
ಮುಂಬೈ(ಮಾ.17): ಉದ್ಯಮಿ ಮುಕೇಶ್ ಅಂಬಾನಿ ಮನೆ ಸಮೀಪದಲ್ಲಿ ಬಾಂಬ್ ಇಟ್ಟ ಪ್ರಕರಣದ ತನಿಖೆ ಪ್ರಗತಿಯಲ್ಲಿದೆ. ತನಿಖೆಯಲ್ಲಿ ಹೊಸ ಹೊಸ ಮಾಹಿತಿಗಳು ಸ್ಫೋಟಗೊಳ್ಳುತ್ತಿದೆ. ಇದರ ಬೆನ್ನಲ್ಲೇ ಮುಂಬೈ ಪೊಲೀಸ್ ಇಲಾಖೆಯಲ್ಲಿ ಮಹತ್ತರ ಬದಲಾವಣೆ ಆಗಿದೆ. ಮುಂಬೈ ಪೊಲೀಸ್ ಆಯುಕ್ತ ಪರಮ್ ಬೀರ್ ಸಿಂಗ್ ಅವರನ್ನು ವರ್ಗಾವಣೆ ಮಾಡಲಾಗಿದೆ.
ಅಂಬಾನಿ ಮನೆ ಸನಿಹದ ಬಾಂಬ್ ಪ್ರಕರಣ: ಅರೆಸ್ಟ್ ಆಗಿದ್ದ ಪೊಲೀಸ್ ಸಚಿನ್ ವಾಜೆ ಅಮಾನತು!.
ಮುಂಬೈ ಪೊಲೀಸ್ ಕಮೀಶನರ್ ಪರಮ್ ಬೀರ್ ಸಿಂಗ್ ಅವರನ್ನು ಹೋಮ್ ಗಾರ್ಡ್ ಇಲಾಖೆಗೆ ವರ್ಗಾವಣೆ ಮಾಡಲಾಗಿದೆ. ಇದೀಗ ಪರಮ್ ಬೀರಿ ಸಿಂಗ್ ಅವರಿಂದ ತೆರವಾದ ಮುಂಬೈ ಪೊಲೀಸ್ ಆಯುಕ್ತ ಸ್ಥಾನಕ್ಕೆ ಇದೀಗ ಹೇಮಂತ್ ನಗ್ರಾಲೆ ಅವರನ್ನು ನೇಮಕ ಮಾಡಲಾಗಿದೆ.
ಅಂಬಾನಿ ಮನೆ ಸಮೀದಲ್ಲಿನ ಸ್ಫೋಟಕ ಪ್ರಕರಣ ಮಹಾರಾಷ್ಟ್ರದ ಮೈತ್ರಿ ಸರ್ಕಾರವನ್ನು ಇನ್ನಿಲ್ಲದ ಸಂಕಷ್ಟಕ್ಕೆ ಸಿಲುಕಿಸಿದೆ. ಇದರ ಬೆನ್ನಲ್ಲೇ ಬಾಂಬ್ ಪ್ರಕರಣದಲ್ಲಿ ಮುಂಬೈ ಪೊಲೀಸ್ ಅಧಿಕಾರಿ ಸಚಿನ್ ವಾಜೆ ಬಂಧನಕ್ಕೊಳಗಾಗಿ ಇದೀಗ ಅಮಾನತುಗೊಂಡಿದ್ದಾರೆ. ತೀವ್ರ ಹಿನ್ನಡೆ ಅನುಭವಿಸಿರುವ ಉದ್ಧವ್ ಠಾಕ್ರೆ ಸರ್ಕಾರ ಇದೀಗ ಪೊಲೀಸ್ ಆಯುಕ್ತರನ್ನು ವರ್ಗಾವಣೆ ಮಾಡಿದೆ.
ಅಂಬಾನಿ ಮನೆ ಸಮೀಪದ ಬಾಂಬ್ ಪ್ರಕರಣವನ್ನು ಪರಮ್ ಬೀರ್ ಸಿಂಗ್ ಸರಿಯಾಗಿ ನಿರ್ವಹಿಸಿಲ್ಲ ಅನ್ನೋದು ಸರ್ಕಾರದ ನಿಲುವು. ಹೀಗಾಗಿ ಈ ಪ್ರಕರಣ ಸರ್ಕಾರಕ್ಕೂ ತೀವ್ರ ಹಿನ್ನಡೆ ತಂದಿದೆ. ಆದರೆ ಆಯುಕ್ತರ ವರ್ಗಾವಣೆಗೆ ಟೀಕೆಗಳು ಕೇಳಿಬಂದಿದೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ