
ನವದೆಹಲಿ(ಜು.06): ಕೊರೋನಾ ಎರಡನೇ ಅಲೆ ಇಳಿಕೆ ಆದ ಬೆನ್ನಲ್ಲೇ ಪ್ರವಾಸಿ ತಾಣಗಳತ್ತ ಜನರು ಮುಗಿಬಿದ್ದಿದ್ದಾರೆ. ಅದರಲ್ಲೂ ಉತ್ತರ ಭಾರತದ ಹಲವು ರಾಜ್ಯಗಳಲ್ಲಿ ಭಾರೀ ಬಿಲಿಸಿನ ಅಬ್ಬರ ಇರುವ ಕಾರಣ, ಬಹಳಷ್ಟು ಜನರು ಪ್ರಸಿದ್ಧ ಪ್ರವಾಸಿ ತಾಣಗಳನ್ನು ಹೊಂದಿರುವ ಹಿಮಾಚಲ ಪ್ರದೇಶ, ಉತ್ತರಾಖಂಡಕ್ಕೆ ದೌಡಾಯಿಸತೊಡಗಿದ್ದಾರೆ.
ಈ ಎರಡೂ ರಾಜ್ಯಗಳಲ್ಲಿ ಪ್ರವಾಸಿ ತಾಣಗಳನ್ನು ಪ್ರವಾಸಿಗರಿಗೆ ಮುಕ್ತಗೊಳಿಸಲಾಗಿದೆ. ಹೀಗಾಗಿ ಪ್ರವಾಸಿಗರ ಸ್ವರ್ಗ ಎನಿಸಿಕೊಂಡಿರುವ ಮನಾಲಿ, ಶಿಮ್ಲಾ ಹಾಗೂ ಕುಫ್ರಿ, ಡಾಲ್‌ಹೌಸಿ ಪ್ರವಾಸಿಗರಿಂದ ತುಂಬಿ ತುಳುಕುತ್ತಿದೆ. ಉತ್ತರಾಖಂಡದ ಪ್ರಮುಖ ಪ್ರವಾಸಿ ತಾಣ ಮಸ್ಸೂರಿಯಲ್ಲಿಯೂ ಜನ ಜಂಗುಳಿ ಕಂಡುಬರುತ್ತಿದೆ.
ಜನರು ಸಾಮಾಜಿಕ ಅಂತರ ಇಲ್ಲದೇ, ಕೋವಿಡ್ ನಿಯಮ ಪಾಲಿಸದೇ ಪ್ರವಾಸಿತಾಣಗಳಲ್ಲಿ ಓಡಾಡುತ್ತಿದ್ದಾರೆ. ಭಾರೀ ಸಂಖ್ಯೆಯಲ್ಲಿ ಆಗಮಿಸುತ್ತಿರುವ ಪ್ರವಾಸಿಗರನ್ನು ನಿಯಂತ್ರಿಸುವುದು ಸರ್ಕಾರಗಳಿಗೆ ತಲೆನೋವಾಗಿ ಪರಿಣಮಿಸಿದೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ