Narayana Guru Tableau ಗಣರಾಜ್ಯೋತ್ಸವ ಪರೇಡ್‌ಗೆ ನಾರಾಯಣ ಗುರು ಸ್ತಬ್ಧ ಚಿತ್ರ ತಿರಸ್ಕರಿಸಿದ ಕೇಂದ್ರ, ಎಚ್‌ಡಿಕೆ ಕಿಡಿ

By Suvarna News  |  First Published Jan 15, 2022, 4:08 PM IST

* ಗಣರಾಜ್ಯೋತ್ಸವ ಪರೇಡ್‌ಗೆ ನಾರಾಯಣ ಗುರು ಸ್ತಬ್ಧ ಚಿತ್ರ ತಿರಸ್ಕರಿಸಿದ ಕೇಂದ್ರ
* ಎಚ್‌ಡಿ ಕುಮಾರಸ್ವಾಮಿ ಆಸಮಾಧಾನ
* ನಾರಾಯಣ ಗುರುಗಳ ಚಿತ್ರವಿದ್ದ ಸ್ತಬ್ಧಚಿತ್ರವನ್ನು ಕೇಂದ್ರದ ಗಣರಾಜ್ಯೋತ್ಸವ ಸಮಿತಿ


ಬೆಂಗಳೂರು, (ಜ.15): ಬ್ರಹ್ಮರ್ಷಿ ನಾರಾಯಣ ಗುರುಗಳ ಚಿತ್ರವಿದ್ದ ಸ್ತಬ್ಧಚಿತ್ರವನ್ನು (Narayana Guru Tableau ) ಕೇಂದ್ರದ ಗಣರಾಜ್ಯೋತ್ಸವ (Republic Day Parade) ಸಮಿತಿ ತಿರಸ್ಕರಿಸಿರುವುದು ಅತ್ಯಂತ ಖಂಡನೀಯ ಹಾಗೂ ನಮ್ಮ ನೆಲದ ನಂಬಿಕೆಗಳಿಗೆ ಮಾಡಿರುವ ಅಪಮಾನ ಎಂದು ಮಾಜಿ ಸಿಎಂ ಎಚ್‌ಡಿ ಕುಮಾರಸ್ವಾಮಿ (HD Kumaraswamy) ಕಿಡಿಕಾರಿದ್ದಾರೆ.

ಈ ಕುರಿತಾಗಿ ಟ್ವೀಟ್ ಮಾಡಿರುವ ಅವರು, ಸ್ತ್ರೀ ಸಮಾನತೆಯನ್ನು ಪ್ರತಿಪಾದಿಸಿ ಜಾತಿ, ಮತಭೇದಗಳನ್ನು ಧಿಕ್ಕರಿಸಿ ಸಮಾಜೋದ್ಧಾರಕ್ಕೆ ಶ್ರಮಿಸಿದ ಮಹಾನ್ ಚೇತನ ಶ್ರೀ ನಾರಾಯಣ ಗುರುಗಳು, "ಮನುಷ್ಯರೆಲ್ಲ ಒಂದೇ ಎಂದು ಹೇಳಿ ಒಂದೇ ಜಾತಿ, ಒಂದೇ ಮತ, ಒಬ್ಬರೇ ದೇವರು" ಎಂದು ಸಾರಿ ಆತ್ಮದಲ್ಲಿ ಅರಿವಿನ ಬೆಳಕು ಮೂಡಿಸಿದವರು. ಅಂಥವರ ಚಿತ್ರವಿದ್ದ ಸ್ತಬ್ಧಚಿತ್ರವನ್ನು ತಿರಸ್ಕಾರ ಮಾಡಿರುವುದು ಕ್ಷಮಾರ್ಹವಲ್ಲದ ತಪ್ಪು ಹಾಗೂ ಭಾರತೀಯ ಸುಧಾರಣಾ ಪರಂಪರೆಯ ಬಗ್ಗೆ ತಿಳಿವಳಿಕೆ ಇಲ್ಲದ ಅಜ್ಞಾನದ ಪರಮಾವಧಿ. ಆಯ್ಕೆ ಸಮಿತಿಯಲ್ಲಿ ಇಂಥ ಅಜ್ಞಾನಿಗಳಿರುವುದು ದೇಶಕ್ಕೆ ಶೋಭೆಯಲ್ಲ ಎಂದಿದ್ದಾರೆ.

Tap to resize

Latest Videos

undefined

Narayana Guru Tableau: ನಾರಾಯಣ ಗುರು ಟ್ಯಾಬ್ಲೋಗೆ ಕೇಂದ್ರ ತಿರಸ್ಕಾರ: ತೀವ್ರ ವಿವಾದ

ಅಂಥವರ ಚಿತ್ರವಿದ್ದ ಸ್ತಬ್ಧಚಿತ್ರವನ್ನು ತಿರಸ್ಕಾರ ಮಾಡಿರುವುದು ಕ್ಷಮಾರ್ಹವಲ್ಲದ ತಪ್ಪು ಹಾಗೂ ಭಾರತೀಯ ಸುಧಾರಣಾ ಪರಂಪರೆಯ ಬಗ್ಗೆ ತಿಳಿವಳಿಕೆ ಇಲ್ಲದ ಅಜ್ಞಾನದ ಪರಮಾವಧಿ. ಆಯ್ಕೆ ಸಮಿತಿಯಲ್ಲಿ ಇಂಥ ಅಜ್ಞಾನಿಗಳಿರುವುದು ದೇಶಕ್ಕೆ ಶೋಭೆಯಲ್ಲ. 3/4

— H D Kumaraswamy (@hd_kumaraswamy)

ಕೂಡಲೇ ನಾರಾಯಣ ಗುರುಗಳ ಚಿತ್ರವಿರುವ ಸ್ತಬ್ಧಚಿತ್ರವನ್ನು ಗಣರಾಜ್ಯೋತ್ಸವದ ಪರೇಡ್ʼಗೆ ಸಮಿತಿಯು ಅಂಗೀಕಾರ ಮಾಡಬೇಕು. ಕೂಡಲೇ ಸಂಬಂಧಪಟ್ಟ ಕೇಂದ್ರದ ಸಚಿವಾಲಯ ಮತ್ತು ಅಧಿಕಾರಿಗಳು ಈ ಅಚಾತುರ್ಯವನ್ನು ಸರಿ ಮಾಡಬೇಕು ಎಂದು ಆಗ್ರಹಿಸಿದ್ದಾರೆ.

ಪರಮಪೂಜ್ಯರಾದ ಬ್ರಹ್ಮರ್ಷಿ ನಾರಾಯಣ ಗುರುಗಳ ಚಿತ್ರವಿದ್ದ ಸ್ತಬ್ಧಚಿತ್ರವನ್ನು ಕೇಂದ್ರದ ಗಣರಾಜ್ಯೋತ್ಸವ ಸಮಿತಿ ತಿರಸ್ಕರಿಸಿರುವುದು ಅತ್ಯಂತ ಖಂಡನೀಯ ಹಾಗೂ ನಮ್ಮ ನೆಲದ ನಂಬಿಕೆಗಳಿಗೆ ಮಾಡಿರುವ ಅಪಮಾನ. 1/4 pic.twitter.com/GZK5OHxton

— H D Kumaraswamy (@hd_kumaraswamy)

 ಗಣರಾಜ್ಯೋತ್ಸವ ಸಂದರ್ಭದಲ್ಲಿ ಕೇರಳದಿಂದ ಶ್ರೀ ನಾರಾಯಣ ಗುರುಗಳ ಸ್ತಬ್ಧಚಿತ್ರ ಪ್ರದರ್ಶನಕ್ಕೆ ಕೇಂದ್ರ ಸರ್ಕಾರ ವಿರೋಧ ವ್ಯಕ್ತಪಡಿಸಿದೆ. ಈ ಸಂಬಂಧ ಶಿವಗಿರಿ ಮಠ ಮತ್ತು ಕೇಂದ್ರ ಸರ್ಕಾರದ ನಡುವೆ ಭಾರೀ ವಿವಾದ ಸೃಷ್ಟಿಯಾಗಿದೆ. ಮಠದ ನೇತೃಥ್ವದ ವಹಿಸಿರುವ ಶ್ರೀ ನಾರಾಯಣ ಧರ್ಮ ಸಂಘಂ ಟ್ರಸ್ಟ್‌ ಕೇಂದ್ರದ ನಿರ್ಧಾರವನ್ನು ಖಂಡಿಸಿದೆ.

ರಾಜ್ಯ ಸರ್ಕಾರದ ಪ್ರಕಾರ, ತೀರ್ಪುಗಾರರ ಸಮಿತಿ ಗಣರಾಜ್ಯೋತ್ಸವ ಪರೇಡ್‌ನಲ್ಲಿ ಆದಿಶಂಕರಾಚಾರ್ಯರ ಸ್ತಬ್ಧಚಿತ್ರ ಪ್ರದರ್ಶನಕ್ಕೆ ಸಲಹೆ ನೀಡಿತ್ತು. ಆದರೆ ಇದಕ್ಕೆ ವಿರುದ್ಧವಾಗಿ ಶ್ರೀ ನಾರಾಯಣ ಗುರುಗಳ ಪ್ರತಿಮೆಯನ್ನು ಒಳಗೊಂಡಿದ್ದ ಸ್ತಬ್ಧಚಿತ್ರ ಕಳುಹಿಸಲು ಕೇರಳ ನಿರ್ಧರಿಸಿದೆ. ಹೀಗಾಗಿ ಅದನ್ನು ಕೇಂದ್ರಸರ್ಕಾರ ತಿರಸ್ಕರಿಸಿದೆ.

ರಕ್ಷಣಾ ಸಚಿವಾಲಯವು ಗಣರಾಜ್ಯೋತ್ಸವದ ಸಂದರ್ಭದಲ್ಲಿ ಪ್ರದರ್ಶನಕ್ಕಾಗಿ ಸ್ತಬ್ಧಚಿತ್ರವನ್ನು ಆಯ್ಕೆ ಮಾಡಲು ತೀರ್ಪುಗಾರರನ್ನು ನೇಮಿಸುತ್ತದೆ.

ಈ ಬಗ್ಗೆ ಪ್ರತಿಕ್ರಿಯಿಸಿರುವ ಟ್ರಸ್ಟ್‌ನ ಅಧ್ಯಕ್ಷ ಸ್ವಾಮಿ ಸಚ್ಚಿದಾನಂದ ಅವರು, ‘ಇದು ಮಲಯಾಳಿಯಲ್ಲದ ಅಧಿಕಾರಿಗಳು ಮಾಡಿದ ತಪ್ಪಾಗಿರಬಹುದು ಅಥವಾ ಮೇಲ್ಜಾತಿಯ ಪ್ರಾಬಲ್ಯದಿಂದ ಉದ್ದೇಶಪೂರ್ವಕ ಮಾಡಿದ ಕೃತ್ಯವಾಗಿರಬಹುದು. ಆದರೆ ತೀರ್ಪುಗಾರರ ಪಕ್ಷಪಾತ ಧೋರಣೆಯು ಗುರು ಮತ್ತು ಮಠದ ಲಕ್ಷಾಂತರ ಅನುಯಾಯಿಗಳಿಗೆ ನೋವುಂಟುಮಾಡಿದೆ. ತಪ್ಪನ್ನು ಸರಿಪಡಿಸಲು ಕೇಂದ್ರ ಸರ್ಕಾರಕ್ಕೆ ಸಾಕಷ್ಟುಸಮಯ ಇದೆ’ ಎಂದು ತಿಳಿಸಿದ್ದಾರೆ.

click me!