
ತಿರುವನಂತಪುರಂ(ಜು.20) ಕರ್ನಾಟಕದಲ್ಲಿ ಡೆಂಗ್ಯೂ ಆತಂಕ ಹೆಚ್ಚಾಗುತ್ತಿದ್ದಂತೆ ಕೇರಳದಲ್ಲಿ ಡೆಂಗ್ಯೂ ಜೊತೆಗೆ ಮಾರಣಾಂತಿಕ ನಿಫಾ ವೈರಸ್ ಆತಂಕ ಹೆಚ್ಚಾಗಿದೆ. ಇದೀಗ 14 ವರ್ಷದ ಬಾಲಕನಲ್ಲಿ ನಿಫಾ ವೈರಸ್ ಪತ್ತೆಯಾಗಿದೆ. ಈ ಕುರಿತು ಕೇರಳ ಆರೋಗ್ಯ ಸಚಿವೆ ವೀಣಾ ಜಾರ್ಜ್ ಸ್ಪಷ್ಟಪಡಿಸಿದ್ದಾರೆ. ಮಲಪ್ಪುರಂ ಜಿಲ್ಲೆಯಲ್ಲಿ ನಿಫಾ ವೈರಸ್ ಪತ್ತೆಯಾಗಿದೆ. ಇದರ ಪರಿಣಾಮ ಇದೀಗ ಹೈ ಅಲರ್ಟ್ ಘೋಷಿಸಲಾಗಿದೆ. ಬಾಲಕನ ಮೊದಲ ಸಂಪರ್ಕಿತರನ್ನು ಪತ್ತೆ ಹಚ್ಚೆ ಕ್ವಾರಂಟೈನ್ ಮಾಡಲು ಸೂಚಿಸಲಾಗಿದೆ.
ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ 14 ವರ್ಷದ ಬಾಲಕನ ಮಾದರಿಗಳನ್ನು ಪುಣೆ ಎನ್‌ಐವಿ ಕೇಂದ್ರಕ್ಕೆ ಕಳುಹಿಸಿಕೊಡಲಾಗಿದೆ. ಇದೀಗ ವರದಿ ಬಂದಿದ್ದು, ನಿಫಾ ವೈರಸ್ ದೃಢಪಟ್ಟಿದೆ. ನಿಫಾ ವೈರಸ್ ಖಚಿತವಾಗುತ್ತಿದ್ದಂತ ಆರೋಗ್ಯ ಇಲಾಖೆ ಅಲರ್ಟ್ ಆಗಿದೆ. ಬಾಲಕನನ್ನು ಇದೀಗ ಕೋಝಿಕೋಡ್ ಸರ್ಕಾರಿ ಮೆಡಿಕಲ್ ಕಾಲೇಜಿಗೆ ಸ್ಥಳಾಂತರಿಸಲು ಸೂಚಿಸಲಾಗಿದೆ. ಇದೀಗ ಬಾಲಕನ ಸಂಪರ್ಕಿತರನ್ನು ಪತ್ತೆ ಹಚ್ಚಲಾಗುತ್ತಿದೆ. ಪೋಷಕರು ಸೇರಿದಂತೆ ಮೊದಲ ಸಂಪರ್ಕಿತರನ್ನು ಈಗಾಗಲೇ ಐಸೋಲೇಶನ್ ಮಾಡಲಾಗಿದೆ. ಇವರ ಮಾದರಿಗಳನ್ನು ಸಂಗ್ರಹಿಸಿ ಪುಣೆಗೆ ಕಳುಹಿಸಲಾಗಿದೆ.
ಕೋವಿಡ್‌ನಿಂದ ಭಾರತೀಯರ ಅಯಸ್ಸು 2.6 ವರ್ಷ ಕಡಿತ ವರದಿಗೆ ಆರೋಗ್ಯ ಇಲಾಖೆ ಹೇಳಿದ್ದೇನು?
ಇತ್ತ ಬಾಲಕನ ಆರೋಗ್ಯ ಪರಿಸ್ಥಿತಿ ಕುರಿತು ವೀಣಾ ಜಾರ್ಜ್ ಮಾಹಿತಿ ನೀಡಿದ್ದಾರೆ. 14 ವರ್ಷದ ಬಾಲಕನಲ್ಲಿ ನಿಫಾ ವೈರಸ್ ಪತ್ತೆಯಾಗಿದೆ. ಸದ್ಯ ಬಾಲಕನಿಗೆ ವೆಂಟಿಲೇಟರ್ ಬೆಂಬಲದೊಂದಿಗೆ ಚಿಕಿತ್ಸೆ ನೀಡಲಾಗುತ್ತಿದೆ. ಆಸ್ಪತ್ರೆ ಸುತ್ತು ಮುತ್ತ, ಸಾರ್ವಜನಿಕ ಸ್ಥಳಗಳಲ್ಲಿ ಮಾಸ್ಕ್ ಧರಿಸುವಂತೆ ಆರೋಗ್ಯ ಸಚಿವೆ ಮನವಿ ಮಾಡಿದ್ದಾರೆ. ಜನರು ಯಾವದೇ ಭಯ ಪಡುವ ಅಗತ್ಯವಿಲ್ಲ. ಪಕ್ಷಿಗಳು ಕಚ್ಚಿರುವ ಹಣ್ಣುಗಳನ್ನು ಬಳಸಬಾರದು. ಹಣ್ಣುಗಳನ್ನು ತೊಳೆದು ಉಪಯೋಗಿಸಿ. ನಿಫಾ ವೈರಸ್ ರೋಗ ಲಕ್ಷಣಗಳನ್ನು ಕುರಿತು ಜನರಿಗೆ ಅರಿವು ಮೂಡಿಸಲು ಸೂಚಿಸಲಾಗಿದೆ.
ಮಲಪ್ಪುರಂ ಜಿಲ್ಲೆಯ ಕೆಲ ಆಸ್ಪತ್ರೆಗಳಲ್ಲಿ ದಾಖಲಾದ ರೋಗಿಗಳ ಮಾದರಿಗಳನ್ನು ಸಂಗ್ರಹಿಸಲು ಸೂಚಿಸಲಾಗಿದೆ. ಸಾರ್ವಜನಿಕರು ಎಚ್ಚರಿಕೆ ವಹಿಸುವಂತೆ ಸೂಚಿಸಲಾಗಿದೆ. ಇನ್ನು ಕೇರಳಕ್ಕೆ ನಿಫಾ ವೈರಸ್ ಹೊಸದಲ್ಲ. 2018ರಲ್ಲಿ ಮೊದಲ ಬಾರಿಗೆ ಕೇರಳದಲ್ಲಿ ನಿಫಾ ವೈರಸ್ ದಾಳಿ ಮಾಡಿತ್ತು. ಈ ವೇಳೆ ಕೋಲಾಹಲ ಸೃಷ್ಟಿಯಾಗಿತ್ತು. 2018, 2021 ಹಾಗೂ 2023ರಲ್ಲಿ ನಿಫಾ ವೈರಸ್ ಅಬ್ಬರಿಸಿತ್ತು. 2019ರಲ್ಲಿ ಎರ್ನಾಕುಲಂ ಜಿಲ್ಲೆಯಲ್ಲೂ ನಿಫಾ ವೈರಸ್ ಕಾಣಿಸಿಕೊಂಡಿತ್ತು.
ರಾಮನಗರದಲ್ಲಿ ಡೆಂಘೀ ಜ್ವರಕ್ಕೆ 19 ವರ್ಷದ ಕಾಲೇಜು ಯುವತಿ ಬಲಿ
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ