ವಾಯುಭಾರ ಕುಸಿತದಿಂದ ಬೆಂಗಳೂರು ಸೇರಿದಂತೆ ಕರ್ನಾಟಕದ ಹಲವೆಡೆ ಮಳೆಯಾಗುತ್ತಿದೆ. ಕೆಲ ರಾಜ್ಯಗಳಲ್ಲಿ ಭಾರಿ ಮಳೆಯಾಗಿ ಜನ ಜೀವನ ಅಸ್ತವ್ಯಸ್ತವಾಗಿದೆ. ಶಾಲಾ ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ.
ಚೆನ್ನೈ(ಡಿ.12) ವಾಯುಭಾರ ಕುಸಿತದ ಪರಿಣಾಮ ದೇಶದ ಹಲವು ರಾಜ್ಯಗಳಲ್ಲಿ ಮಳೆಯಾಗುತ್ತಿದೆ. ಬೆಂಗಳೂರು ಸೇರಿದಂತೆ ಕರ್ನಾಟಕದ ಕೆಲ ಜಿಲ್ಲೆಗಳಲ್ಲಿ ಮಳೆ ವಕ್ಕರಿಸಿದೆ. ಇತ್ತ ತಮಿಳುನಾಡಿನಲ್ಲಿ ಕೆಲ ಜಿಲ್ಲೆಗಳಲ್ಲಿ ಭಾರಿ ಮಳೆಯಾಗಿದೆ.ಇದರ ಬೆನ್ನಲ್ಲೇ ಹವಾಮಾನ ಇಲಾಖೆ ಮುನ್ಸೂಚನೆ ಪ್ರಕಾರ ಇದೀಗ 12ಕ್ಕೂ ಹೆಚ್ಚು ಶಾಲಾ ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ. ಚೆನ್ನೈ ಸೇರಿದಂತೆ 12ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಭಾರಿ ಮಳೆಯಾಗುತ್ತಿದೆ. ಸುರಕ್ಷತಾ ದೃಷ್ಟಿಯಿಂದ ರಜೆ ಘೋಷಿಲಾಗಿದೆ.
ತಮಿಳುನಾಡಿನ 12ಕ್ಕೂ ಹೆಚ್ಚು ಜಿಲ್ಲೆಯ ಜಿಲ್ಲಾಧಿಕಾರಿಗಳು ಶಾಲಾ ಕಾಲೇಜಿಗೆ ರಜೆ ಘೋಷಣೆ ಮಾಡಿದ್ದಾರೆ. ಈ ಪೈಕಿ ತಿರುನೇಲವೆಲ್ಲಿ ಜಿಲ್ಲಾಧಿಕಾರಿ 1 ರಿಂದ 5ನೇ ತರಗತಿ ಶಾಲಾ ಮಕ್ಕಳಿಗೆ ರಜೆ ಘೋಷಿಸಿದ್ದಾರೆ. ಕಾಂಚಿಪುರಂ, ತಂಜಾವೂರು, ರಾಮನಾಥಪುರಂ, ಅರಿಯಲೂರು ಸೇರಿದಂತೆ ಹಲವು ಜಿಲ್ಲೆಗಳಲ್ಲಿ ಸಂಪೂರ್ಣ ರಜೆ ಘೋಷಿಸಲಾಗಿದೆ. ಸದ್ಯ ಬೀಳುತ್ತಿರುವ ಮಳೆ ಹಾಗೂ ಹವಾಮಾನ ಇಲಾಖೆ ಸೂಚನೆ ಆಧರಿಸಿ ಜಿಲ್ಲಾಧಿಕಾರಿಗಳು ನಿರ್ಧಾರ ಘೋಷಿಸಿದ್ದಾರೆ.
ಸಾರ್ವಜನಿಕರ ಗಮನಕ್ಕೆ. ಮುಂದಿನ 24 ಗಂಟೆ ರಾಜ್ಯದ ಈ ಭಾಗಗಳಲ್ಲಿ ಮಳೆ ಅಲರ್ಟ್
ತಮಿಳುನಾಡಿನ ಹಲವು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಜೊತೆಗೆ ಗುಡುಗು ಸಹಿತ ಮಳೆಯಾಗಲಿದೆ ಅನ್ನೋ ಎಚ್ಚರಿಕೆಯನ್ನು ಹವಾಮಾನ ಇಲಾಖೆ ನೀಡಿದೆ. ಕಾರಕೈಲ್ ವಲಯದಲ್ಲಿ ಬೆಳಗ್ಗೆ 8ಸಿಎಂ ಮಳೆಯಾಗಿದೆ ಎಂದು ವರದಿಯಾಗಿದೆ.ಇನ್ನು ಚೆನ್ನೈ ಸೇರಿದಂತೆ ಸುತ್ತ ಮುತ್ತ ಪ್ರದೇಶದಲ್ಲಿ 5ಸಿಎಂ ಮಳೆಯಾಗಿದೆ.ಫೆಂಗಲ್ ಚೆಂಡಮಾರುತದಿಂದ ದೇಶದ ಹಲವು ರಾಜ್ಯಗಳಲ್ಲಿ ಭಾರಿ ಮಳೆಯಾಗಿ ಅವಾಂತರ ಸೃಷ್ಟಿಯಾಗಿತ್ತು. ಈ ಫೆಂಗಲ್ ಅಬ್ಬರ ಕಡಿಮೆಯಾದ ಬೆನ್ನಲ್ಲೇ ಇದೀಗ ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತವಾಗಿದೆ. ಈ ಕುರಿತು ಹವಾಮಾನ ಇಲಾಖೆ ಮೊದಲೇ ಎಚ್ಚರಿಕೆ ನೀಡಿತ್ತು. ತಮಿಳುನಾಡಿನ 11 ಜಿಲ್ಲೆಗಳಲ್ಲಿ ಭಾರಿ ಮಳೆಯಾಗಲಿದೆ ಎಂದಿತ್ತು. ಇದೀಗ 12 ಜಿಲ್ಲೆಗಳಲ್ಲಿ ಭಾರಿ ಮಳೆಯಾಗುತ್ತಿದೆ. ಮೀನುಗಾರರರು ಸಮುದ್ರಕ್ಕೆ ಇಳಿಯದಂತೆ ಎಚ್ಚರಿಕೆ ನೀಡಲಾಗಿದೆ.
undefined
ಬಂಗಾಳ ಕೊಲ್ಲಿಯ ವಾಯುಭಾರ ಕುಸಿತ ಕರ್ನಾಟಕಕ್ಕೂ ತಟ್ಟಿದೆ. ಬೆಂಗಳೂರು, ರಾಮನಗರ, ಚನ್ನಪಟ್ಟಣ, ಮೈಸೂರು, ಚಾಮರಾಜನಗರು, ಕೊಡಗು, ದಕ್ಷಿಣ ಕನ್ನಡ, ಉಡುಪಿ ಸೇರಿದಂತೆ ಹಲವು ಜಿಲ್ಲೆಗಳಲ್ಲಿ ತುಂತುರು ಮಳೆಯಾಗುತ್ತಿದೆ. ಇದರಿಂದ ಬೆಳೆ ಬೆಳೆದ ರೈತರು ಕಂಗಲಾಗಿದ್ದಾರೆ. ಫೆಂಗಾಲ್ ಮಳೆಯಿಂದ ಈಗಾಗಲೇ ರೈತರು ಭಾರಿ ನಷ್ಟ ಅನುಭವಿಸಿದ್ದಾರೆ. ಇದರಿಂದ ಚೇತರಿಸಿಕೊಳ್ಳುವ ಮೊದಲೇ ಮತ್ತೊದು ವಾಯುಭಾರ ಕುಸಿತು ರೈತರ ಜೀವನವನ್ನೇ ಸಂಕಷ್ಟಕ್ಕೆ ತಳ್ಳಿದೆ.
ಇತ್ತೀಚಿಗಿನ ಫೆಂಗಲ್ ಚಂಡಮಾರುತದಿಂದ ತಮಿಳುನಾಡು, ಪುದುಚೇರಿ, ಆಂಧ್ರ ಪ್ರದೇಶ, ಕೇರಳ, ಕರ್ನಾಟಕ ಸೇರಿದಂತೆ ಹಲವು ರಾಜ್ಯಗಳು ತತ್ತರಿಸಿತ್ತು. ಚೆನ್ನೈ ವಿಮಾನ ನಿಲ್ದಾಣದ ಸೇವೆಗಳನ್ನು ತಾತ್ಕಾಲಿಕವಾಗಿ ರದ್ದುಪಡಿಸಲಾಗಿತ್ತು.