ಭಾರತದ ತ್ರಿವರ್ಣ ಧ್ವಜ ಉಲ್ಲೇಖಿಸಿ ವಿವಾದಾತ್ಮಕ ಹೇಳಿಕೆ| ಮುಫ್ತಿಗೆ ಮುಖಭಂಗ| ಮೂವರು ಹಿರಿಯ ನಾಯಕರು ಪೀಪಲ್ಸ್ ಡೆಮಾಕ್ರಟಿಕ್ ಪಾರ್ಟಿ(ಪಿಡಿಪಿ)ಗೆ ಗುಡ್‌ಬೈ
ಹತ್ರಾಸ್(ಅ.27): ದೇಶಾದ್ಯಂತ ತೀವ್ರ ಆಕ್ರೋಶಕ್ಕೆ ಗುರಿಯಾಗಿದ್ದ ಹತ್ರಾಸ್ ಪ್ರಕರಣ ಸಂಬಂಧ ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು ಪಗ್ರಕಟಿಸಿದೆ. ಸಿಬಿಐ ನೇತೃತ್ವದಲ್ಲಿ ನಡೆಯುತ್ತಿರುವ ಈ ಪ್ರಕರಣದ ತನಿಖೆಯನ್ನು ಅಲಹಾಬಾದ್ ಹೈಕೋರ್ಟ್ ಮೇಲ್ವಿಚಾರಣೆ ಮಾಡಲಿದೆ ಎಂದು ಸುಪ್ರೀಂ ಕೋರ್ಟ್ ಸ್ಪಷ್ಟಪಡಿಸಿದೆ.
ಕಳೆದ ತಿಂಗಳು ಹತ್ರಾಸ್ ಎಂಬಲ್ಲಿ 19 ವರ್ಷದ ದಲಿತ ಯುವತಿಯನ್ನು ಅದೇ ಊರಿನ ಕೆಲ ಮೇಲ್ಜಾತಿಯವರು ಸಾಮೂಹಿಕ ಅತ್ಯಾಚಾರ ಎಸಗಿ ಕೊಲೆ ಮಾಡಿದ್ದರು. ಸಂತ್ರಸ್ತೆಯ ನಾಲಿಗೆಯನ್ನು ಕತ್ತರಿಸಿ, ಬೆನ್ನಿನ ಮೂಲೆ ಮುರಿದು ಅಮಾನವೀಯವಾಗಿ ಕೊಲೆ ಮಾಡಲಾಗಿತ್ತು. ಹೀಗಾಗಿ ಈ ಪ್ರಕರಣ ಇಡೀ ರಾಷ್ಟ್ರಾಧ್ಯಂತ ಸದ್ದು ಮಾಡಿತ್ತು. ಜನಕ್ರೋಶಕ್ಕೆ ಮಣಿದಿದ್ದ ಉತ್ತರಪ್ರದೇಶ ಈ ಪ್ರಕರಣವನ್ನು ಸಿಬಿಐಗೆ ವರ್ಗಾಯಿಸಿತ್ತು. ಆದರೀಗ ಈ ಪ್ರಕರಣದ ತನಿಖೆ ಸುಪ್ರೀಂ ಕೋರ್ಟ್ ಮೇಲ್ವಿಚಾರಣೆಯಲ್ಲೇ ನಡೆಬೇಕು ಎಂದು ಸಾಮಾಜಿಕ ಕಾರ್ಯಕರ್ತೆ ಸತ್ಯಮಾ ದುಬೆ ಒತ್ತಾಯಿಸಿ ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆದಿದೆ. ಈ ತನಿಖೆಯನ್ನು ಅಲಹಾಬಾದ್ ಹೈಕೋರ್ಟ್ ಮೇಲ್ವಿಚಾರಣೆ ಮಾಡಲಿದೆ ಎಂದು ಸುಪ್ರೀಂ ಕೋರ್ಟ್ ಇಂದು ಸ್ಪಷ್ಟಪಡಿಸಿದೆ.
ಸಾಮಾಜಿಕ ಹಿತಾಸಕ್ತಿಯ ಅರ್ಜಿಯ ವಿಚಾರಣೆ ಕೈಗೆತ್ತಿಕೊಂಡ ಸುಪ್ರೀಂಕೋರ್ಟ್ ಮುಖ್ಯ ನ್ಯಾಯಮೂರ್ತಿ ಎಸ್.ಎ. ಬೊಬ್ಡೆ, ನ್ಯಾಯಮೂರ್ತಿ ಎ.ಎಸ್. ಬೋಪಣ್ಣ ಮತ್ತು ನ್ಯಾಯಮೂರ್ತಿ ವಿ. ರಾಮಸುಬ್ರಮಣಿಯನ್ ಅವರನ್ನೊಳಗೊಂಡ ತ್ರಿಸದಸ್ಯ ನ್ಯಾಯಪೀಠ "ಹತ್ರಾಸ್ ಪ್ರಕರಣದ ತನಿಖೆಯ ಎಲ್ಲಾ ಅಂಶಗಳನ್ನು ಅಲಹಾಬಾದ್ ಹೈಕೋರ್ಟ್ ಪರಿಶೀಲಿಸಲಿದೆ. ಪ್ರಸ್ತುತ, ಈ ಪ್ರಕರಣವು ಸೆಂಟ್ರಲ್ ಬ್ಯೂರೋ ಆಫ್ ಇನ್ವೆಸ್ಟಿಗೇಷನ್ (ಸಿಬಿಐ) ನಲ್ಲಿದ್ದು, ತನಿಖಾ ಸ್ಥಿತಿಗತಿಗಳ ವರದಿಯೊಂದಿಗೆ ಹೈಕೋರ್ಟ್ ಅನ್ನು ಸಂಪರ್ಕಿಸಬಹುದು"ಎಂದು ಹೇಳಿದೆ. ಈ ಮೂಲಕ ಸುಪ್ರೀಂ ಕೋರ್ಟ್ ಸದ್ಯಕ್ಕೆ ಈ ಪ್ರಕರಣದ ವಿಚಾರಣೆಯಲ್ಲಿ ತಲೆ ಹಾಕುವುದಿಲ್ಲ ಖಚಿತಪಡಿಸಿದೆ
ಅಲ್ಲದೆ, "ಸಂತ್ರಸ್ತ ಮೃತ ಯುವತಿಯ 'ಅವಸರದ ಶವಸಂಸ್ಕಾರ' ದ ಕುರಿತು ಅಲಹಾಬಾದ್ ನ್ಯಾಯಾಲಯದಲ್ಲಿ ಸುಮೋಟೋ ಪ್ರಕರಣವನ್ನು ದಾಖಲಿಸಲಾಗಿದೆ. ಈ ವಿಚಾರಣೆಯನ್ನೂ ಅಲಹಾಬಾದ್ ಕೋರ್ಟ್ ಪರಿಶಿಲಿಸುತ್ತಿದೆ. ಹೀಗಾಗಿ ಸಿಬಿಐ ತನಿಖೆಯ ಮೇಲ್ವಿಚಾರಣೆಯನ್ನು ಅಲ್ಲಿಗೆ ವಹಿಸಲಾಗಿದೆ" ಎಂದು ಸುಪ್ರೀಂ ತಿಳಿಸಿದೆ.