ಪ್ರಚೋದನಕಾರಿ ಹೇಳಿಕೆ ಪ್ರಕರಣ 2019, ಯೋಗಿ ವಿರುದ್ಧ ಅಬ್ಬರಿಸಿದ ಅಜಂ ಖಾನ್‌ಗೆ ಜೈಲು!

By Suvarna NewsFirst Published Oct 27, 2022, 3:11 PM IST
Highlights

ಸಮಾಜವಾದಿ ಪಕ್ಷದ ನಾಯಕ ಅಜಂ ಖಾನ್‌ ಮೇಲಿನ ಆರೋಪ ಸಾಬೀತಾಗಿದೆ. ಸಿಎಂ ಯೋಗಿ ಆದಿತ್ಯನಾಥ್ ವಿರುದ್ದ ಪ್ರಚೋದನ ಕಾರಿ ಹೇಳಿಕೆ ನೀಡಿದ್ದ ಅಜಂ ಖಾನ್ ತಪ್ಪಿತಸ್ಥ ಎಂದು ಕೋರ್ಟ್ ಹೇಳಿದೆ.  
 

ಲಖನೌ(ಅ.27):   ಉತ್ತರ ಪ್ರದೇಶ ರಾಜಕೀಯದಲ್ಲಿ ಪ್ರಚೋದನಕಾರಿ ಹೇಳಿಕೆ, ಆರೋಪ, ಪ್ರತ್ಯಾರೋಪ ಹೊಸದೇನಲ್ಲ. ಆದರೆ ಎಲ್ಲೆ ಮೀರಿದಾಗ ಪ್ರಕರಣಗಳು ದಾಖಲಾಗಿದೆ. ಛೀಮಾರಿ ಹಾಕಿದ ಘಟನೆಗಳು ಇವೆ. ಇದೀಗ 2019ರಲ್ಲಿ ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ವಿರುದ್ಧ ಸಮಾಜವಾದಿ ಪಕ್ಷದ ಹಿರಿಯ ನಾಯಕ ಅಜಂ ಖಾನ್ ನೀಡಿದ ಪ್ರಚೋದನಕಾರಿ ಹೇಳಿಕೆ ಪ್ರಕರಣ ತೀರ್ಪು ಹೊರಬಿದ್ದಿದೆ. ವಿಶೇಷ ಕೋರ್ಟ್‌ನಲ್ಲಿ ನಡೆದ ಈ ವಿಚಾರಣೆಯಲ್ಲಿ ಅಜಂ ಖಾನ್ ತಪ್ಪಿತಸ್ಥ ಎಂದು ಕೋರ್ಟ್ ತೀರ್ಪು ನೀಡಿದೆ. ಇಷ್ಟೇ ಅಲ್ಲ 3 ವರ್ಷ ಜೈಲು ಶಿಕ್ಷೆ ವಿಧಿಸಿದೆ.

2019ರ ಲೋಕಸಭಾ ಚುನಾವಣೆಯಲ್ಲಿ ರಾಂಪುರ ಕ್ಷೇತ್ರದಿಂದ ಸ್ಪರ್ಧಿಸಿದ ಸಮಾಜವಾದಿ ಪಕ್ಷದ ನಾಯಕ ಭಾಷಣದ ವೇಳೆ ಯೋಗಿ ಆದಿತ್ಯನಾಥ್ ವಿರುದ್ಧ ಪ್ರಚೋದನಕಾರಿ ಹಾಗೂ ವಿವಾದಾತ್ಮ ಹೇಳಿಕೆ ನೀಡಿದ್ದರು. ಈ ಕುರಿತು ರಾಂಪುರದ ಮಿಲಕ್ ಕೋಟ್ವಾಲಿ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಇದೇ ಭಾಷಣದಲ್ಲಿ ಅಜಂ ಖಾನ್ ಎರಡು ಸಮುದಾಯಗಳ ನಡುವೆ ದ್ವೇಷ ಬಿತ್ತುವ ಹೇಳಿಕೆಯನ್ನು ನೀಡಿದ್ದರು. ಈ ಕುರಿತು 153a, 505-1 ಸೆಕ್ಷನ್ ಅಡಿ ಪ್ರಕರಣ ದಾಖಲಾಗಿತ್ತು. ಈ ಪ್ರಕರಣವನ್ನು ರಾಂಪುರ ವಿಶೇಷ ಕೋರ್ಟ್ ವಿಚಾರಣೆ ನಡೆಸಿದೆ. 

ಎಮ್ಮೆ ಬಳಿಕ ಆಜಂ ಖಾನ್ ವಿರುದ್ಧ ಮೇಕೆ ಕಳ್ಳತನದ ಆರೋಪ!

ಅಜಂ ಖಾನ್ ತಪ್ಪಿತಸ್ಥ ಎಂಬುದು ಸಾಬೀತಾಗಿರುವ ಕಾರಣ ಅಜಂ ಖಾನ್ ಸಂಸದ ಸ್ಥಾನದಿಂದ ಅಮಾನತುಗೊಳ್ಳಲಿದೆ.  ಯಾವುದೇ ರಾಜಕೀಯ ಪ್ರತಿನಿಧಿ, ಶಾಸಕ, ಸಂಸದ, ಎಂಎಲ್‌ಸಿ ಮೇಲಿನ ಕ್ರಿಮಿನಲ್ ಕೇಸ್ ಸಾಬೀತಾದರೆ ಸ್ಥಾನ ಕಳೆದುಕೊಳ್ಳಲಿದ್ದಾರೆ. ಈ ಕುರಿತು 2013ರಲ್ಲಿ ಸುಪ್ರೀಂ ಕೋರ್ಟ್ ನೀಡಿದೆ. 

ಅಜಂ ಖಾನ್ ಯೋಗಿ ಆದಿತ್ಯನಾಥ್ ವಿರುದ್ಧ ಮಾತ್ರವಲ್ಲ 2019ರಲ್ಲಿ ಬಿಜೆಪಿ ಸಂಸದೆ ಜಯಪ್ರದಾ ವಿರುದ್ಧ ಹೇಳಿಕೆ ನೀಡಿದ್ದರು. ಮಹಿಳಾ ನಿಂದನೆ ಹೇಳಿಕೆಯನ್ನು ಭಾರತವೇ ಖಂಡಿಸಿತ್ತು. ಜಯಪ್ರದಾ ಧರಿಸುವುದು ಖಾಕಿ ಅಂಡರ್‌ವೇರ್‌’ ಎಂಬ ಖಾನ್‌ ಹೇಳಿಕೆ ವಿರುದ್ಧ ರಾಂಪುರದಲ್ಲಿ ಸೆಕ್ಷನ್‌ 509 (ಮಹಿಳೆಯ ಚರಿತ್ರಹರಣ ಮಾಡುವಂತಹ ಹೇಳಿಕೆ/ಕೃತ್ಯ) ಅಡಿ ಪ್ರಕರಣ ದಾಖಲಾಗಿತ್ತು.  ಆದರೆ ಖಾನ್‌ ಹೇಳಿಕೆಯ ವಿರುದ್ಧ ತಿರುಗಿಬಿದ್ದಿರುವ ಜಯಪ್ರದಾ, ‘ಆಜಂ ಲಕ್ಷ್ಮಣರೇಖೆಯನ್ನು ಮೀರಿದ್ದಾರೆ. ಅವರು ಎಂದೂ ಇನ್ನು ನನ್ನ ಸೋದರನಲ್ಲ. ಈವರೆಗೂ ಸೋದರ ಎಂದು ಸುಮ್ಮನಿದ್ದೆ. ಇನ್ನೆಂದೂ ಸುಮ್ಮನಿರಲ್ಲ. ನಾನು ಸತ್ತರೇ ನಿಮಗೆ ಸಮಾಧಾನವಾ ಆಜಂಖಾನ್‌?’ ಎಂದು ಆಕ್ರೋಶಭರಿತರಾಗಿ ಪ್ರಶ್ನಿಸಿದ್ದರು.

ಭೂ ಮಾಫಿಯಾಗಾರರ ಪಟ್ಟಿಯಲ್ಲಿ ರಾಂಪುರ ಸಂಸದ ಆಜಂಖಾನ್‌?

ಅಖಿಲೇಶ್‌ ಯಾದವ್‌ ಸಮ್ಮುಖದಲ್ಲೇ ಚುನಾವಣಾ ಭಾಷಣ ಮಾಡಿದ್ದ ಆಜಂ ಖಾನ್‌, ‘ನಿಮಗೆ (ಜನರಿಗೆ) ಅಸಲಿಯತ್ತಿನ ಬಗ್ಗೆ ತಿಳಿಯಲು 17 ವರ್ಷ ಬೇಕಾದವು. ಆದರೆ ನನಗೆ 17 ದಿನದಲ್ಲೇ ಆಕೆಯ ಕೆಳಗಿನ ಅಂಡರ್‌ವೇರ್‌ ಖಾಕಿ ಬಣ್ಣದ್ದೆಂದು ತಿಳಿಯಿತು’ ಎಂದು ಜಯಪ್ರದಾ ಹೆಸರೆತ್ತದೇ ಆಜಂ ವಿವಾದಿತ ಹೇಳಿಕೆ ನೀಡಿದ್ದರು.

click me!