
ದೆಹಲಿ (ಮೇ.30) ಭಾರಿ ಗಾಳಿ ಮಳೆಗೆ ಮೂರು ಅಂತಸ್ತಿನ ಕಟ್ಟಡ ಕುಸಿತಗೊಂಡ ಘಟನೆ ದಕ್ಷಿಣ ದೆಹಲಿ ಸಾಕೆತ್ ಪ್ರದೇಶದಲ್ಲಿ ನಡೆದಿದೆ. ದೆಹಲಿಯಲ್ಲಿ ಇಷ್ಟು ದಿನ ಬಿಸಿ ಗಾಳಿಯಿಂದ ಜನರು ತತ್ತರಸಿದ್ದರು. ಇದರ ನಡುವೆ ಇಂದು ಸಂಜೆ ವೇಳೆಗೆ ಭಾರಿ ಗಾಳಿ ಮಳೆ ಸುರಿದಿತ್ತು. ಈ ಗಾಳಿ ಮಳೆಗೆ ಮೂರು ಅಂತಸ್ತಿನ ಕಟ್ಟಡ ಸಂಜೆ 7.30ರ ವೇಳೆಗೆ ಕುಸಿದು ಬಿದ್ದಿದೆ. ಮಾಹಿತಿ ತಿಳಿಯುತ್ತಿದ್ದಂತೆ ಅಗ್ನಿಶಾಮಕ ದಳ, ಪೊಲೀಸ್ ಹಾಗೂ ಇತರ ರಕ್ಷಣಾ ತಂಡಗಳು ಸ್ಥಳಕ್ಕೆ ಧಾವಿಸಿದೆ. ಸದ್ಯ ರಕ್ಷಣಾ ಕಾರ್ಯಾಚರಣೆ ಮುಂದುವರಿದಿದೆ. ಹಲವರು ಅವಶೇಷಗಳಡಿ ಸಿಲುಕಿದ್ದಾರೆ.
ಮೆಹರೌಲಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ. ಸಂಜೆ 7.44ರ ವೇಳೆಗೆ ಅಗ್ನಿಶಾಮಕ ದಳಕ್ಕೆ ಮಾಹಿತಿ ಸಿಕ್ಕಿದೆ. ತಕ್ಷಣವೇ ರಕ್ಷಣಾ ಪಡೆ ಹಾಗೂ ಪೊಲೀಸ್ ಸ್ಥಳಕ್ಕೆ ಧಾವಿಸಿದೆ. ಮೂಲಗಳ ಪ್ರಕಾರ ಹಲವರು ಅವಶೇಷಗಳಡಿ ಸಿಲುಕಿದ್ದಾರೆ ಎಂದಿದ್ದಾರೆ. ಹೀಗಾಗಿ ರಕ್ಷಣಾ ಕಾರ್ಯಾಚರಣೆ ತೀವ್ರಗೊಳಿಸಲಾಗಿದೆ. ಸ್ಥಳದಲ್ಲಿ ಆ್ಯಂಬಲೆನ್ಸ್ ವ್ಯವಸ್ಥೆ ಮಾಡಲಾಗಿದೆ. ಅತೀ ದೊಡ್ಡ ಕಟ್ಟಡವಾಗಿದ್ದ ಕಾರಣ ರಕ್ಷಣಾ ಕಾರ್ಯಾಚರಣೆಯಲ್ಲಿ ವಿಳಂಬವಾಗುತ್ತಿದೆ.
ದೆಹಲಿಯಲ್ಲಿ ಇಂದು (ಮೇ.30) ಸಂಜೆ ಭಾರಿ ಗಾಳಿ ಮಳೆ ಸುರಿದಿದೆ. ಹವಾಮಾನ ಇಲಾಖೆ ದೆಹಲಿ ಹಾಗೂ ರಾಷ್ಟ್ರ ರಾಜಧಾನಿ ವ್ಯಾಪ್ತಿಯಲ್ಲಿ ರೆಡ್ ಹಾಗೂ ಆರೋಂಜ್ ಅಲರ್ಟ್ ನೀಡಿತ್ತು. ಇದರಂತೆ ಸಂಜೆ ವೇಳೆಗೆ ಭಾರಿ ಮಳೆಯಾಗಿದೆ. ಮಳೆ ಜೊತೆಗೆ ಗಾಳಿ ಬೀಸಿದ ಕಾರಣ ಕೆಲ ಮರಗಳು ಧರೆಗುರುಳಿದೆ. ಬಿಸಿಸಿನಿಂದ ಕಂಗಾಲಾಗಿದ್ದ ದೆಹಲಿ ಜನತೆಗೆ ಮಳೆರಾಯ ತಂಪರೆದಿದ್ದಾನೆ. ಆದರೆ ಕೆಲೆವೆಡೆ ಅವಾಂತರಗಳು ನಡೆದಿದೆ.
#WATCH | Delhi: Rescue operation is underway after a five storey building collapsed in the Mehrauli police station area. pic.twitter.com/hzQl92FsSp
— ANI (@ANI) May 30, 2026
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ