
ನವದೆಹಲಿ: ಕರ್ನಾಟಕದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ನೇತೃತ್ವದ ರಾಜ್ಯ ಸರ್ಕಾರ, ಗುತ್ತಿಗೆದಾರರಿಂದ ಶೇ.40ರಷ್ಟು ಲಂಚ ಪಡೆಯುತ್ತಿದೆ ಎಂದು ಆರೋಪಿಸಲು ಕಾಂಗ್ರೆಸ್ ಆರಂಭಿಸಿದ್ದ ಪೇಸಿಎಂ ಅಭಿಯಾನವನ್ನು ಇದೀಗ ಪಕ್ಷದ ನಾಯಕ ರಾಹುಲ್ ಗಾಂಧಿ, ಪ್ರಧಾನಿ ನರೇಂದ್ರ ಮೋದಿ ವಿರುದ್ಧವೇ ಬಳಸಿದ್ದಾರೆ.
ಕೇಂದ್ರ ಸರ್ಕಾರ ಅಪನಗದೀಕರಣ ಜಾರಿಗೊಳಿಸಿ ಮಂಗಳವಾರಕ್ಕೆ 6 ವರ್ಷ ತುಂಬಿದ ಹಿನ್ನೆಲೆಯಲ್ಲಿ ಟ್ವೀಟ್ ಮಾಡಿರುವ ರಾಹುಲ್ ಗಾಂಧಿ, ‘ಅಪನಗದೀಕರಣ ಎಂಬುದು ದೇಶದ ಸಣ್ಣ ಮತ್ತು ಮಧ್ಯಮ ಉದ್ಯಮಗಳನ್ನು ನಿರ್ನಾಮ ಮಾಡಿ, ದೇಶದ ಆರ್ಥಿಕತೆಯನ್ನು ತಮ್ಮ ಶ್ರೀಮಂತ ಸ್ನೇಹಿತರ ಕೈಗೆ ಒಪ್ಪಿಸಲು ‘ಪೇಪಿಎಂ’ ನಡೆಸಿದ ಉದ್ದೇಶಪೂರ್ವಕ ಕೃತ್ಯ’ ಎಂದು ವ್ಯಂಗ್ಯವಾಡಿದ್ದಾರೆ.
No Road No Tax: ಪೇಸಿಎಂ ನಂತರ ಭಿತ್ತಿ ಪತ್ರಗಳನ್ನು ಅಂಟಿಸಿ ಕಾಂಗ್ರೆಸ್‌ನಿಂದ ಹೊಸ ಅಭಿಯಾನ
ಕಳೆದ ತಿಂಗಳು ಕರ್ನಾಟಕ ಹಲವು ಕಡೆ ಕಾಂಗ್ರೆಸ್ ಕಾರ್ಯಕರ್ತರು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಇರುವ ಪೇಸಿಎಂ ಪೋಸ್ಟರ್‌ಗಳನ್ನು ಅಂಟಿಸಿತ್ತು. ಈ ಬಗ್ಗೆ ಪೊಲೀಸರು ಪ್ರಕರಣ ಕೂಡಾ ದಾಖಲಿಸಿಕೊಂಡಿದ್ದರು.
ಕಾಂಗ್ರೆಸ್ ಕಾರ್ಯಕರ್ತರ ವಿರುದ್ಧದ ಪೇಸಿಎಂ ಮೊಕದ್ದಮೆ ವಜಾ
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ