
ನವದೆಹಲಿ[ಫೆ.26]: ಸೋಶಿಯಲ್ ಮೀಡಿಯಾದಲ್ಲಿ ಚಿತ್ರ ವಿಚಿತ್ರ ವಿಡಿಯೋಗಳು ವೈರಲ್ ಆಗುತ್ತವೆ. ಇವುಗಳಲ್ಲಿ ಅನೇಕ ವಿಡಿಯೋಗಳು ದಿಗ್ರ್ಭಮೆ ಮೂಡಿಸುತ್ತವೆ. ಸದ್ಯ ಇಂತಹುದೇ ವಿಡಿಯೋ ಒಂದು ಯೂ ಟ್ಯೂಬ್ ನಲ್ಲಿ ವೈರಲ್ ಆಗುತ್ತಿದೆ. ವಿಡಿಯೋದಲ್ಲಿ ರುಂಡವಿಲ್ಲದ ವ್ಯಕ್ತಿಯೊಬ್ಬ ರಸ್ತೆಯಲ್ಲಿ ಓಡಾಡುತ್ತಿರುವ ದೃಶ್ಯಗಳು ಸೆರೆಯಾಗಿವೆ. ವಿಡಿಯೋ ಭಾರೀ ವೇಗವಾಗಿ ಶೇರ್ ಆಗಲಾರಂಭಿಸಿದೆ.
ಟ್ರಾಫಿಕ್ ನಿಂದ ಕೂಡಿದ ರಸ್ತೆಯಲ್ಲಿ, ತಲೆ[ರುಂಡ]ವಿಲ್ಲದ ವ್ಯಕ್ತಿ ರಸ್ತೆ ದಾಟುತ್ತಿರುವುದು ಕ್ಯಾಮೆರಾ ಕಣ್ಣಿನಲ್ಲಿ ಸೆರೆಯಾಗಿದೆ. ಶಾರ್ಟ್ಸ್ ಮತ್ತು ಶರ್ಟ್ ಧರಿಸಿರುವ ವ್ಯಕ್ತಿ ಕೈಯ್ಯಲ್ಲಿ ಕೆಂಪು ಬಣ್ಣದ ಬ್ಯಾಗ್ ಹಿಡಿದಿದ್ದಾನೆ. ವಿಚಿತ್ರವೆಂದರೆ ವಾಹನಗಳು ಓಡಾಡುತ್ತಿರುವ ರಸ್ತೆಯಲ್ಲಿ ಅತ್ತ ರುಂಡವಿಲ್ಲದ ವ್ಯಕ್ತಿ ಸಲೀಸಾಗಿ ರಸ್ತೆ ದಾಡುತ್ತಿದ್ದು, ಇತ್ತ ವಾಹನ ಚಾಲಕರು ಕೂಡಾ ಯಾವುದೇ ಪ್ರತಿಕ್ರಿಯೆ ಇಲ್ಲದೇ ತೆರಳಿದ್ದಾರೆ.
ಫೇಬರಿ ಎಡಿಕ್ಸನ್ ಹೆಸರಿನ ಯೂಟ್ಯೂಬ್ ಚಾನೆಲ್ ಈ ವಿಡಿಯೋ ಶೇರ್ ಮಾಡಿಕೊಂಡಿದೆ. ಟಿಕ್ ಟಾಕ್, ಫೇಸ್ಬುಕ್ ಹಾಗೂ ಟ್ವಿಟರ್ ನಲ್ಲಿ ಈ ವಿಡಿಯೋ ಭಾರೀ ವೈರಲ್ ಆಗಿದೆ. ಈ ಘಟನೆ ನಡೆದಿದ್ದೆಲ್ಲ? ಇದು ಅಸಲಿಯೋ? ನಕಲಿಯೋ ಎಂಬುವುದು ಇನ್ನೂ ತಿಳಿದು ಬಂದಿಲ್ಲ.
News In 100 Seconds: ಈ ಕ್ಷಣದ ಪ್ರಮುಖ ಹೆಡ್‌ಲೈನ್ಸ್
"
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ