
ರಾಂಚಿ[ಡಿ.28]: ಜಾರ್ಖಂಡ್ ಮುಖ್ಯಮಂತ್ರಿಯಾಗಿ ಹೇಮಂತ್ ಸೊರೇನ್ ಭಾನುವಾರ ಮಧ್ಯಾಹ್ಯ 2 ಗಂಟೆಗೆ ಅಧಿಕಾರ ಸ್ವೀಕರಲಿದ್ದು, ಕರ್ನಾಟಕದ ಮಾಜಿ ಮುಖ್ಯಮಂತ್ರಿ ಎಚ್.ಡಿ. ಕುಮಾರ ಸ್ವಾಮಿ ಅವರನ್ನೂ ಸಮಾರಂಭಕ್ಕೆ ಆಹ್ವಾನಿಸಿದ್ದಾರೆ.
ಅಲ್ಲದೇ ಪ್ರಧಾನಿ ನರೇಂದ್ರ ಮೋದಿ, ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ, ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ, ಮಹಾರಾಷ್ಟ್ರ ಮುಖ್ಯಮಂತ್ರಿ ಉದ್ಧವ್ ಠಾಕ್ರೆ ಸೇರಿದಂತೆ ಎಲ್ಲಾ ಪಕ್ಷದ ಮುಖಂಡರನ್ನೂ ಸೊರೇನ್ ಪ್ರಮಾಣ ವಚನ ಸ್ವೀಕಾರ ಸಮಾರಂಭಕ್ಕೆ ಆಹ್ವಾನಿಸಿದ್ದಾರೆ.
ಆದರೆ, ಪೂರ್ವ ನಿಗದಿತ ಕಾರ್ಯಕ್ರಮದ ಹಿನ್ನೆಯಲ್ಲಿ ಮೋದಿ ಕಾರ್ಯಕ್ರಮದಲ್ಲಿ ಭಾಗವಹಿಸುತ್ತಿಲ್ಲ. ಉಳಿದಂತೆ ವಿಪಕ್ಷಗಳ ಪ್ರಮುಖ ನಾಯಕರು ಕಾರ್ಯಕ್ರಮದಲ್ಲಿ ಭಾಗಿಯಾಗುವ ಸಾಧ್ಯತೆ ಇದೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ