ಹರಿಯಾಣ ವಿಧಾನಸಭಾ ಚುನಾವಣೆಯ ಮತ ಎಣಿಕೆ ಪ್ರಗತಿಯಲ್ಲಿದ್ದು, ಬಿಜೆಪಿ ಮತ್ತು ಕಾಂಗ್ರೆಸ್ ನಡುವೆ ತೀವ್ರ ಪೈಪೋಟಿ ಏರ್ಪಟ್ಟಿದೆ. ಎಕ್ಸಿಟ್ ಪೋಲ್ ಗಳು ಕಾಂಗ್ರೆಸ್ ಪಕ್ಷಕ್ಕೆ ಬಹುಮತ ಸೂಚಿಸಿದ್ದವು.
ನವದೆಹಲಿ: ಹರಿಯಾಣ ವಿಧಾನಸಭೆ ಚುನಾವಣೆಯ ಮತ ಎಣಿಕೆ ನಡೆಯುತ್ತಿದ್ದು, ಕ್ಷಣ ಕ್ಷಣಕ್ಕೆ ಮುನ್ನಡೆ ಮತ್ತು ಹಿನ್ನಡೆ ಅಂಕಿ ಸಂಖ್ಯೆಗಳು ಬದಲಾಗುತ್ತಿವೆ. ಚುನಾವಣಾ ಆಯೋಗದ ಪ್ರಕಾರ ಬೆಳಗ್ಗೆ 9.50 ರವರೆಗೆ, ಬಿಜೆಪಿ 38 ಸ್ಥಾನಗಳಲ್ಲಿ, ಕಾಂಗ್ರೆಸ್ 31, ಇಂಡಿಯನ್ ನ್ಯಾಷನಲ್ ಲೋಕದಳ ಒಂದು ಸ್ಥಾನ ಮತ್ತು ಸ್ವತಂತ್ರ 1 ಸ್ಥಾನಗಳಲ್ಲಿ ಮುಂದಿದೆ. ಇಲ್ಲಿಯವರೆಗೆ 71 ಸ್ಥಾನಗಳ ಟ್ರೆಂಡ್‌ಗಳು ಬಂದಿವೆ. ಹರಿಯಾಣದಲ್ಲಿ 90 ವಿಧಾನಸಭಾ ಕ್ಷೇತ್ರಗಳನ್ನು ಹೊಂದಿದ್ದು, ಸರ್ಕಾರ ರಚನೆಗೆ 46 ಸ್ಥಾನಗಳಲ್ಲಿ ಗೆಲ್ಲಬೇಕಿದೆ.
ಎಕ್ಸಿಟ್ ಪೋಲ್ ಪ್ರಕಾರ, ಹರಿಯಾಣದಲ್ಲಿ ಕಾಂಗ್ರೆಸ್ ಸರ್ಕಾರ ರಚಿಸಲಿದೆ ಎಂದು ಹೇಳಲಾಗಿದ್ದು, ಎರಡು ಅವಧಿಯ ಆಡಳಿತ ವಿರೋಧಿ ಅಲೆಯಲ್ಲಿ ಬಿಜೆಪಿಗೆ ಭಾರಿ ನಷ್ಟವಾಗಿದೆ ಎಂದು ಹೇಳಿದ್ದವು. ಹರಿಯಾಣದಲ್ಲಿ ಬಿಜೆಪಿ ಮೂರನೇ ಬಾರಿಗೆ ಸರ್ಕಾರ ರಚಿಸಲು ಸಂಪೂರ್ಣ ಪ್ರಯತ್ನ ನಡೆಸಿದೆ. ಇತ್ತ ಯಾವುದೇ ಪಕ್ಷದ ಸಹಾಯವಿಲ್ಲದೇ ಅಖಾಡಕ್ಕೆ ಧುಮುಕಿರುವ ಕಾಂಗ್ರೆಸ್ ಅಧಿಕಾರದ ಚುಕ್ಕಾಣಿ ಹಿಡಿಯಲು ಪ್ರಯತ್ನಿಸುತ್ತಿದೆ. 2019ರ ವಿಧಾನಸಭಾ ಚುನಾವಣೆಯಲ್ಲಿ ಯಾವುದೇ ಪಕ್ಷಕ್ಕೆ ಸ್ಪಷ್ಟ ಬಹುಮತ ಸಿಕ್ಕಿರಲಿಲ್ಲ.
ಚುನಾವಣಾ ಫಲಿತಾಂಶ: ಹರ್ಯಾಣ, ಕಾಶ್ಮೀರ ಈಗಿನ ಟ್ರೆಂಡ್ ಹೀಗಿದೆ ನೋಡಿ
ಕಾಂಗ್ರೆಸ್ 31, ಬಿಜೆಪಿ 40 ಸ್ಥಾನಗಳನ್ನು ಗೆಲ್ಲಲು ಶಕ್ತವಾಗಿತ್ತು. ಜನನಾಯಕ ಜನತಾ ಪಕ್ಷದ ಬೆಂಬಲ ಪಡೆದ ಬಿಜೆಪಿ ಹರಿಯಾಣದಲ್ಲಿ ಸರ್ಕಾರ ರಚನೆ ಮಾಡಿತ್ತು. ಬಿಜೆಪಿ ಸರ್ಕಾರದಲ್ಲಿ ಜನನಾಯಕ ಜನತಾ ಪಕ್ಷದ ದುಷ್ಯಂತ್ ಚೌತಾಲಾ ಅವರನ್ನು ಉಪ ಮುಖ್ಯಮಂತ್ರಿಯನ್ನಾಗಿ ಮಾಡಲಾಗಿತ್ತು.
ಲೋಕಸಭೆ ಚುನಾವಣೆಗೂ ಮುನ್ನವೇ ಜೆಜೆಪಿ ಜತೆಗಿನ ಬಿಜೆಪಿ ಮೈತ್ರಿ ಮುರಿದು ಬಿದ್ದಿತ್ತು. 2024ರ ಲೋಕಸಭೆ ಚುನಾವಣೆಯಲ್ಲೂ ಬಿಜೆಪಿ ಸೋಲು ಅನುಭವಿಸಬೇಕಾಯಿತು. 2019ರ ಲೋಕಸಭೆ ಚುನಾವಣೆಯಲ್ಲಿ 10 ರಲ್ಲಿ 10 ಸ್ಥಾನಗಳನ್ನು ಗೆದ್ದಿದ್ದ ಬಿಜೆಪಿ ಕೇವಲ 5 ಸ್ಥಾನಗಳಿಗೆ ಕುಸಿಯಿತು. ಅದೇ ಸಮಯದಲ್ಲಿ ಕಾಂಗ್ರೆಸ್ ಐದು ಸ್ಥಾನಗಳನ್ನು ಗೆದ್ದಿತ್ತು.
ಹಣವಿಲ್ಲ ಎಂದು ಎಲೆಕ್ಷನ್‌ಗೆ ನೂರಾರು ಕೋಟಿ ಖರ್ಚು ಮಾಡಿದ ಕಾಂಗ್ರೆಸ್!