ರಾಜ್ಯದ ಹಲವೆಡೆ ಭಾರಿ ಮಳೆ: ತಮಿಳುನಾಡಿನಲ್ಲಿ ಶಾಲಾ ಕಾಲೇಜುಗಳಿಗೆ ರಜೆ

By Kannadaprabha NewsFirst Published Jan 9, 2024, 9:57 AM IST
Highlights

ಬಂಗಾಳ ಕೊಲ್ಲಿಯಲ್ಲಿನ ಹವಾಮಾನ ವೈಪರಿತ್ಯದಿಂದಾಗಿ ರಾಜ್ಯದ ಕರಾವಳಿ ಪ್ರದೇಶ ಸೇರಿದಂತೆ ಹಲವು ಕಡೆ ಭಾರಿ ಮಳೆಯಾಗುತ್ತಿದೆ. ತಮಿಳುನಾಡಿನಲ್ಲಿಯೂ ಸೋಮವಾರ ಭಾರಿ ಮಳೆಯಾಗಿದ್ದು, ಹಲವು ಜಿಲ್ಲೆಗಳಲ್ಲಿ ಶಾಲಾ ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ.

ಚೆನ್ನೈ: ಬಂಗಾಳ ಕೊಲ್ಲಿಯಲ್ಲಿನ ಹವಾಮಾನ ವೈಪರಿತ್ಯದಿಂದಾಗಿ ರಾಜ್ಯದ ಕರಾವಳಿ ಪ್ರದೇಶ ಸೇರಿದಂತೆ ಹಲವು ಕಡೆ ಭಾರಿ ಮಳೆಯಾಗುತ್ತಿದೆ. ತಮಿಳುನಾಡಿನಲ್ಲಿಯೂ ಸೋಮವಾರ ಭಾರಿ ಮಳೆಯಾಗಿದ್ದು, ಹಲವು ಜಿಲ್ಲೆಗಳಲ್ಲಿ ಶಾಲಾ ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ. ಅಲ್ಲದೇ ಹಲವು ಜಿಲ್ಲೆಗಳಲ್ಲಿ ಇನ್ನೂ ಒಂದು ವಾರ ಭಾರಿ ಮಳೆ ಸುರಿಯುವುದಾಗಿ ಹವಾಮಾನ ಇಲಾಖೆ ಮುನ್ನೆಚ್ಚರಿಕೆ ನೀಡಿದೆ.

ಚೆನ್ನೈ, ಚೆಂಗಲಪಟ್ಟು, ಕಾಂಚೀಪುರಂ, ವಿಲ್ಲುಪುರಂ, ಕಲ್ಲಕುರಿಚಿ, ಕುಡಲೂರು, ನಾಗಪಟ್ಟಿಣಂ ಮತ್ತು ತಿರುವರೂರ್‌ ಜಿಲ್ಲೆಗಳಲ್ಲಿ ಭಾರಿ ಮಳೆ ಸುರಿದಿದೆ. ಚೆಂಗಲ್‌ಪಟ್ಟು, ರಾಣಿಪೇಟ್‌, ವೆಲ್ಲೂರ್‌, ನಾಗಪಟ್ಟಿಣಂ ಮತ್ತು ಕಲ್ಲಕುರಿಚಿ ಜಿಲ್ಲೆಗಳಲ್ಲಿ ಶಾಲೆಗಳಿಗೆ ರಜೆ ಘೋಷಿಸಲಾಗಿತ್ತು. ಈ ಜಿಲ್ಲೆಗಳಲ್ಲಿ ಸೋಮವಾರ ಬೆಳಗ್ಗೆ 7 ಗಂಟೆಯಿಂದ ಸಾಯಂಕಾಲ 5.30ರವರೆಗೆ ಸರಾಸರಿ 16 ಸೆಂ.ಮೀ.ನಷ್ಟು ಮಳೆಯಾಗಿದೆ.

ಕೊಡಗಿನಲ್ಲಿ 2 ದಿನಗಳಿಂದ ಅಕಾಲಿಕ ಮಳೆ: ಕಾಫಿ, ಭತ್ತ ಸೇರಿದಂತೆ ವಿವಿಧ ಬೆಳೆಗಳು ಹಾಳು, ಸಂಕಷ್ಟದಲ್ಲಿ ರೈತರು!

ಇನ್ನೂ 1 ವಾರ ಮಳೆ

ಬಂಗಾಳ ಕೊಲ್ಲಿಯಲ್ಲಿನ ಹವಾಮಾನ ವೈಪರಿತ್ಯದ ಕಾರಣ ತಮಿಳುನಾಡಿನಲ್ಲಿ ಇನ್ನೂ ಒಂದು ವಾರ ಕಾಲ ಭಾರಿ ಮಳೆ ಸುರಿಯಲಿದೆ ಹವಾಮಾನ ಇಲಾಖೆ ಮುನ್ನೆಚ್ಚರಿಕೆ ನೀಡಿದೆ. ಅಲ್ಲದೇ ಮೀನುಗಾರರಿಗೆ ಕಡಲಿಗೆ ಇಳಿಯದಂತೆ ಸೂಚಿಸಲಾಗಿದೆ. ಇತ್ತೀಚೆಗೆ ತಮಿಳುನಾಡಿನಲ್ಲಿ ಭಾರಿ ಮಳೆ ಸುರಿದಿದೆ. ಇದಕ್ಕೂ ಮೊದಲು ಮಿಚಾಂಗ್‌ ಚಂಡಮಾರುತದಿಂದಾಗಿ ಭಾರಿ ಮಳೆಯಾಗಿತ್ತು

ಮುಂಗಾರು ಮಳೆ ಉತ್ತಮವಾಗಲಿ ಎಂದು ಬೇಡಿಕೊಂಡ ಸಿಎಂ ಸಿದ್ದರಾಮಯ್ಯ

click me!