
ಪ್ರಧಾನಿ ನರೇಂದ್ರ ಮೋದಿ ಅವರ ಅಮ್ಮ ಹೀರಾಬೆನ್ ಮೋದಿ ಅವರು ಅಗಲಿ ಮೂರು ವರ್ಷಗಳಾಗಿವೆ. ಅವರನ್ನು ಅಣಕಿಸುವ ರೀತಿಯಲ್ಲಿ ಕಾಂಗ್ರೆಸ್ ಬಿಹಾರದ ದರ್ಭಾಂಗದಲ್ಲಿ ರಾಹುಲ್ ಗಾಂಧಿಯವರ ಮತದಾರರ ಹಕ್ಕುಗಳ ಯಾತ್ರೆಯ ಸಂದರ್ಭದಲ್ಲಿ ಮಾತನಾಡಿದ್ದರು. ಅವಾಚ್ಯ ಶಬ್ದಗಳಿಂದ ನಿಂದಿಸಿದ್ದರು. ಇದು ದೇಶಾದ್ಯಂತದ ಕಾಂಗ್ರೆಸ್ಸೇತರರ ಭಾರಿ ಆಕ್ರೋಶಕ್ಕೆ ಕಾರಣವಾಗಿತ್ತು. ಇಷ್ಟಕ್ಕೇ ಸುಮ್ಮನಾಗದ ಕಾಂಗ್ರೆಸ್, ಹೀರಾಬೆನ್ ಮೋದಿ ಅವರ AI ವಿಡಿಯೋ ಒಂದನ್ನು ಸೋಷಿಯಲ್ ಮೀಡಿಯಾದಲ್ಲಿ ಪೋಸ್ಟ್ ಮಾಡಿತ್ತು. ಇದರ ವಿರುದ್ಧ ಬಿಜೆಪಿ ಹೈಕೋರ್ಟ್ ಮೊರೆ ಹೋಗಿತ್ತು. ಇಂದು ಪಟ್ನಾ ಹೈಕೋರ್ಟ್ (Patna High court) ಕೂಡಲೇ ಆ ಪೋಸ್ಟ್ ಅನ್ನು ಎಲ್ಲಾ ಸೋಷಿಯಲ್ ಮೀಡಿಯಾಗಳಿಂದ ತೆಗೆದು ಹಾಕುವಂತೆ ಕಾಂಗ್ರೆಸ್‌ಗೆ ಆದೇಶಿಸಿದೆ.
ಈ ವಿವಾದಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಸೇರಿದಂತೆ ಪ್ರತಿವಾದಿಗಳಾಗಿರುವ ಫೇಸ್ಬುಕ್, ಟ್ವಿಟ್ಟರ್ ಎಲ್ಲರಿಗೂ ನೋಟಿಸ್ ಜಾರಿ ಮಾಡಿದೆ. ಬಿಹಾರ ಕಾಂಗ್ರೆಸ್ ಹಂಚಿಕೊಂಡಿದ್ದ 36 ಸೆಕೆಂಡುಗಳ ಎಐ ವಿಡಿಯೋದಲ್ಲಿ ಪ್ರಧಾನಿ ಮೋದಿ ಅವರು ಮಲಗುವ ಕೋಣೆಗೆ ಆಗಮಿಸಿ ಬೆಡ್ ಮೇಲೆ ಮಲಗುತ್ತಾರೆ….ನಂತರ ಅವರ ಕನಸಿನಲ್ಲಿ ತಾಯಿ ಕಾಣಿಸಿಕೊಂಡು, ಬಿಹಾರದಲ್ಲಿ ನನ್ನ ಹೆಸರು ಹೇಳಿಕೊಂಡು ರಾಜಕಾರಣ ಮಾಡುತ್ತಿದ್ದೀಯಾ ಎಂದು ಗದರಿಸುವಂತೆ ಎಐ ವಿಡಿಯೋವನ್ನು ಸೃಷ್ಟಿಸಲಾಗಿತ್ತು. ಈ ವಿಡಿಯೋ ಭಾರೀ ರಾಜಕೀಯ ವಿವಾದಕ್ಕೆ ಕಾರಣವಾಗಿತ್ತು. ಸಾಮಾಜಿಕ ಮಾಧ್ಯಮ ವೇದಿಕೆಗಳಿಂದ ಎಐ ಚಿತ್ರವನ್ನು ತೆಗೆದು ಹಾಕುವಂತೆ ಹೈಕೋರ್ಟ್ ಹಂಗಾಮಿ ಮುಖ್ಯ ನ್ಯಾಯಮೂರ್ತಿ ಪಿ.ಬಿ. ಭಜಂತ್ರಿ ನೇತೃತ್ವದ ಪೀಠ ಆದೇಶಿಸಿದೆ.
ಈ ವಿಡಿಯೋ ಬಹಿರಂಗವಾದಾಗಿನಿಂದ ಬಿಜೆಪಿ ತನ್ನ ಅಸಮಾಧಾನ ವ್ಯಕ್ತಪಡಿಸಿದೆ. ಕಾಂಗ್ರೆಸ್ ಪಕ್ಷ ಹಾಗೂ ಅದರ ನಾಯಕರು ಪ್ರಧಾನಿ ನರೇಂದ್ರ ಮೋದಿ ಮತ್ತು ಅವರ ತಾಯಿಯನ್ನು ನಿಂದಿಸಿದ್ದಾರೆ. ಕಾಂಗ್ರೆಸ್ ಪಕ್ಷವು ಮಹಿಳೆಯರನ್ನು ನಿಂದಿಸುವ ಅಭ್ಯಾಸವನ್ನು ಹೊಂದಿದೆ ಎಂದು ಹೇಳಿಕೊಂಡಿದೆ. ಈ ವಿಡಿಯೋ ನಾಚಿಕೆಗೇಡಿನ ಸಂಗತಿ ಎಂದು ಬಣ್ಣಿಸಿದ ಬಿಜೆಪಿ, ಕಾಂಗ್ರೆಸ್ ಪಕ್ಷದಿಂದ ಕ್ಷಮೆಯಾಚಿಸಬೇಕೆಂದು ಒತ್ತಾಯಿಸಿತ್ತು. ಇದರ ಹೊರತಾಗಿಯೂ ಕಾಂಗ್ರೆಸ್ ನಾವು ಅಂಥದ್ದೇನೂ ಕೆಲಸ ಮಾಡಿಲ್ಲ, ಯಾರಿಗೂ ಇದರಿಂದ ನೋವಾಗಿಲ್ಲ ಎಂದು ಸ್ಪಷ್ಟನೆ ಕೊಡುತ್ತಲೇ ಬಂದಿತ್ತು. ಈಗ ಹೈಕೋರ್ಟ್ ಆದೇಶದ ಹಿನ್ನೆಲೆಯಲ್ಲಿ ಕೂಡಲೇ ಆ ವಿಡಿಯೋಗಳನ್ನು ಡಿಲೀಟ್ ಮಾಡಬೇಕಿದೆ.
ಇದನ್ನೂ ಓದಿ: Narendra Modi Bithday: ಹಿಂದಿನ ಜನ್ಮದಲ್ಲಿ ಮೋದಿ ಏನಾಗಿದ್ದರು? ಜನ್ಮ ರಹಸ್ಯ ತೆರೆದಿಟ್ಟ ಖ್ಯಾತ ಜ್ಯೋತಿಷಿ
ಇದೇ ವೇಳೆ ತಮ್ಮ ತಾಯಿಯ ವಿರುದ್ಧ ಕಾಂಗ್ರೆಸ್ಸಿಗರು ಮಾಡಿದ್ದ ಅವಾಚ್ಯ ಶಬ್ದಗಳಿಂದ ಖುದ್ದು ನರೇಂದ್ರ ಮೋದಿ ನೊಂದುಕೊಂಡಿದ್ದರು. ಇದು ದೇಶದ ಎಲ್ಲಾ ತಾಯಂದಿರು, ಸಹೋದರಿಯರು ಮತ್ತು ಹೆಣ್ಣುಮಕ್ಕಳಿಗೆ ಮಾಡಿದ ಅವಮಾನ ಎಂದು ಕರೆದಿದ್ದರು. ರಾಜಕೀಯದೊಂದಿಗೆ ಯಾವುದೇ ಸಂಬಂಧವಿಲ್ಲದ ನನ್ನ ತಾಯಿಯನ್ನು ಏಕೆ ಎಳೆದುತಂದಿದ್ದೀರಿ ಎಂದು ಪ್ರಶ್ನಿಸಿದ್ದರು. ಬಿಜೆಪಿ ದೆಹಲಿ ಚುನಾವಣಾ ಕೋಶದ ಸಂಚಾಲಕ ಸಂಕೇತ್ ಗುಪ್ತಾ ಅವರ ದೂರಿನ ಮೇರೆಗೆ ಸೆಪ್ಟೆಂಬರ್ 13 ರಂದು ದೆಹಲಿ ಪೊಲೀಸರು ಕಾಂಗ್ರೆಸ್ ಮತ್ತು ಅದರ ಐಟಿ ಸೆಲ್ ವಿರುದ್ಧ ಪ್ರಕರಣ ದಾಖಲಿಸಿದ್ದಾರೆ. ಕಾಂಗ್ರೆಸ್ ಪಕ್ಷವು ಬಿಜೆಪಿ ಉದ್ದೇಶಪೂರ್ವಕವಾಗಿ ಅಂತಹ ಹಿಂಸಾಚಾರವನ್ನು ಪ್ರಚೋದಿಸಲು ತನ್ನ ಕಾರ್ಯಕರ್ತರನ್ನು ಕಾರ್ಯಕ್ರಮಕ್ಕೆ ಕಳುಹಿಸಿದೆ ಎಂದು ಬಿಜೆಪಿ ಹೇಳಿದೆ. ಈ ದೂರಿನ ವಿರುದ್ಧ ಕ್ರಮ ಏನಾಗಿದೆ ಎನ್ನುವ ಬಗ್ಗೆ ಸದ್ಯ ಮಾಹಿತಿ ಲಭ್ಯವಿಲ್ಲ.
ಇದನ್ನೂ ಓದಿ: Narendra Modi Birthday: ಪ್ರಧಾನಿ ಹುಟ್ಟುಹಬ್ಬಕ್ಕೆ ರಾಹುಲ್ ಗಾಂಧಿ, ಖರ್ಗೆ ವಿಷ್ ಮಾಡಿದ್ದು ಹೇಗೆ?
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ