ಹಾಸನ ದುರಂತಕ್ಕೆ ಮೋದಿ ಸಂತಾಪ, ಮೃತರ ಕುಟುಂಬಕ್ಕೆ 2 ಲಕ್ಷ ರೂಪಾಯಿ ಪರಿಹಾರ ಘೋಷಣೆ

Published : Sep 13, 2025, 09:15 AM IST
Hassan tragedy PM Modi aid

ಸಾರಾಂಶ

ಹಾಸನ ದುರಂತಕ್ಕೆ ಮೋದಿ ಸಂತಾಪ, ಮೃತರ ಕುಟುಂಬಕ್ಕೆ 2 ಲಕ್ಷ ರೂಪಾಯಿ ಪರಿಹಾರ ಘೋಷಣೆ ಮಾಡಿದ್ದಾರೆ. ಘಟನೆಯಲ್ಲಿ ಸಾವು ನೋವು ಎದುರಿಸುತ್ತಿರುವ ಕುಟುಂಬದ ಜೊತೆಗಿರುವುದಾಗಿ ಮೋದಿ ಹೇಳಿದ್ದಾರೆ.   

ನವದೆಹಲಿ (ಸೆ.13) ಹಾಸನದ ಮೊಸಳೆ ಹೊಸಳ್ಳಿಯಲ್ಲಿ ನಡೆದ ದುರಂತ ರಾಜ್ಯವನ್ನೇ ಬೆಚ್ಚಿ ಬೀಳಿಸಿದೆ. ಗಣೇಶ ವಿಸರ್ಜನೆಯಲ್ಲಿ ಪಾಲ್ಗೊಂಡವರ ಮೇಲೆ ಕ್ಯಾಂಟರ್ ಹರಿದ ಭೀಕರ ಘಟನೆ ನಡೆದಿದೆ. ಈ ಘಟನೆಯಲ್ಲಿ 9 ವಿದ್ಯಾರ್ಥಿಗಳು ಮೃತಪಟ್ಟಿದ್ದಾರೆ. 27ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ. ಹಾಸನದಲ್ಲಿ ಮಡಿದ ಕುಟುಂಬಕ್ಕೆ ರಾಜ್ಯ ಸರ್ಕಾರ ಪರಿಹಾರ ಘೋಷಿಸಿದೆ. ಇದೀಗ ಹಾಸನ ದುರಂತ ಕುರಿತು ಪ್ರಧಾನಿ ನರೇಂದ್ರ ಮೋದಿ ತೀವ್ರ ನೋವು ವ್ಯಕ್ತಪಡಿಸಿದ್ದಾರೆ. ಇದೇ ವೇಳೆ ಮೃತರ ಕುಟುಂಬಕ್ಕೆ ತಲಾ 2 ಲಕ್ಷ ರೂಪಾಯಿ ಪರಿಹಾರ ಹಾಗೂ ಗಾಯಾಳುಗಳಿಗೆ ತಲಾ 50,000 ರೂಪಾಯಿ ಪರಿಹಾರ ಘೋಷಿಸಿದ್ದಾರೆ.

ಘಟನೆ ಕುರಿತು ಟ್ವೀಟ್ ಮಾಡಿರುವ ಮೋದಿ ಕಾರ್ಯಾಲಯ, ತೀವ್ರ ಆಘಾತ ವ್ಯಕ್ತಪಡಿಸಿದೆ. ಕರ್ನಾಟಕದ ಹಾಸನದಲ್ಲಿ ನಡೆದ ದುರಂತ ಹೃದಯ ಕಿವುಚುವಂತಿದೆ. ಈ ದುರಂತದ ಸಮಯದಲ್ಲಿ ನಾನು ಘಟನೆಯಲ್ಲಿ ಮಡಿದ ಕುಟುಂಬಸ್ಥರು, ಗಾಯಗೊಂಡವರ ಜೊತೆಗಿದ್ದೇನೆ. ಘಟನೆಯಲ್ಲಿ ಗಾಯಗೊಂಡವರು ಶೀಘ್ರದಲ್ಲೇ ಚೇತರಿಸಿಕೊಳ್ಳಲಿ ಎಂದು ಪ್ರಾರ್ಥಿಸುತ್ತೇನೆ. ಮೃತರ ಕುಟುಂಬಕ್ಕೆ PMNRF ನಿಧಿಯಿಂದ 2 ಲಕ್ಷ ರೂಪಾಯಿ ಪರಿಹಾರ ಹಾಗೂ ಗಾಯಾಳುಗಳಿಗೆ ತಲಾ 50,00 ರೂಪಾಯಿ ಪರಿಹಾರ ನೀಡಲಾಗುತ್ತದೆ ಎಂದು ಟ್ವೀಟ್ ಮಾಡಿದ್ದಾರೆ.

 

 

ಗಣೇಶ ವಿಸರ್ಜನೆಗೆ 10 ನಿಮಿಷ ಬಾಕಿ ಇರುವಾಗಲೇ ದುರಂತ

ಮೊಸಳೆ ಹೊಸಳ್ಳಿಯಲ್ಲಿ ಗಣೇಶ ಕೂರಿಸಿ ಕಳೆದ ಕೆಲದಿನಗಳಿಂದ ಪ್ರತಿ ದಿನ ಪೂಜೆ ನೆರೇವೇರಿತ್ತು. ಇಡೀ ಗ್ರಾಮಸ್ಥರು ಈ ಪೂಜೆಯಲ್ಲಿ ಪಾಲ್ಗೊಂಡಿದ್ದರು. ನಿನ್ನೆ (ಸೆ.12) ರಾತ್ರಿ ಗಣೇಶ ವಿಸರ್ಜನೆ ಹಿನ್ನಲೆಯಲ್ಲಿ ಪೂಜೆಗಳು ನಡೆದಿತ್ತು. ಬಳಿಕ ಅದ್ದೂರಿಯಾಗಿ ಗಣೇಶ ವಿಸರ್ಜನೆ ಮೆರವಣಿಗೆ ಆರಂಭಗೊಂಡಿತ್ತು. ಸ್ಥಳೀಯರು, ವಿದ್ಯಾರ್ಥಿಗಳು ಸೇರಿದಂತೆ ಹಲವರು ಗಣೇಶ ವಿಸರ್ಜನೆ ಮೆರವಣಿಗೆಯಲ್ಲಿ ಪಾಲ್ಗೊಂಡಿದ್ದರು. ಗಂಟೆಗಳ ಕಾಲ ಸಾಗಿ ಬಂದ ಮೆರವಣಿಗೆ ಇನ್ನೇನು 10 ನಿಮಿಷದಲ್ಲಿ ಅಂತ್ಯಗೊಳ್ಳುತ್ತಿತ್ತು. ಬಳಿಕ ಗಣೇಶ ವಿಸರ್ಜನೆ ಮಾಡಲಾಗುತ್ತಿತ್ತು. ಆದರೆ 10 ನಿಮಿಷ ಬಾಕಿ ಇರುವಾಗಲೇ ಕ್ಯಾಂಟರ್ ಹರಿದು ದುರಂತ ಸಂಭವಿಸಿದೆ.

ಚಾಲಕನ ಮದ್ಯಪಾನ ದುರಂತಕ್ಕೆ ಕಾರಣವಾಯಿತಾ? ಗಣೇಶ ವಿಸರ್ಜನೆಯಲ್ಲಿ 9 ವಿದ್ಯಾರ್ಥಿಗಳ ಬಲಿ

ಕ್ಯಾಂಟರ್ ಅತೀ ವೇಗದಿಂದ ಬಂದು ಅಪ್ಪಳಿಸಿದೆ. ಮುಂದೆ ಸಾಗುತ್ತಿದ್ದ ಬೈಕ್ ಸವಾರನಿಗೆ ಡಿಕ್ಕಿ ಹೊಡೆದು ಡಿವೈಡರ್ ಹಾರಿ ವಿದ್ಯಾರ್ಥಿಗಳ ಮೇಲೆ ಹರಿದಿದೆ. 100ಕ್ಕೂ ಹೆಚ್ಚು ವಿದ್ಯಾರ್ಥಿಗಳು ಗುಂಪಾಗಿ ಪಾಲ್ಗೊಂಡಿದ್ದರು. ಚಾಲಕನ ಅಜಾಗರೂಕತೆಯಿಂದ ಈ ಅವಘಡ ಸಂಭವಿಸಿದೆ ಎಂದು ಪ್ರಾಥಮಿಕ ಮಾಹಿತಿಗಳು ಹೇಳುತ್ತಿದೆ. ವಿದ್ಯಾರ್ಥಿಗಳ ಮೇಲೆ ಕ್ಯಾಂಟರ್ ಹರಿದ ಕಾರಣ ಸ್ಥಳದಲ್ಲೇ ಐವರು ಮೃತಪಟ್ಟಿದ್ದಾರೆ. ಇನ್ನು ನಾಲ್ವರು ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ. 27ಕ್ಕೂ ಹೆಚ್ಚು ಮಂದಿಗೆ ಗಾಯವಾಗಿದೆ. ಈ ಪೈಕಿ ಮೂವರು ಪರಿಸ್ಥಿತಿ ಗಂಭೀರವಾಗಿದೆ.

ಮೃತರ ಕುಟುಂಬಕ್ಕೆ ರಾಜ್ಯ ಸರ್ಕಾರದಿಂದ 5 ಲಕ್ಷ ರೂ ಪರಿಹಾರ

ಮೃತರ ಕುಟುಂಬಕ್ಕೆ ರಾಜ್ಯ ಸರ್ಕಾರ ತಲಾ 5 ಲಕ್ಷ ರೂಪಾಯಿ ಪರಿಹಾರ ಘೋಷಿಸಿದೆ. ಗಾಯಾಳುಗಳಿಗೆ ಸೂಕ್ತ ಚಿಕಿತ್ಸೆ ವ್ಯವಸ್ಥೆ ಮಾಡಲಾಗಿದೆ. ಘಟನೆಗೆ ಸರ್ಕಾರ ಹಾಗೂ ಸಚಿವರು ತೀವ್ರ ಆಘಾತ ವ್ಯಕ್ತಪಡಿಸಿದ್ದಾರೆ. ಮೃತಪಟ್ಟ ವಿದ್ಯಾರ್ಥಿಗಳ ಕುಟುಂಬದ ಜೊತೆ ಸರ್ಕಾರ ನಿಲ್ಲುವುದಾಗಿ ಹೇಳಿದೆ.

ಹಾಸನ ದುರಂತಕ್ಕೆ ಕಾರಣನಾದ ಚಾಲಕ ಭುವನೇಶ್‌ ವಶಕ್ಕೆ, ಮೃತರಿಗೆ ಸರ್ಕಾರದಿಂದ 5 ಲಕ್ಷ ಪರಿಹಾರ!

ಚಾಲಕನ ಬಂಧಿಸಿದ ಪೊಲೀಸ್

ದುರಂತಕ್ಕೆ ಕಾರಣವಾದ ಚಾಲಕ ಭುವನೇಶ್ವರ್‌ನನ್ನು ಪೊಲೀಸರು ಬಂಧಿಸಿದ್ದಾರೆ. ಅತೀ ವೇಗದ ಚಾಲನೆ, ಅಜಾಗರೂಕತೆ ಘಟನೆಗೆ ಪ್ರಮುಖ ಕಾರಣವಾಗಿದೆ. ಇನ್ನು ಪ್ರತ್ಯಕ್ಷ ದರ್ಶಿಗಳ ಪ್ರಕಾರ ಚಾಲಕ ಮದ್ಯಾಪಾನ ಮಾಡಿದ್ದ ಎಂದು ಆರೋಪಿಸಿದ್ದಾರೆ.

 

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

Read more Articles on
click me!

Recommended Stories

ರತನ್ ಟಾಟಾ ಮಲತಾಯಿ, ಲ್ಯಾಕ್‌ಮೆ ಫ್ಯಾಶನ್ ಸಂಸ್ಥಾಪಕಿ ಸೈಮನ್ ಟಾಟಾ ನಿಧನ
ಭಾರತದ 2 ಬಿಲಿಯನ್ ಡಾಲರ್ ಪರಮಾಣು ಜಲಾಂತರ್ಗಾಮಿ ಒಪ್ಪಂದ ಅಂತಿಮಗೊಳಿಸಿದ ಪುಟಿನ್ ಭೇಟಿ