ಸಿಖ್ ಧರ್ಮ ಗುರು ಆತ್ಮಹತ್ಯೆ; ಡೆತ್‌ನೋಟ್‌ನಲ್ಲಿ ರೈತ ಪ್ರತಿಭಟನೆಯ ಸ್ಫೋಟಕ ಮಾಹಿತಿ!

Published : Dec 16, 2020, 09:04 PM ISTUpdated : Dec 16, 2020, 09:05 PM IST
ಸಿಖ್ ಧರ್ಮ ಗುರು ಆತ್ಮಹತ್ಯೆ; ಡೆತ್‌ನೋಟ್‌ನಲ್ಲಿ ರೈತ ಪ್ರತಿಭಟನೆಯ ಸ್ಫೋಟಕ ಮಾಹಿತಿ!

ಸಾರಾಂಶ

ರೈತರ ಪ್ರತಿಭಟನೆಗೆ ರಾಜಕೀಯ ಪಕ್ಷಗಳು, ಮುಖಂಡರು, ಸೆಲೆಬ್ರೆಟಿಗಳು, ಕ್ರೀಡಾಪಟುಗಳು ಬೆಂಬಲ ಸೂಚಿಸಿದ್ದಾರೆ. ಹಲವು ರೈತರ ಪ್ರತಿಭಟನೆಯಲ್ಲಿ ಪಾಲ್ಗೊಂಡು ಕೇಂದ್ರ ಸರ್ಕಾದ ವಿರುದ್ಧ ಭಾಷಣ ಮಾಡಿದ್ದಾರೆ. ಆದರೆ ರೈತ ಪ್ರತಿಭಟನೆಯಲ್ಲಿ ಪಾಲ್ಗೊಂಡ ಸಿಖ್ ಧರ್ಮಗುರು ಗುಂಡಿಕ್ಕಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಡೆತ್‌ನೋಟ್‌ನಲ್ಲಿ ಏನಿದೆ? ಇಲ್ಲಿದೆ ವಿವರ.  

ದೆಹಲಿ(ಡಿ.16): ಕೇಂದ್ರ ಕೃಷಿ ಕಾಯ್ದೆ ವಿರೋಧಿಸಿ ನಡೆಯುತ್ತಿರುವ ರೈತ ಪ್ರತಿಭಟನೆಗೆ ಪ್ರತಿ ದಿನ ಸಾವಿರಾರು ಸಂಖ್ಯೆಯಲ್ಲಿ ಸಂಘಟನೆಗಳ ಸದಸ್ಯರು, ರಾಜಕೀಯ ಪಕ್ಷಗಳ ಸದಸ್ಯರು ಸೇರಿಕೊಳ್ಳುತ್ತಿದ್ದಾರೆ. ಹೀಗೆ ಮಂಗಳವಾರ(ಡಿ.15) ಸಂಜೆ ದೆಹಲಿ ಗಡಿಯಲ್ಲಿ ನಡೆಯುತ್ತಿರುವ ರೈತ ಪ್ರತಿಭಟನೆ ಸೇರಿಕೊಂಡ ಹರ್ಯಾಣ ಗುರುದ್ವಾರದ ಧರ್ಮಗುರು ಇಂದು(ಡಿ.16) ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ರೈತರೊಂದಿಗೆ ಮೋದಿ ಮಾತುಕತೆ; ಅನ್ನದಾತನ ಹಾದಿತಪ್ಪಿಸುತ್ತಿದೆ ವಿಪಕ್ಷ ಎಂದ ಪ್ರಧಾನಿ!

65 ವರ್ಷದ ಬಾಬಾ ರಾಮ್ ಸಿಂಗ್ ಗುಂಡಿಕ್ಕಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಪ್ರತಿಭಟನಾ ಸ್ಥಳದಲ್ಲೇ ಈ ಘಟನೆ ನಡೆದಿದೆ. ತಕ್ಷಣವೇ ಪೊಲೀಸರು ಪಾಣಿಪತ್‌ನಲ್ಲಿರುವ ಪಾರ್ಕ್ ಆಸ್ಪತ್ರೆಗೆ ಕರೆದೊಯ್ಯಲಾಯಿತು. ಆದರೆ ಅಷ್ಟರೊಳಗೆ ಧರ್ಮಗುರು ಸಾವನ್ನಪ್ಪಿದ್ದರು ಎಂದು ವೈದ್ಯರು ಖಚಿತಪಡಿಸಿದ್ದಾರೆ.

ಭಾರತದ ರೈತ ಪ್ರತಿಭಟನೆಗೆ ಲಂಡನ್‌‌ನಿಂದ ಬೆಂಬಲ; ಕಾರಣ ಏನು?

ಧರ್ಮಗುರು ಆತ್ಮಹತ್ಯೆಗೂ ಮುನ್ನ ಡೆತ್‌ನೋಟ್ ಬರೆದಿಟ್ಟಿದ್ದಾರೆ. ಈ ಪತ್ರದಲ್ಲಿ ರೈತರು ತಮ್ಮ ಹಕ್ಕುಗಳಿಗಾಗಿ ಹೋರಾಟ ಮಾಡುತ್ತಿದ್ದಾರೆ. ಅವರ ನೋವು ನನಗೆ ಅರ್ಥವಾಗುತ್ತೆ. ಅವರ ನೋವನ್ನು ನಾನು ಹಂಚಿಕೊಳ್ಳುತ್ತೇನೆ. ರೈತರು ನಿರಂತರ ಹೋರಾಟ ಮಾಡುತ್ತಿದ್ದರೂ, ಕೇಂದ್ರ ಸರ್ಕಾರ ನ್ಯಾಯ ಒದಗಿಸುತ್ತಿಲ್ಲ. ರೈತರ ಪ್ರತಿಭಟನೆಗೆ ಹಲವರು ಅವರದ್ದೇ ರೀತಿಯಲ್ಲಿ ಬೆಂಬಲಿಸಿದ್ದಾರೆ. ಹಲವು ಕ್ರೀಡಾಪಟುಗಳು ತಮ್ಮ ಪ್ರಶಸ್ತಿಗಳನ್ನು ವಾಪಸ್ ನೀಡಿದ್ದಾರೆ. ನಾನು ತ್ಯಾಗದ ಮೂಲಕ ಈ ಪ್ರತಿಭಟನೆ ಬೆಂಬಲಿಸುತ್ತೇನೆ ಎಂದು ಡೆತ್ ನೋಟ್‌ನಲ್ಲಿ ಹೇಳಿದ್ದಾರೆ.

ರೈತ ಪ್ರತಿಭಟನೆ ಆರಂಭಗೊಂಡ ಬಳಿಕ 20ಕ್ಕೂ ಹೆಚ್ಚು ರೈತರು ಸಾವನ್ನಪ್ಪಿದ್ದಾರೆ. ಸರಾಸರಿ ಪ್ರಕಾರ ಪ್ರತಿ ದಿನ ಒರ್ವ ರೈತ ಸಾವನ್ನಪ್ಪುತ್ತಿದ್ದಾನೆ ಎಂದು ರೈತ ಮುಖಂಡ ಹೇಳಿದ್ದಾರೆ. 

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

click me!

Recommended Stories

18 ದಿನದಲ್ಲಿ 10 ಲಕ್ಷ ಪ್ರಯಾಣಿಕರ ಇಂಡಿಗೋ ಟಿಕೆಟ್‌ ರದ್ದು
ಬೆಂಗ್ಳೂರಲ್ಲಿ ಸಿ-130 ವಿಮಾನ ವಿರ್ವಹಣಾ ಕೇಂದ್ರಕ್ಕೆ ಶಂಕು