ಹತ್ರಾಸ್ ಸಂತ್ರಸ್ತೆ ಕುಟುಂಬ ಭೇಟಿಗೆ ಹೊರಟಿದ್ದ ರಾಹುಲ್-ಪ್ರಿಯಾಂಕಾಗೆ ಸಂಕಟ!

ರಾಹುಲ್ ಗಾಂಧಿ ಮತ್ತು ಪ್ರಿಯಾಂಕಾ ವಾದ್ರಾ ಮೇಲೆ ಎಫ್‌ಐಆರ್/ ಹತ್ರಾಸ್ ಸಂತ್ರಸ್ತೆ ಕುಟುಂಬದ ಭೇಟಿಗೆ ಹೊರಟಿದ್ದ ನಾಯಕರು/ ಕೊರೋನಾ ನಿಯಮ ಮುರಿದಿದ್ದಾರೆ


ನವದೆಹಲಿ(ಅ. 02)  ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ ವಾದ್ರಾ  ಮೇಲೆ ಎಫ್ ಐಆರ್ ದಾಖಲಾಗಿದೆ. ಉತ್ತರ ಪ್ರದೇಶದ ಹತ್ರಾಸ್ ಅತ್ಯಾಚಾರ ಸಂತ್ರಸ್ತೆಯ ಮನೆಗೆ ತೆರಳಲು  ಪ್ರಯತ್ನಪಟ್ಟಿದ್ದರು.

ಅತ್ಯಾಚಾರ ಸಂತ್ರಸ್ತೆಯ ಕುಟುಂಬವನ್ನು ಭೇಟಿಯಾಗಲು ಹತ್ರಾಸ್ ಕಡೆಗೆ ಪಯಾಣ ಬೆಳೆಸಿದ ಹಿನ್ನಲೆಯಲ್ಲಿ ನಿಷೇಧಾಜ್ಞೆ ಉಲ್ಲಂಘನೆಗಾಗಿ ಎಫ್ಐಆರ್ ದಾಖಲಿಸಿದ್ದಾರೆ.

Latest Videos

ಗ್ರೇಟರ್ ನೋಯ್ಡಾದ ಇಕೋಟೆಕ್ ಒನ್ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಿಸಲಾಗಿದೆ ಮತ್ತು. ಗೌತಮ್ ಬುದ್ಧ ನಗರ ಪೊಲೀಸರು ಈ ಪ್ರಕರಣ ದಾಖಲಿಸಿಕೊಂಡಿದ್ದಾರೆ.  ಪೊಲೀಸರೊಂದಿಗೆ ಅನುಚಿತವಾಗಿ ನಡೆದುಕೊಂಡಿದ್ದಾರೆ ಎಂದು ಆರೋಪಿಸಿ ಪ್ರಕರಣ ದಾಖಲಾಗಿದೆ,.

ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ, ಅಜಯ್ ಸಿಂಗ್ ಅವರು ನಿಷೇಧಾಜ್ಞೆ ಉಲ್ಲಂಘಿಸಿದ್ದಾರೆ. ಕೊರೋನಾ ಸಂದರ್ಭದಲ್ಲಿ ನಾಯಕರು ಇಂಥ ಕೆಲಸ ಮಾಡಿದ್ದಾರೆ.  ನಿಯಮ  ಉಲ್ಲಂಘನೆ ಮಾಡಿ ಜನರ ಪ್ರಾಣಕ್ಕೆ ಸಂಚಕಾರ ತರುವ ಕೆಲಸ ಮಾಡಿದ್ದಾರೆ ಎಂದು  ಆರೋಪಿಸಲಾಗಿದೆ.

click me!