ದರ 16 ಪಟ್ಟು ಜಾಸ್ತಿಯಾಗಿದೆ. ಉದಾಹರಣೆಗೆ ಹಿಮಾಲಯ ಪ್ಯೂರ್‌ ಹ್ಯಾಂಡ್ಸ್‌ 30 ಎಂಎಲ್‌ ಬಾಟಲ್‌ನ ದರ 999 ರು. ವರೆಗೂ ತೋರಿಸಲಾಗುತ್ತಿದೆ. ಈ ಬಗ್ಗೆ ಅನೇಕ ಗ್ರಾಹಕರು ಟ್ವೀಟರ್‌ ಮೂಲಕ ಟೀಕೆ ವ್ಯಕ್ತಪಡಿಸಿದ್ದಾರೆ. ಇದೇ ವೇಳೆ ನಾವು ಹ್ಯಾಂಡ್‌ ಸ್ಯಾನಿಟೈಸರ್‌ಗಳ ದರವನ್ನು ಏರಿಕೆ ಮಾಡಿಲ್ಲ. ಮಧ್ಯವರ್ತಿಗಳು ಅಕ್ರಮವಾಗಿ ದರಗಳನ್ನು ಏರಿಕೆ ಮಾಡಿದ್ದಾರೆ.

ಬೆಲೆ ಏರಿಕೆಗೆ ಕಾರಣವಾದರ ವಿರುದ್ಧ ಕ್ರಮ ಕೈಗೊಳ್ಳಲಾಗುವುದು ಎಂದು ಹಿಮಾಲಯ ಔಷಧ ಕಂಪನಿ ತಿಳಿಸಿದೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

click me!

Recommended Stories

ಕೆನಡಾದ ಮಹಿಳಾ ವೈದ್ಯರಿಗೆ ತೋರಿಸಬಾರದನ್ನು ತೋರಿಸಿದ ಭಾರತೀಯ ಯುವಕನ ಬಂಧನ
ವಾಕ್ ಹೋಗಿದ್ದ 79 ವರ್ಷದ ಅಜ್ಜಿ ನಾಪತ್ತೆ: ನೆಕ್ಲೇಸ್‌ಗೆ ಮೊಮ್ಮಗ ಅಳವಡಿಸಿದ ಜಿಪಿಎಸ್‌ನಿಂದ ಪತ್ತೆ