
ದೆಹಲಿ (ಸೆ.04) ದೆಹಲಿ ಹಾಗೂ ರಾಷ್ಟ್ರ ರಾಜಧಾನಿ ವ್ಯಾಪ್ತಿಯಲ್ಲಿ ಸುರಿದ ಮಳೆಗೆ ಅವಾಂತರಗಳು ಸೃಷ್ಟಿಯಾಗಿದೆ. ದೆಹಲಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ನೀರು ತುಂಬಿಕೊಂಡಿದೆ. ಹಲವೆಡೆ ನಿರಂತರವಾಗಿ ಸುರಿಯುತ್ತಿರುವ ಮಳೆಯಿಂದ ರಸ್ತೆಗಳು ಜಲಾವೃತಗೊಂಡಿದೆ. ಪರಿಣಾಮ ವಿಮಾನ ಹಾರಾಟದಲ್ಲಿ ವ್ಯತ್ಯಯವಾಗಿದೆ. ಇತ್ತ ಮಳೆ ತೀವ್ರಗೊಳ್ಳುತ್ತಿದ್ದಂತೆ ದೆಹಲಿ ಸೇರಿದಂತೆ ಹಲವು ಭಾಗಗಳಿಗೆ ಹವಾಮಾನ ಇಲಾಖೆ ರೆಡ್ ಅಲರ್ಟ್ ಘೋಷಣೆ ಮಾಡಿದೆ.
ಈ ವರ್ಷ ಮಳೆ ಕೊರತೆಯಾಗಿದೆ. ಹವಾಮಾನ ವೈಪರಿತ್ಯದಿಂದ ಹಲವೆಡೆ ವಿಪರೀತ ಮಳೆಯಿಂದ ಪ್ರವಾಹ ಪರಿಸ್ಥಿತಿಗಳು ಸೃಷ್ಟಿಯಾಗಿದೆ. ನೇಪಾಳ ದುರಂತದ ಬಳಿಕ ಪ್ರವಾಹ ಅತಂಕ ಹೆಚ್ಚಿಸುತ್ತಿದೆ. ಇದೀಗ ದೆಹಲಿ ಸೇರಿದಂತೆ ಕೆಲ ಭಾಗದಲ್ಲಿ ಭಾರಿ ಮಳೆಯಿಂದ ತಗ್ಗು ಪ್ರದೇಶಗಳಲ್ಲಿ ನೀರು ತುಂಬಿಕೊಂಡಿದೆ. ಗುಡುಗು, ಮಿಂಚು ಸಹಿತ ಮಳೆಯಾಗಿದೆ.
ದೆಹಲಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಒಳಭಾಗದಲ್ಲಿ ನೀರು ತುಂಬಿಕೊಂಡಿದೆ. ಪ್ರಯಾಣಿಕರು ಪರದಾಡುತ್ತಿದ್ದಾರೆ. ರನ್‌ವೇ ಸೇರಿದಂತೆ ಹಲವೆಡೆ ನೀರು ತುಂಬಿಕೊಂಡ ಪರಿಣಾಮ ವಿಮಾನಗಳು ಟೇಕ್ ಆಫ್ ಹಾಗೂ ಲ್ಯಾಂಡಿಂಗ್ ಸಮಸ್ಯೆಗೆ ಸಿಲುಕಿಕೊಂಡಿದೆ. ಕೆಲ ವಿಮಾನ ಹಾರಾಟ ವಿಳಂಬವಾಗಿದೆ. ಇದೇ ವೇಳೆ ಹಲವು ವಿಮಾನ ಹಾರಾಟ ಡೈವರ್ಟ್ ಮಾಡಲಾಗಿದೆ.
ಬೆಂಗಳೂರಿನಿಂದ ಹೊರಟ ದೆಹಲಿ ವಿಮಾನವನ್ನು ಮಳೆಯಿಂದಾಗಿ ಲಖನೌಗೆ ಡೈವರ್ಟ್ ಮಾಡಲಾಗಿದೆ. ಇನ್ನು ಲುಧಿಯಾನ ದೆಹಲಿ, ಇಂದೋರ್-ದೆಹಲಿ, ಹೈದರಾಬಾದ್-ದೆಹಲಿ ವಿಮಾನಗಳನ್ನು ಲಖನೌ ವಿಮಾನ ನಿಲ್ದಾಣಕ್ಕೆ ಡೈವರ್ಟ್ ಮಾಡಲಾಗಿದೆ.
ದೆಹಲಿ ಹಾಗೂ ರಾಷ್ಟ್ರ ರಾಜಧಾನಿ ವ್ಯಾಪ್ತಿಯಲ್ಲಿ ರೆಡ್ ಅಲರ್ಟ್ ಘೋಷಣೆ ಮಾಡಲಾಗಿದೆ. ಇದೇ ವೇಳೆ ಮುಂದಿನ ಮೂರು ದಿನಗಳ ಕಾಲ ಮಳೆ ಇರಲಿದೆ ಎಂದು ಎಚ್ಚರಿಸಿದೆ. ಈ ಪೈಕಿ ಕೆಲ ಪ್ರದೇಶದಲ್ಲಿ 500 ಎಂಎಂನಿಂದ 100 ಎಂಎಂ ಮಳೆಯಾಗುವ ಸಾಧ್ಯತೆ ಇದೆ ಎಂದಿದೆ. ಗುಡುಗು, ಮಿಂಚು ಸಹಿತ ಮಳೆಯಾಗಲಿದೆ. ಇದೇ ವೇಳೆ 40 ರಿಂದ 50 ಕಿಲೋಮೀಟರ್ ವೇಗದಲ್ಲಿ ಗಾಳಿ ಬೀಸುವ ಸಾಧ್ಯತೆ ಇದೆ ಎಂದಿದೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ