ಪ್ರತಿಭಟನೆ ತಯಾರಿ ನಡುವೆ ಅಭಿಜಿತ್ ದೀಪ್ಕೆ ಸೇರಿ ಕಾಕ್ರೋಚ್ ನಾಯಕರಿಗೆ ಹೈಕೋರ್ಟ್ ನೋಟಿಸ್

Published : Sep 25, 2026, 05:25 PM IST
cjp protest ai morphed photo woman fir jantar mantar delhi police 2026

ಸಾರಾಂಶ

ಗ್ಯಾನೇಶ್ ಕುಮಾರ್ ರಾಜೀನಾಮೆಗೆ ಆಗ್ರಹಿಸಿ ಪ್ರತಿಭಟನೆಗೆ ತಯಾರಿ ನಡೆಸುತ್ತಿರುವ ಸಿಜೆಪಿ ನಾಯಕರಿಗೆ ದೆಹಲಿ ಹೈಕೋರ್ಟ್ ನೋಟಿಸ್ ನೀಡಿದೆ. ಪ್ರಧಾನಿ ಮೋದಿ ಜೊತೆ ಮಹಿಳೆ ಫೋಟೋ ಮಾರ್ಫ್ ಮಾಡಿ ಹರಿಬಿಟ್ಟ ಸಂಬಂಧ ನೊಟಿಸ್ ನೀಡಿದೆ.

ದೆಹಲಿ (ಸೆ.25) ಮತದಾರರ ಪಟ್ಟಿ ಪರಿಷ್ಕರಣೆ, ಮತದಾರರ ಪಟ್ಟಿ ಡಿಲೀಟ್ ಸೇರಿದಂತೆ ಕೆಲ ಗಂಭೀರ ಆರೋಪಗಳು ತೀವ್ರಗೊಳ್ಳುತ್ತಿದೆ. ರಾಹುಲ್ ಗಾಂಧಿ ಸೇರಿದಂತೆ ಪ್ರತಿಪಕ್ಷಗಳು ಕೇಂದ್ರ ಬಿಜೆಪಿ ಸರ್ಕಾರ ಹಾಗೂ ಚುನಾವಣಾ ಆಯೋಗದ ಮುಖ್ಯಸ್ಥರನ್ನು ಇಕ್ಕಟ್ಟಿಗೆ ಸಿಲುಕಿಸಿದೆ. ಇತ್ತ ಕಾಕ್ರೋಚ್ ಜನತಾ ಪಾರ್ಟಿ ನಾಯಕರು ರಾಜೀನಾಮೆಗೆ ಆಗ್ರಹಿಸಿದ್ದಾರೆ. ರಾಜೀನಾಮೆ ನೀಡದಿದ್ದರೆ ಅಕ್ಟೋಬರ್ 2 ರಿಂದ ಪ್ರತಿಭಟನೆ ನಡೆಸಲು ಮುಂದಾಗಿದೆ. ಈ ತಯಾರಿ ನಡುವೆ ಅಭಿಜಿತ್ ದೀಪ್ಕೆ ಸೇರಿದಂತೆ ಸಿಜೆಪಿ ನಾಯಕರಿಗೆ ದೆಹಲಿ ಹೈಕೋರ್ಟ್ ನೋಟಿಸ್ ನೀಡಿದೆ.

ದೆಹಲಿ ಹೈಕೋರ್ಟ್ ನೋಟಿಸ್ ಯಾಕೆ?

ಇತ್ತೀಚೆಗೆ ನೀಟ್ ಪ್ರತಿಭಟನೆ ಸಂಬಂಧ ಕಾಕ್ರೋಚ್ ಜನತಾ ಪಾರ್ಟಿ ನಡೆಸಿದ ವಿದ್ಯಾರ್ಥಿ ಪ್ರತಿಭಟನೆ ವೇಳೆ ಪ್ರಧಾನಿ ನರೇಂದ್ರ ಮೋದಿ ಫೋಟೋ ಜೊತೆಗೆ ಡೀಪ್ ಫೇಕ್ ಫೋಟೋ ಸೃಷ್ಟಿಸಿ ಸೋಶಿಯಲ್ ಮೀಡಿಯಾದಲ್ಲಿ ಹರಿಬಿಡಲಾಗಿತ್ತು. ಈ ಸಂಬಂಧ ಸಲ್ಲಿಕೆಯಾಗಿದ್ದ ಅರ್ಜಿ ವಿಚಾರಣೆ ನಡೆಸಿದ ದೆಹಲಿ ಹೈಕೋರ್ಟ್, ಇದು ಮಹಿಳೆಯೊಬ್ಬರ ಮಾತ್ರ ಪ್ರಕರಣವಲ್ಲ, ಇದು ದೇಶದ ಪ್ರಧಾನ ಮಂತ್ರಿಗೂ ಸಂಬಂಧಿಸಿದೆ. ಹೀಗಾಗಿ ಈ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸುವುದಾಗಿ ಹೇಳಿದೆ. ಈ ಸಂಬಂಧ ಸಿಜೆಪಿ ನಾಯಕರಿಗೆ ನೋಟಿಸ್ ನೀಡಿದೆ.

24 ಗಂಟೆಯೊಳಗೆ ಡಿಲೀಟ್ ಆದೇಶ

ಸೋಶಿಯಲ್ ಮೀಡಿಯಾ ಪ್ಲಾಟ್‌ಫಾರ್ಮ್‌‍‌ಗಳಾದ ಫೇಸ್‌ಬುಕ್ ಸೇರಿದಂತೆ ಇತರ ವೇದಿಕೆಗಳಲ್ಲಿರುವ ಪ್ರಧಾನಿ ಮೋದಿ ಹಾಗೂ ಮಹಿಳೆಯ ಡೀಪ್ ಫೇಕ್ ಫೋಟೋ ಹಾಗೂ ಪೋಸ್ಟರ್ 24 ಗಂಟೆಯೊಳಗೆ ಡಿಲೀಟ್ ಮಾಡುವಂತೆ ಹೈಕೋರ್ಟ್ ಆದೇಶ ನೀಡಿದೆ.

ಸಿಜೆಪಿ ಪ್ರತಿಭಟನೆ ವೇಳೆ ಈ ವಿವಾದಿತ ಪೋಸ್ಟರ್ ಪ್ರದರ್ಶಿಸಲಾಗಿತ್ತು. ಬಳಿಕ ಇದೇ ಪೋಸ್ಟರನ್ನು ಸೋಶಿಯಲ್ ಮೀಡಿಯಾಗಳಲ್ಲಿ ಪೋಸ್ಟ್ ಮಾಡಲಾಗಿತ್ತು ಎಂದು ಮಹಿಳೆಯೊಬ್ಬರು ದೂರು ನೀಡಿದ್ದರು. ಈ ದೂರನ್ನು ಗಂಭೀರವಾಗಿ ಪರಿಗಣಿಸಿರುವ ದೆಹಲಿ ಹೈಕೋರ್ಟ್ ಕಾಕ್ರೋಚ್ ಜನತಾ ಪಾರ್ಟಿ ಅಭಿಜಿತ್ ದೀಪ್ಕೆ, ಅಶುತೋಶ್ ರಾಂಕ ಹಾಗೂ ರತನ್ ಸಿಂಗ್‌ಗೆ ದೆಹಲಿ ಹೈಕೋರ್ಟ್ ಉತ್ತರಿಸುವಂತೆ ನೋಟಿಸ್ ನೀಡಿದೆ.

ಮಹಿಳೆಗೆ ರಕ್ಷಣೆ ನೀಡುವಂತೆ ದೆಹಲಿ ಪೊಲೀಸರಿಗೆ ಸೂಚಿಸಿದೆ. ಇದೇ ವೇಳೆ ಅರ್ಜಿ ಸಲ್ಲಿಸಿದ ಮಹಿಳೆಗೆ ರಕ್ಷಣೆ ಒದಗಿಸಲು ದೆಹಲಿ ಪೊಲೀಸರಿಗೆ ಸೂಚನೆ ನೀಡಿದೆ. ಈ ಪ್ರಕರಣ ಸಂಬಂಎಧ 2 ವಾರದಲ್ಲಿ ಸಂಪೂರ್ಣ ವರದಿ ನೀಡುವಂತೆ ಪೊಲೀಸರಿಗೆ ಸೂಚನೆ ನೀಡಲಾಗಿದೆ. ಇದೇ ವೇಳೆ ಅರ್ಜಿ ಸಲ್ಲಿಸಿದ ಮಹಿಳೆ ಪ್ರತಿಭಟನಾ ಆಯೋಜಕರಿಗೆ ಪರಿಹಾರ ಕೋರಲು ಅರ್ಹ ಎಂದಿದೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

Read more Articles on
click me!

Recommended Stories

ಭಾರತದ ಟೆಕ್ ಸ್ಟಾರ್ಟ್‌ಅಪ್ ಫಂಡಿಂಗ್ 2026: ದೇಶದ ಎಲ್ಲಾ ಪ್ರತಿಸ್ಪರ್ಧಿ ನಗರ ಹಿಂದಿಕ್ಕಿ ಬೆಂಗಳೂರಿಗೆ ಅಗ್ರಸ್ಥಾನ!
ಜನರ ನಂಬಿಕೆ ಉಳಿಸಿ, ತಪ್ಪು ನಡೆದಿಲ್ಲವೆಂದು ದೃಢಪಡಿಸಿ, ಚುನಾವಣಾ ಆಯೋಗಕ್ಕೆ ಕೇಂದ್ರ ಸಚಿವ ಚಿರಾಗ್ ಪಾಸ್ವಾನ್ ಸಲಹೆ!