ಹರ್ಯಾಣದ ಕೆಮಿಕಲ್‌ ಫ್ಯಾಕ್ಟರಿಯಲ್ಲಿ ಬೆಂಕಿ

Published : Apr 17, 2022, 10:46 PM IST
ಹರ್ಯಾಣದ ಕೆಮಿಕಲ್‌ ಫ್ಯಾಕ್ಟರಿಯಲ್ಲಿ ಬೆಂಕಿ

ಸಾರಾಂಶ

ಸೋನಿಪತ್‌ನ ಕುಂಡ್ಲಿಯಲ್ಲಿರುವ ರಾಸಾಯನಿಕ ಕಾರ್ಖಾನೆ ಬೆಂಕಿ ಅನಾಹುತಕ್ಕೆ ನಿಖರ ಕಾರಣ ತಿಳಿದು ಬಂದಿಲ್ಲ ಹರ್ಯಾಣದ ಕೆಮಿಕಲ್‌ ಫ್ಯಾಕ್ಟರಿಯಲ್ಲಿ ಬೆಂಕಿ

ಹರಿಯಾಣ: ಸೋನಿಪತ್‌ನ (Sonepat) ರಾಸಾಯನಿಕ ಕಾರ್ಖಾನೆಯಲ್ಲಿ (chemical factory)ಬೆಂಕಿ ಕಾಣಿಸಿಕೊಂಡಿದ್ದು, ಬೆಂಕಿ ಅನಾಹುತಕ್ಕೆ ನಿಖರ ಕಾರಣ ಇನ್ನೂ ತಿಳಿದು ಬಂದಿಲ್ಲ. ಸೋನಿಪತ್‌ನ ಕುಂಡ್ಲಿಯಲ್ಲಿರುವ ರಾಸಾಯನಿಕ ಕಾರ್ಖಾನೆಯಲ್ಲಿ ಭಾನುವಾರ ಸಂಜೆ ಭಾರಿ ಬೆಂಕಿ ಕಾಣಿಸಿಕೊಂಡಿದೆ. ಹರಿಯಾಣದ (Haryana) ಕೋರಿಕೆಯ ಮೇರೆಗೆ ದೆಹಲಿ ಅಗ್ನಿಶಾಮಕ ಸೇವೆಯು ತನ್ನ ಅಗ್ನಿಶಾಮಕ ಸಿಬ್ಬಂದಿಯನ್ನು ಕಾರ್ಯಾಚರಣೆಗೆ ಕಳುಹಿಸಿದೆ ಎಂದು ದೆಹಲಿ ಅಗ್ನಿಶಾಮಕ ಸೇವೆಯನ್ನು (Fire Service) ಉಲ್ಲೇಖಿಸಿ ಸುದ್ದಿ ಸಂಸ್ಥೆ ANI ವರದಿ ಮಾಡಿದೆ. ಬೆಂಕಿ ಅನಾಹುತಕ್ಕೆ ಕಾರಣ ಇನ್ನೂ ತಿಳಿದು ಬಂದಿಲ್ಲ. 

ವಾರದ ಹಿಂದಷ್ಟೇ ಗುಜರಾತ್‌ನ ಭರೂಚ್ ಜಿಲ್ಲೆಯ ಕೆಮಿಕಲ್ ಫ್ಯಾಕ್ಟರಿ ಕಾರ್ಖಾನೆಯಲ್ಲಿ ಭಾರಿ ಸ್ಫೋಟ ಸಂಭವಿಸಿತ್ತು. ಈ ಸ್ಫೋಟದಲ್ಲಿ 6 ಕಾರ್ಮಿಕರು ಸ್ಥಳದಲ್ಲೇ ಸಾವನ್ನಪ್ಪಿದದರು. ಘಟನೆ ಕುರಿತು ಮಾಹಿತಿ ಪಡೆದ ತಕ್ಷಣ ಜಿಲ್ಲಾಡಳಿತ ಹಾಗೂ ಪೊಲೀಸ್ ತಂಡ ಸ್ಥಳಕ್ಕೆ ಧಾವಿಸಿ ರಕ್ಷಣಾ ಕಾರ್ಯಾಚರಣೆ ಆರಂಭಿಸಿತ್ತು. ಈ ವೇಳೆ ಓರ್ವ ಕೂಲಿ ಕಾರ್ಮಿಕನ ಪ್ರಾಣ ರಕ್ಷಿಸಲಾಗಿತ್ತು. ವಾಸ್ತವವಾಗಿ, ಅಹಮದಾಬಾದ್‌ನಿಂದ ಸುಮಾರು 235 ಕಿಮೀ ದೂರದಲ್ಲಿರುವ ದಹೇಜ್ ಕೈಗಾರಿಕಾ ಪ್ರದೇಶದಲ್ಲಿರುವ ಘಟಕದಲ್ಲಿ ಭಾನುವಾರ ರಾತ್ರಿ 3 ಗಂಟೆಗೆ ಈ ದುರಂತ ಸಂಭವಿಸಿದೆ. ಸ್ಫೋಟದ ಬಳಿಕ ಕಾರ್ಖಾನೆಯಲ್ಲಿ ಬೆಂಕಿ ಕಾಣಿಸಿಕೊಂಡು ಇಲ್ಲಿ ಕೆಲಸ ಮಾಡುತ್ತಿದ್ದ ಆರು ಕಾರ್ಮಿಕರು ಸಾವನ್ನಪ್ಪಿದ್ದಾರೆ. ಅಲ್ಲದೇ ಓರ್ವ ಯುವಕ ಗಂಭೀರವಾಗಿ ಗಾಯಗೊಂಡಿದ್ದಾನೆ.

ಗುಜರಾತ್‌ನ ಭರೂಚ್‌ನಲ್ಲಿ ದುರಂತ, ಕೆಮಿಕಲ್ ಫ್ಯಾಕ್ಟರಿಯಲ್ಲಿ ಸ್ಪೋಟ, 6 ಕಾರ್ಮಿಕರು ಸಾವು!

ಅಪಘಾತದ ಬಗ್ಗೆ ತನಿಖೆ ನಡೆಸುತ್ತಿರುವ ಪೊಲೀಸ್ ಅಧಿಕಾರಿಗಳು ಇದು ಸಾವಯವ ರಾಸಾಯನಿಕ ಕಾರ್ಖಾನೆ ಎಂದು ಹೇಳಿದ್ದಾರೆ. ತಡರಾತ್ರಿ ಕಾರ್ಖಾನೆಯಲ್ಲಿ ಸಂಭವಿಸಿದ ಸ್ಫೋಟದಿಂದಾಗಿ ಕಾರ್ಖಾನೆಗೆ ಬೆಂಕಿ ಹೊತ್ತಿಕೊಂಡಿದೆ. ನಂತರ ಶವಗಳನ್ನು ಹೊರತೆಗೆದು ಮರಣೋತ್ತರ ಪರೀಕ್ಷೆಗೆ ಕಳುಹಿಸಲಾಗಿದೆ. ಬೆಂಕಿ ಕೂಡ ನಿಯಂತ್ರಣಕ್ಕೆ ಬಂದಿದೆ ಎಂದಿದ್ದಾರೆ.

ಕಳೆದ ವರ್ಷವೂ ವಡೋದರದ (Vadodara) ಜಗಡಿಯಾ ಬಳಿಯ ಗುಜರಾತ್ ಇಂಡಸ್ಟ್ರಿಯಲ್ ಡೆವಲಪ್‌ಮೆಂಟ್ ಕಾರ್ಪೊರೇಷನ್ (Gujarat Industrial Development Corporation) ಪ್ರದೇಶದ ರಾಸಾಯನಿಕ ಕಾರ್ಖಾನೆಯಲ್ಲಿ ಇದೇ ರೀತಿಯ ಭೀಕರ ಸ್ಫೋಟ ಸಂಭವಿಸಿತ್ತು ಎಂಬುವುದು ಉಲ್ಲೇಖನೀಯ. ಅಲ್ಲಿ ಸ್ಫೋಟದ ನಂತರ ಬೆಂಕಿ ಹೊತ್ತಿಕೊಂಡಿತ್ತು. ಸ್ಫೋಟವು ಎಷ್ಟು ಪ್ರಬಲವಾಗಿತ್ತು ಎಂದರೆ ಅದರ ಶಬ್ದದಿಂದಾಗಿ ಸುತ್ತಮುತ್ತಲಿನ ಮನೆಗಳ ಕಿಟಕಿಗಳು ಮುರಿದು 24 ಕಾರ್ಮಿಕರು ಗಾಯಗೊಂಡಿದ್ದರು. 

Blast In Chemical Factory: ಗುಜರಾತ್‌ನ ವಡೋದರಾದಲ್ಲಿ ಸ್ಫೋಟ : ನಾಲ್ವರ ದಾರುಣ ಸಾವು
 

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

Read more Articles on
click me!

Recommended Stories

Vande Mataram ಎರಡು ಪದಗಳ ಅರ್ಥ ವಿವರಿಸಿದ ಇಕ್ರಾ ಹಸನ್: ಸಂಸದೆಯ ಮಾತು ವೈರಲ್
ವಿದೇಶಗಳಿಗೆ ಭಾರತೀಯ ಪ್ರತಿಭೆ : ನಷ್ಟವೋ ? ಪ್ರಭಾವವೋ?