ಜನ ಸಾಮಾನ್ಯರು ಲಸಿಕೆ ಪಡೆಯಲು ನೆರವಾಗಿ: ಬಿಜೆಪಿ ಸಂಸದರಿಗೆ ಪ್ರಧಾನಿ ಮೋದಿ ಕರೆ!

Published : Mar 11, 2021, 08:17 AM IST
ಜನ ಸಾಮಾನ್ಯರು ಲಸಿಕೆ ಪಡೆಯಲು ನೆರವಾಗಿ: ಬಿಜೆಪಿ ಸಂಸದರಿಗೆ ಪ್ರಧಾನಿ ಮೋದಿ ಕರೆ!

ಸಾರಾಂಶ

ಸರ್ಕಾರ ಆರಂಭಿಸಿರುವ ಐತಿಹಾಸಿಕ ಲಸಿಕೆ ಅಭಿಯಾನ| ಲಸಿಕೆ ಪಡೆಯಲು ನೆರವಾಗಿ: ಬಿಜೆಪಿ ಸಂಸದರಿಗೆ ಪ್ರಧಾನಿ ಮೋದಿ ಕರೆ| ಒಂದು ವರ್ಷದ ಬಳಿಕ ಆಯೋಜಿಸಿದ್ದ ಬಿಜೆಪಿಯ ಸಂಸದೀಯ ಸಭೆ

ನವದೆಹಲಿ(ಮಾ.11): ಸರ್ಕಾರ ಆರಂಭಿಸಿರುವ ಐತಿಹಾಸಿಕ ಲಸಿಕೆ ಅಭಿಯಾನದಲ್ಲಿ ಜನಸಾಮಾನ್ಯರು ಪಾಲ್ಗೊಂಡು ಲಸಿಕೆ ಪಡೆಯಲು ಸಂಸದರು ಅಗತ್ಯ ನೆರವು ನೀಡಬೇಕು ಎಂದು ಪ್ರಧಾನಿ ನರೇಂದ್ರ ಮೋದಿ ಅವರು ಗುರುವಾರ ಕರೆ ನೀಡಿದರು.

ಒಂದು ವರ್ಷದ ಬಳಿಕ ಆಯೋಜಿಸಿದ್ದ ಬಿಜೆಪಿಯ ಸಂಸದೀಯ ಸಭೆ ಉದ್ದೇಶಿಸಿ ಮಾತನಾಡಿದ ಪ್ರಧಾನಿ ಮೋದಿ ಅವರು, ನಾಗರಿಕರು ಲಸಿಕೆ ಪಡೆಯಲು ಲಸಿಕಾ ಕೇಂದ್ರಕ್ಕೆ ವಾಹನ ಸೌಲಭ್ಯ ಸೇರಿದಂತೆ ಸಾಧ್ಯವಾದಷ್ಟುನೆರವನ್ನು ಸಂಸದರು ಒದಗಿಸಬೇಕು ಎಂದರು.

ಇದೇ ವೇಳೆ ದೇಶವು 75ನೇ ಸ್ವಾತಂತ್ರ್ಯೋತ್ಸವಕ್ಕೆ ಅಣಿಯಾಗುತ್ತಿದ್ದು, ಈ ಅಮೃತಮಹೋತ್ಸವದ ಅದ್ಧೂರಿ ಆಚರಣೆಯಲ್ಲಿ ಭಾಗವಹಿಸಬೇಕು ಎಂದು ಜನಪ್ರತಿನಿಧಿಗಳಲ್ಲಿ ಮನವಿ ಮಾಡಿದರು. ಹಾಗೆಯೇ ಅಮೃತ ಮಹೋತ್ಸವವನ್ನು ದೇಶದಾದ್ಯಂತ 75 ಕಡೆಗಳಲ್ಲಿ 75 ವಾರಗಳ ಕಾರ ಆಚರಿಸಲು ನಿರ್ಧರಿಸಲಾಗಿದೆ. ಮಾ.12ರಿಂದ ಗುಜರಾತಿನ ಸಬರಮತಿಯಿಂದಲೇ ಅದು ಆರಂಭವಾಗಲಿದೆ ಎಂದು ಮಾಹಿತಿ ನೀಡಿದರು ಎಂದು ಸಂಸದೀಯ ಸಚಿವ ಪ್ರಹ್ಲಾದ್‌ ಜೋಶಿ ಅವರು ತಿಳಿಸಿದರು.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

click me!

Recommended Stories

ಎರಡು ಮಕ್ಕಳ ತಾಯಿ ಸಹವಾಸ ಮಾಡಿ ಮಸಣ ಸೇರಿದ ಯುವಕ: ತಾಯಿಯ ಲೀವಿಂಗ್ ಪಾರ್ಟನರ್ ಕತೆ ಮುಗಿಸಿದ ಅಮ್ಮ ಮಕ್ಕಳು
Viral Video: ಮಾಜಿ ಸಿಜೆಐ ಬಿಆರ್‌ ಗವಾಯಿಗೆ ಶೂ ಎಸೆದಿದ್ದ ವಕೀಲ ರಾಕೇಶ್‌ ಕಿಶೋರ್‌ಗೆ ಕೋರ್ಟ್‌ನಲ್ಲೇ ಚಪ್ಪಲಿಯಿಂದ ಹಲ್ಲೆ!